ನಿವೃತ್ತ ಯೋಧನ ಮಗಳನ್ನು ಅಪಹರಿಸಿ ಜಮೀನು ಬರೆಸಿಕೊಂಡಿದ್ದೀರಿ: ಡಿಕಶಿ ವಿರುದ್ಧ ಕುಮಾರಸ್ವಾಮಿ ಆರೋಪ 

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ಆಗ್ರಹಿಸಿ ಬಿಜೆಪಿ-ಜೆಡಿಎಸ್​ ನಾಯಕರು ನಡೆಸುತ್ತಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟಿದೆ. ಎರಡನೇ ದಿನದ ಪಾದಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ಮಾಡಿದರು.

ನಿವೃತ್ತ ಯೋಧನ ಮಗಳನ್ನು ಅಪಹರಿಸಿ ಜಮೀನು ಬರೆಸಿಕೊಂಡಿದ್ದೀರಿ: ಡಿಕಶಿ ವಿರುದ್ಧ ಕುಮಾರಸ್ವಾಮಿ ಆರೋಪ 
ಹೆಚ್​ಡಿ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on:Aug 04, 2024 | 11:32 AM

ಬೆಂಗಳೂರು, ಆಗಸ್ಟ್​​ 04: ನಿವೃತ್ತ ಯೋಧನ ಪುತ್ರಿಯನ್ನು ಅಪಹರಿಸಿ, ಆಸ್ತಿ ಕೊಡದಿದ್ದರೆ ಮಗಳನ್ನು ಕತ್ತರಿಸಿ ಹಾಕುತ್ತೇನೆ ಅಂತ ಹೆದರಿಸಿ ಅವರಿಂದ ಅಜ್ಜಯ್ಯನ ದೇವಸ್ಥಾನದ ಪಕ್ಕದಲ್ಲಿನ ಜಾಗವನ್ನು ಬರೆಸಿಕೊಂಡಿದ್ದೀರಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಅವರ ವಿರುದ್ಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದರು. ರವಿವಾರ ಮೈಸೂರು ಚಲೋ ಪಾದಯಾತ್ರೆಯ (BJP JDS Mysore Chalo Padayatra) ಉದ್ಘಾಟನೆ ವೇಳೆ ಮಾತನಾಡಿದ ಅವರು, ಬಿಡದಿಯಲ್ಲಿ ಐಕಾನ್ ನರ್ಸಿಂಗ್ ಸ್ಕೂಲ್ ಭೂಮಿಯನ್ನು ಸಾಲ ಪಡೆದಿದ್ದವರನ್ನು ಹೆದರಿಸಿ ಬರೆಸಿಕೊಂಡಿದ್ದೀರಿ. ಉಪಮುಖ್ಯಮಂತ್ರಿಯಾಗಿ ಸದಾಶಿವನಗರದಲ್ಲಿ ಮೂವರು ವಿಧವೆಯರಿಗೆ ಬೆದರಿಸಿ ನಿಮ್ಮ ಮಗಳ ಹೆಸರಿಗೆ ಆಸ್ತಿ ಬರೆಸಿಕೊಂಡಿದ್ದೀರಿ ಇವುಗಳನ್ನು ತನಿಖೆ ಮಾಡಲು ಒಂದು ಸಿಬಿಐ, ಇಡಿ ಸಾಕಾಗುವುದಿಲ್ಲ ಎಂದರು.

ರಾಮನಗರ ಶಾಸಕ ಮತ್ತು ನೀವು ಕೋಡಿಹಳ್ಳಿಯಲ್ಲಿ ಅಕ್ರಮವಾಗಿ ಬಂಡೆ ಒಡೆದು ರಫ್ತು ಮಾಡುತ್ತಿದ್ದೀರಿ. ನೊಣವಿನಕೆರೆ ಅಜ್ಜಯ್ಯ ಏನಾದರೂ ನಿಮಗೆ ಕೊನೆಯ ಹಂತಕ್ಕೆ ಬಂದಿದ್ದೀಯಾ ಅಂತ ಹೇಳಿದ್ದಾರಾ? ಕನಕಪುರದಲ್ಲಿ ಎಷ್ಟು ಕುಟುಂಬ ಹಾಳು ಮಾಡಿದ್ದೀರಿ ಡಿಕೆ ಶಿವಕುಮಾರ್ ಅವರೇ?. ಡಿಕೆ ಶಿವಕುಮಾರ್ ಅವರೇ ಅಜ್ಜಯ್ಯನ ಮೇಲೆ ಗೌರವ ಇದ್ದರೆ, ಪ್ರಮಾಣ ಮಾಡಿ, ನಾನೂ ಮಾಡುತ್ತೇನೆ ಯಾರು ಪ್ರಾಮಾಣಿಕರು ಅಂತ ಗೊತ್ತಾಗುತ್ತೆ. ಇಂದಿನಿಂದ ಡಿಕೆ ಶಿವಕುಮಾರ್ ಅವರಿಗೆ ಅಜ್ಜಯ್ಯನ ಶಾಪ ಪ್ರಾರಂಭವಾಗಿದೆ. ಇನ್ಮುಂದೆ ಅಜ್ಜಯ್ಯ ಕೂಡ ಅವರಿಗೆ ರಕ್ಷಣೆ ಕೊಡಲ್ಲ ಎಂದು ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ದುಡ್ಡು ಹೊಡೆಯುವ ಕೆಲಸ ಮಾಡಿಲ್ಲ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ನೋಡಿ ಕಾಂಗ್ರೆಸ್ ನಿದ್ದೆ ಹಾಳಾಗಿದೆ. ಕೇತನಗಾನಹಳ್ಳಿಯಲ್ಲಿ ಆಸ್ತಿ ಖರೀದಿ ಮಾಡುವಾಗ ಯಾರಿಗಾದರೂ ದಬ್ಬಾಳಿಕೆ ಮಾಡಿದ್ದೇನೆ ಅಂತ ಯಾರಾದರೂ ಒಬ್ಬರು ಹೇಳಿದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಬ್ಲ್ಯಾಕ್ & ವೈಟ್ ಟಿವಿ, ಡಿವಿಡಿ ಇಟ್ಟುಕೊಂಡು ದೊಡ್ಡಾಲಹಳ್ಳಿಯಲ್ಲಿ ಏನು ಪ್ರದರ್ಶಿಸುತ್ತಿದ್ದರು? ಕುಮಾರಸ್ವಾಮಿ ವ್ಯಂಗ್ಯ

ಏಕವಚನದಲ್ಲಿ ಮಾತನಾಡಬೇಕು ಅಂದರೆ ನಿಮಗಿಂತ ಹೆಚ್ಚಿನ ರೀತಿಯಲ್ಲಿ ನಮಗೆ ಮಾತನಾಡಲು ಬರುತ್ತೆ. ಆದರೆ ಅದು ನಮ್ಮ ಸಂಸ್ಕೃತಿಯಲ್ಲ. ಆದರೆ ನಿಮ್ಮಷ್ಟು ಸಣ್ಣತನಕ್ಕೆ ನಾನು ಇಳಿಯಲ್ಲ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ರಾಮನಗರಕ್ಕೆ ಬರುವ 15 ವರ್ಷಗಳ ಮೊದಲೇ ಚಲನಚಿತ್ರ ವಿತರಕನಾಗಿ ಕೇತಗಾನಹಳ್ಳಿಯಲ್ಲಿ 45 ಎಕರೆ ಆಸ್ತಿ ಖರೀದಿಸಿದ್ದೇನೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದುಡ್ಡು ಹೊಡೆಯುವ ಕೆಲಸ ಮಾಡಿಲ್ಲ ಎಂದು ತಿಳಿಸಿದರು.

ಡಾ. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ಆಯಸ್ಸು ಮುಗಿದು ಹೋಗುತ್ತದೆ ಎಂದು ನಮ್ಮ ಸ್ನೇಹಿತರು ಹೇಳಿದ್ದಾರೆ. ಆದರೆ ಮಂಜುನಾಥ್ ಮೈಯಲ್ಲಿ ರಾಜಕೀಯ ರಕ್ತ ಹರಿಯುತ್ತಿದೆ. ರಾಮನಗರ ಜಿಲ್ಲಾಧಿಕಾರಿಯವರೇ ಸೋತ ಅಭ್ಯರ್ಥಿಯನ್ನು ಕೂರಿಸಿಕೊಂಡು ಏನೇನು ಮಾಡಿದ್ದೀರಿ, ಏನೇನು ಸೂಚನೆ ಕೊಟ್ಟಿದ್ದೀರಿ. ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇನೆ, ಬಹಳ ಸಮಯ ಇಲ್ಲ, ಇದಕ್ಕೆಲ್ಲ ಬೆಲೆ ತೆರಬೇಕಾಗುತ್ತದೆ. ಕಾನೂನುಬಾಹಿರ ಚಟುವಟಿಕೆ ನಡೆದರೆ ತಕ್ಕ ಪಾಠ ಎದುರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ನಾವು ಯಾವುದೇ ರೀತಿಯ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ. ಬಿಎಸ್ ಯಡಿಯೂರಪ್ಪ ಅವರ ಜೊತೆ ಸರ್ಕಾರ ರಚಿಸಿ ಉತ್ತಮ ಆಡಳಿತ ಕೊಟ್ಟಿದ್ದೇವೆ. ಕೆಲ ರಾಜಕೀಯ ಬೆಳವಣಿಗೆಯಿಂದ ಬಳಿಕ ಕೆಲ ಘಟನೆ ನಡೆದವು. ರಾಜ್ಯದ ಜನರ ಬದುಕು ಸರಿಪಡಿಸುವುದು ನಮ್ಮ ಉದ್ದೇಶವಾಗಿದೆ. ನನ್ನನ್ನು ಮುಖ್ಯಮಂತ್ರಿ ಮಾಡಿ ಅಂತ ಅರ್ಜಿ ಹಾಕಿರಲಿಲ್ಲ ಎಂದು 2019ರ ಸಮಿಶ್ರ ಸರ್ಕಾರದ ಬಗ್ಗೆ ನೆನೆದರು.

ಸುರಿಯುತ್ತಿರುವ ಮಳೆಯಲ್ಲೂ ಎದೆಗುಂದದೆ ಹೋರಾಟ ಮಾಡುತ್ತಿದ್ದೀರಿ. ಎರಡೂ ಪಕ್ಷಗಳ ಕಾರ್ಯಕರ್ತರಿಗೆ ನಾನು ವಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಭ್ರಷ್ಟಾಚಾರ ಬಾಗಿಲು ತೆರೆದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ದರಿದ್ರ ವಾತಾವರಣ ನಿರ್ಮಾಣ ಮಾಡಿದೆ. ಐದು ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿವೆ. ಇಡೀ ಕಾಂಗ್ರೆಸ್ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ವಾಗ್ದಾಳಿ ಮಾಡಿದರು.

ಯಾವುದೇ ದಾಖಲೆಗಳಿಲ್ಲದೆ, ಸುಳ್ಳು ಜಾಹೀರಾತುಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮುಡಾ ಸೈಟ್​ಗಳ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್​ ಚರ್ಚಿಸಿವೆ. ಸದನದಲ್ಲಿ ದಾಖಲೆಗಳ ಸಮೇತ ಎರುಡು ಪಕ್ಷಗಳ ಶಾಸಕರು ಚರ್ಚಿಸಿದ್ದಾರೆ. ಮುಖ್ಯಮಂತ್ರಿಗಳ ಕುಟುಂಬ 15 ಸೈಟ್​ಗಳನ್ನು ಪಡೆದಿದ್ದಕ್ಕೆ ನಮ್ಮ ವಿರೋಧವಿಲ್ಲ. ಕಾನೂನುಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಸರ್ಕಾರದ ಭೂಮಿಯನ್ನು ಸುಳ್ಳು ದಾಖಲೆ ನೀಡಿ ಸೈಟ್ ಪಡೆದಿದ್ದೀರಿ. ಪತ್ನಿ ಪಾರ್ವತಿ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಸೈಟ್​ಗಳನ್ನ ಪಡೆದಿದ್ದಾರೆ ಎಂದು ಆರೋಪಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:25 am, Sun, 4 August 24