ಕನಕಪುರ ಗಲಾಟೆ: ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಜಾಡಿಸಿದ ಡಿಕೆ ಶಿವಕುಮಾರ್

ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನಡುವಿನ ಮಾತಿನ ಸಮರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದೀಗ ಡಿಕೆ ಶಿವಕುಮಾರ್ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕುಮಾರಸ್ವಾಮಕಿಗೆ ಕಾಮನ್​ ಸೆನ್ಸ್ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಕನಕಪುರ ಗಲಾಟೆ: ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಜಾಡಿಸಿದ ಡಿಕೆ ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 25, 2023 | 10:55 AM

ಮೈಸೂರು, (ಅಕ್ಟೋಬರ್ 25): ಸದ್ಯ ರಾಮನಗರ ಜಿಲ್ಲೆಯಲ್ಲಿರುವ ಕನಕಪುರವನ್ನ ಬೆಂಗಳೂರಿಗೆ ಸೇರಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರ ಶಾಸಕರಾಗಿರೋ ಡಿಕೆ, ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸೋ ವಾಗ್ದಾನ ಮಾಡಿದ್ದಾರೆ. ಆದ್ರೆ, ಇದಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ತೀವ್ರ ವಿರೋಧಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್ ಈ ನಿರ್ಧಾರದ ಹಿಂದೆ ಬೇನಾಮಿ ಆಸ್ತಿ ಬಾಂಬ್ ಸಿಡಿಸಿದ್ದಾರೆ. ಇದೀಗ ಇದಕ್ಕೆ ಕೆಂಡಾಮಂಡಲರಾಗಿರುವ ಡಿಕೆಶಿ, ಕುಮಾರಸ್ವಾಮಿ ಅವರು ಸಿಎಂ ಆದವರು ಪ್ರಜ್ಞಾವಂತರು ಅಂದುಕೊಂಡಿದ್ದೆ. ಆದ್ರೆ, ಅವರಿಗೆ ಕಾಮನ್ ಸೆನ್ಸ್ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಜೊತೆಗೆ ಕನಕಪುರ ಕ್ಷೇತ್ರವನ್ನ ಬೆಂಗಳೂರಿಗೆ ಸೇರಿಸುವ ವಿಚಾರಕ್ಕೆ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಮನಗರ, ಮಾಗಡಿ, ಚನ್ನಪಟ್ಟಣ, ಕನಕಪುರ ಜನ ಆಸ್ತಿಗಳನ್ನ ಮಾರಬೇಡಿ. ತಮ್ಮ ಭೂಮಿಗಳನ್ನು ಮಾರಿಕೊಂಡು ಹೋಗದಂತೆ ಜನತೆಗೆ ಹೇಳಿದ್ದೇನೆ. ಮುಂದಿನ ದಿನಗಳಲ್ಲಿ ಭೂಮಿಗೆ ಒಳ್ಳೆಯ ಬೆಲೆ ಬರಲಿದೆ ಎಂದು ಹೇಳಿದ್ದೇನೆ. ರಾಮನಗರ ಜಿಲ್ಲೆಯ ಅನೇಕ ನಾಯಕರು ಉನ್ನತ ಸ್ಥಾನಗಳಲ್ಲಿ ಕೆಲಸ ಮಾಡಿದ್ದಾರೆ. ಅವರೆಲ್ಲ ಬೆಂಗಳೂರು ವ್ಯಾಪ್ತಿಯ ರಾಮನಗರದವರು.ಇದರ ಇತಿಹಾಸ, ದಾಖಲೆಗಳನ್ನ ಕುಮಾರಸ್ವಾಮಿ ಒಮ್ಮೆ ಓದಿಕೊಳ್ಳಬೇಕು ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: ಆಸ್ತಿ ಮೌಲ್ಯ ಹೆಚ್ಚಿಸಿ ಖಜಾನೆ ವೃದ್ಧಿಸುವ ಹುನ್ನಾರ: ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಕಿಡಿ

ಈ‌ ದೇಶಕ್ಕೆ ವಿದ್ಯಾವಂತರು ಇಲ್ಲಿದಿದ್ದರೂ, ಬುದ್ದಿವಂತರು ಇಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರು ಸಿಎಂ ಆದವರು ಪ್ರಜ್ಞಾವಂತರು ಅಂದುಕೊಂಡಿದ್ದೆ. ಕುಮಾರಸ್ವಾಮಿ ಕಾಮನ್ ಸೆನ್ಸ್ ಇಲ್ಲ. ಅವರ ತಂದೆಯವರ ಬಳಿ ಕೇಳಿ ತಿಳಿದುಕೊಳ್ಳಬೇಕು. ಇಡೀ ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಿದ್ದು. ರಾಮನಗರ ಜಿಲ್ಲೆಗೆ ಏನು ಮಾಡಬೇಕು ಎಂಬ ನೀಲಿ ನಕ್ಷೆ ಇದೆ. ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳಲ್ಲ. ಬಿಜೆಪಿ ಎಂಎಲ್​ಸಿ ರವಿಕುಮಾರ್ ತಲೆ ಇಲ್ಲದೆ ಮಾತಾಡಿದ್ದಾರೆ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಏನೇನೋ ಹೇಳುತ್ತಾರೆ ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ ಅದನ್ನ ಏನು ಮಾಡುತ್ತೇನೆ ಎನ್ನುವುದೇ ಮುಖ್ಯ. ಹನುಮಂತಯ್ಯ, ಕೆಂಪೇಗೌಡರು, ಶಿವಕುಮಾರ ಸ್ವಾಮೀಜಿ ರಾಮನಗರದವರು. ಅಂದರೆ ಅವರು ಬೆಂಗಳೂರಿನವರು, ಇದನ್ನ ಅರ್ಥ ಮಾಡಿಕೊಳ್ಳಬೇಕು. ಬೆಂಗಳೂರಿನ ಕಸ ನಮ್ಮಲ್ಲಿ ಹೋಗುತ್ತಿದೆ. ಕೋವಿಡ್ ನಂತರ ನಮ್ಮ ಜನ ಭೂಮಿ ಮಾರಿಕೊಳ್ಳುತ್ತಿದ್ದಾರೆ. ಇದೆಲ್ಲ ತಪ್ಪಬೇಕು. ರಾಮನಗರ ಜಿಲ್ಲೆ ಮಾಡಿದ ಕ್ರೆಡಿಟ್ ಕುಮಾರಸ್ವಾಮಿ ಇಟ್ಟುಕೊಳ್ಳಲಿ. ಅರ್ಜೆಟ್ ಬೇಡ, ಈಗ ಚರ್ಚೆ ಮಾಡುತ್ತಿದ್ದೀರಿ. ಅದಕ್ಕೊಂದು ಬ್ಲೂ ಪ್ರಿಂಟ್ ನಾವು ರೆಡಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ