AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಸುರೇಶ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧಿಸಿದರೂ ಚಿಂತಿಲ್ಲ: ಮಂಗಳೂರಿನಲ್ಲಿ ಡಿಕೆ ಶಿವಕುಮಾರ್ ಖಡಕ್ ನುಡಿ

ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೂ ಮುನ್ನ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ ವಿರುದ್ಧ ಜೆಡಿಎಸ್​​ನಿಂದ ಕುಮಾರಸ್ವಾಮಿ ಕಣಕ್ಕಿಳಿದರೂ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಜತೆಗೆ, ಮಂಗಳೂರಿನ ಅಭಿವೃದ್ಧಿಗೆ ಕಾಂಗ್ರೆಸ್ ತನ್ನದೇ ಆದ ಯೋಚನೆಗಳನ್ನು ಹೊಂದಿದೆ ಎಂದೂ ತಿಳಿಸಿದ್ದಾರೆ.

ಡಿಕೆ ಸುರೇಶ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧಿಸಿದರೂ ಚಿಂತಿಲ್ಲ: ಮಂಗಳೂರಿನಲ್ಲಿ ಡಿಕೆ ಶಿವಕುಮಾರ್ ಖಡಕ್ ನುಡಿ
ಡಿಕೆ ಶಿವಕುಮಾರ್
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Digi Tech Desk

Updated on:Feb 19, 2024 | 3:56 PM

ಮಂಗಳೂರು, ಫೆಬ್ರವರಿ 17: ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರದಿಂದ ಸಂಸದ ಡಿಕೆ ಸುರೇಶ್ ವಿರುದ್ಧವೇ ಸ್ಪರ್ಧಿಸಿದರೂ ಬೇಸರವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಮಂಗಳೂರಿನಲ್ಲಿ (Mangaluru) ಕಾಂಗ್ರೆಸ್ ಸಮಾವೇಶ ಮೈದಾನದ ಬಳಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ, ಕುಮಾರಸ್ವಾಮಿ ವಿರುದ್ಧವೇ ಸ್ಪರ್ಧಿಸಿದ್ದವನು ನಾನು. ನನ್ನ ಸಹೋದರನ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೂ ಆತನೇ ಗೆದ್ದಿದ್ದಾನೆ. ಬಿಜೆಪಿ, ಜೆಡಿಎಸ್ ನನ್ನ ಸಹೋದರನ ವಿರುದ್ಧ ಸ್ಪರ್ಧಿಸಿದ್ದಾಗಲೂ ಗೆದ್ದಿದ್ದಾನೆ. ಸುರೇಶ್ ದೆಹಲಿಯಲ್ಲಿ ಕೂರುವ ಎಂಪಿ ಅಲ್ಲ, ಹಳ್ಳಿಯ ಸಂಸದ ಎಂದು ಹೇಳಿದರು.

ದೇವೇಗೌಡ, ಕುಮಾರಸ್ವಾಮಿ ನಮ್ಮಲ್ಲಿ ಎಂಪಿ ಆಗಿದ್ದವರು. ಹಳೇ ಎಂಪಿಗಳು ಹಾಗೂ ಈ ಎಂಪಿ ವ್ಯತ್ಯಾಸ ಜನ ನೋಡಿದ್ದಾರೆ‌. ಬೆಂಗಳೂರು ಗ್ರಾಮಾಂತರದಲ್ಲಿ ಯಾರೇ ನಿಂತರೂ ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ರಾಜಕೀಯದಲ್ಲಿ ಯಾವುದೂ ಶಾಶ್ವತ ಹಾಗೂ ಅಸಾಧ್ಯವಲ್ಲ. ರಾಜಕಾರಣ ಸಾಧ್ಯತೆಗಳ ಕಲೆ, ಹೀಗಾಗಿ ಇಲ್ಲಿ ಬದಲಾವಣೆ ವಿಶ್ವಾಸವಿದೆ. ಹೀಗಾಗಿ ಮಂಗಳೂರಿನಲ್ಲಿ ಈ ಬಾರಿ ಸಮಾವೇಶ ಮಾಡುತ್ತಾ ಇದ್ದೇವೆ. ಈ ಭಾಗದಲ್ಲಿ ನಾವು ಗೆಲ್ಲುವ ಸಾಧ್ಯತೆ ಹೆಚ್ಚಿದೆ, ಹಾಗಾಗಿ ಸಮಾವೇಶ ಮಾಡುತ್ತಿದ್ದೇವೆ. ಇಲ್ಲಿ ನಿರುದ್ಯೋಗ ಇದೆ, ಇಲ್ಲಿನ ಜನ ಬೇರೆ ಕಡೆ ಉದ್ಯೋಗಕ್ಕೆ ಹೋಗುತ್ತಾ ಇದ್ದಾರೆ. ಇಲ್ಲಿನವರು ಸೌದಿ, ಬೆಂಗಳೂರು, ಮುಂಬೈ ಕಡೆ ಹೋಗುತ್ತಾ ಇದ್ದಾರೆ. ಇಲ್ಲಿ ಎಷ್ಟೇ ಶಿಕ್ಷಣ ಸಂಸ್ಥೆಗಳಿದ್ದರೂ ಮಕ್ಕಳು ಡ್ರಾಪ್ ಔಟ್ ಆಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ಮಂಗಳೂರಿನ ಅಭಿವೃದ್ಧಿಗೆ ಹೊಸ ಆಲೋಚನೆ ಇದೆ: ಡಿಕೆ ಶಿವಕುಮಾರ್

ಇಲ್ಲಿ (ಮಂಗಳೂರು) ಧರ್ಮ ರಾಜಕೀಯ ಇದೆ. ಬಿಜೆಪಿ ಅಭಿವೃದ್ಧಿ ಮಾಡುತ್ತಾ ಇಲ್ಲ. ಈ ಜಿಲ್ಲೆಯ ಬಗ್ಗೆ ನಾವು ಹೊಸ ಅಲೋಚನೆ ಮಾಡುತ್ತೇವೆ. ಉದ್ಯೋಗ ಸೃಷ್ಟಿಸುತ್ತೇವೆ, ಸಂಜೆ ಏಳು ಗಂಟೆ ಬಳಿಕ ಮಂಗಳೂರು ಡೆಡ್ ಸಿಟಿ ಆಗಿದೆ. ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್​​ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗುತ್ತಾ ಇವೆ. ಇಲ್ಲಿನ ಜನ ದೇವಸ್ಥಾನಗಳಲ್ಲಿ ಭಕ್ತಿಯಿಂದ ಇರುತ್ತಾರೆ. ಅದೇ ವ್ಯವಹಾರಗಳಲ್ಲೂ ಇರಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ, ದೇಶ ವಿಭಜನೆ ಬಗ್ಗೆ ಮಾತಾಡಿಲ್ಲ: ಡಿಕೆ ಸುರೇಶ್

ಜೆರೋಸಾ ಶಾಲೆ ವಿಚಾರದಲ್ಲಿ ಕಾನೂನು ರೀತಿಯಲ್ಲಿ ಪ್ರಕ್ರಿಯೆಗಳು ನಡೆಯಲಿವೆ. ಯಾರೇ ರಾಜಕೀಯ ಮಾಡಿದ್ದರೂ ಕಾನೂನು ಅದರ ಕೆಲಸ ಮಾಡಲಿದೆ. ಅವರು ಹೋರಾಟ ಮಾಡುತ್ತಾ ಇರಲಿ, ಕಾನೂನು ಕೆಲಸ ಮಾಡುತ್ತದೆ. ನಾನು ಪೊಲೀಸ್ ಕೆಲಸ ಮಾಡಲು ಆಗಲ್ಲ, ಪೊಲೀಸರು ಮಾಡುತ್ತಾರೆ. ನಮ್ಮ ರಾಜ್ಯಕ್ಕೆ ಅನ್ಯಾಯ ಆದಾಗ ಬಿಜೆಪಿ ಮಾತನಾಡಿಲ್ಲ. ಬಜೆಟ್​ನಲ್ಲಿ ದ.ಕ ಜಿಲ್ಲೆಗೂ ಕೊಟ್ಟಿದ್ದೇವೆ, ಮುಸ್ಲಿಮರಿಗೆ ಕೂಡಲೇ ಬಾರದಾ? ಬಿಜೆಪಿ ರಾಜಕಾರಣ ಮಾಡುತ್ತಾ ಇದೆ, ಅದು ಮಾಡಲಿ ಎಂದು ಡಿಕೆ ಶಿವಕುಮಾರ್ ಟೀಕಿಸಿದರು.

ಲೋಕಸಭೆ ಚುನಾವಣೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ನಾಲ್ಕು ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದೇವೆ. ಟೀಂ ಸರ್ವೇ ಬಳಿಕ ನೋಡೋಣ ಎಂದು ಅವರು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Sat, 17 February 24

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ