AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್‌ಡಿಕೆ ಕೇಸರಿ ಶಾಲು ಹಾಕಬಾರದಿತ್ತು ಎಂದ ದೇವೇಗೌಡರ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಪ್ರತಿಭಟನೆ ವೇಳೆ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ ಕೇಸರಿ ಶಾಲು ಧರಿಸಿದ್ದು, ಇದಕ್ಕೆ ಸ್ವತಃ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ (HD Devegowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ದೇವೇಗೌಡರ ಸಿದ್ಧಾಂತವನ್ನು ಹತ್ತಿರದಿಂದ ನೋಡಿದ್ದೇನೆ ಎಂದು ಹೇಳುವ ಮೂಲಕ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಎಚ್‌ಡಿಕೆ ಕೇಸರಿ ಶಾಲು ಹಾಕಬಾರದಿತ್ತು ಎಂದ ದೇವೇಗೌಡರ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು
ಡಿಕೆ ಶಿವಕುಮಾರ್, ಎಚ್​ಡಿ ದೇವೇಗೌಡ
TV9 Web
| Edited By: |

Updated on: Feb 02, 2024 | 8:57 PM

Share

ಬೆಂಗಳೂರು,( ಫೆಬ್ರವರಿ, 02): ಎಚ್.ಡಿ. ಕುಮಾರಸ್ವಾಮಿ(HD Kumaraswamy) ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು. ನಾನು ಕೇಸರಿ ಶಾಲು (saffron shawl) ಹಾಕುವುದಿಲ್ಲ ಎಂಬ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೇಳಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರ ಸಿದ್ಧಾಂತವನ್ನು ಹತ್ತಿರದಿಂದ ನೋಡಿದ್ದೇನೆ. ಪಾಪ ವಯಸ್ಸಾದ ಕಾಲದಲ್ಲಿ ಅವರಿಗೆ ನೋವು ಕೊಟ್ಟಿದ್ದಾರೆ ಎಂದು ದೇವೇಗೌಡರ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರು ಬಿಜೆಪಿ ವಕ್ತಾರರಾಗಿದ್ದಾರೆ. ದೇವೇಗೌಡರಿಗೆ ಇಷ್ಟು ನೋವು ತರುತ್ತಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ದೇವೇಗೌಡರ ಸಿದ್ಧಾಂತವನ್ನು ನಾನು ಹತ್ತಿರದಿಂದ ಕಂಡಿದ್ದೇನೆ. ಮಕ್ಕಳಿಗಾಗಿ ಅವರು ಏನೆಲ್ಲ ಮಾಡಬೇಕು. .ಪಾಪ ವಯಸ್ಸಾದ ಕಾಲದಲ್ಲಿ ಅವರಿಗೆ ಮನೆಯಲ್ಲಿ ಇಂತಹ ನೋವು ಕೊಟ್ಟಿದ್ದಾರೆ. ನಮಗು ಮಕ್ಕಳಿದ್ದಾರೆ. ವಯಸ್ಸಾದ ಕಾಲದಲ್ಲಿ ಏನಾಗುತ್ತೋ ಏನೋ ಭಯವಾಗುತ್ತಿದೆ ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ತಿವಿದಿದ್ದಾರೆ.

ಇದನ್ನೂ ಓದಿ: ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ದೇವೇಗೌಡ

ಪರಿಸ್ಥಿತಿ ನಾವು ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗಬೇಕಾಗುವಂತೆ ಮಾಡುತ್ತದೆ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ ಎಂದು ತಿಳಿಸಿದರು.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಕಾಂಗ್ರೆಸ್ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು. ಅಲ್ಲದೇ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕರೆಕೊಟ್ಟಿದ್ದವು. ಈ ವೇಳೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿಕೊಂಡು ಸಿದ್ದರಾಮಯ್ಯ ಸರ್ಕಾರ ವಿರುದ್ಧ ಗುಡುಗಿದ್ದರು.

ಆದ್ರೆ, ಜ್ಯಾತ್ಯಾತೀತತೆ, ರೈತರ ಪರ ಎನ್ನುವ ಕುಮಾರಸ್ವಾಮಿ ಹಸಿರು ಶಾಲು ತೆಗೆದು ಕೇಸರಿ ಶಾಲು ಹಾಕಲು ಶುರು ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡಿದ್ದರು. ಅಲ್ಲದೇ ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದನ್ನು ಸ್ವತ್ವ ಅವರ ತಂದೆ ದೇವೇಗೌಡ ಖಂಡಿಸಿದ್ದು, ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ