AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ನಾವೇನು ಗುಲಾಮರಾ?” ಹೇಳಿಕೆ: ಸಚಿವ ರಾಜಣ್ಣರನ್ನು ಲೇವಡಿ ಮಾಡುತ್ತಾ ತಿರುಗೇಟು ಕೊಟ್ಟ ಡಿಕೆ ಶಿವಕುಮಾರ್

ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿ ಲೀಕ್ ಆದ ನಂತರ ಮಾತನಾಡಿದ ಸಚಿವ ಕೆಎನ್ ರಾಜಣ್ಣ, ದಿಲ್ಲಿಯಲ್ಲಿ ಕುಳಿತು ಪಕ್ಷದ ನಾಯಕರು ಸಿದ್ಧಪಡಿಸಿದ ಪಟ್ಟಿಯನ್ನು ಒಪ್ಪಿಕೊಳ್ಳಲು ನಾವು ಗುಲಾಮರೇ? ಕೇವಲ ಲಾಟರಿಯಂತೆ ನೇಮಕಾತಿಗಳನ್ನು ಮಾಡಿದರೆ ಕೇಳುವವರಾರು? ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದರು. ರಾಜಣ್ಣ ಅವರ ಗುಲಮಾ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದಿದ್ದಾರೆ.

ನಾವೇನು ಗುಲಾಮರಾ? ಹೇಳಿಕೆ: ಸಚಿವ ರಾಜಣ್ಣರನ್ನು ಲೇವಡಿ ಮಾಡುತ್ತಾ ತಿರುಗೇಟು ಕೊಟ್ಟ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಮತ್ತು ಕೆಎನ್ ರಾಜಣ್ಣ
TV9 Web
| Updated By: Rakesh Nayak Manchi|

Updated on: Jan 26, 2024 | 6:18 PM

Share

ಬೆಂಗಳೂರು, ಜ.26: ದಿಲ್ಲಿಯಲ್ಲಿ ಕುಳಿತು ಪಕ್ಷದ ನಾಯಕರು ಸಿದ್ಧಪಡಿಸಿದ ಪಟ್ಟಿಯನ್ನು ಒಪ್ಪಿಕೊಳ್ಳಲು ನಾವು ಗುಲಾಮರೇ ಎಂಬ ಸಚಿವ ಕೆಎನ್ ರಾಜಣ್ಣ (KN Rajannada) ಅವರ ಹೇಳಿಕೆಯನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ರಾಜಣ್ಣ ಅವರ ಹೇಳಿಕೆಗೆ ಲೇವಡಿ ಮಾಡುತ್ತಾ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ರಾಜಣ್ಣ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು , ಸಿಎಂ ಈ ಬಗ್ಗೆ ಮಾತನಾಡಿದ್ದಾರೆ. ಅವರು ಶಾಸಕರು ಮತ್ತು ಸಚಿವರಾಗಿರುವುದರಿಂದ ಎಐಸಿಸಿ ಗೌರವಯುತವಾಗಿ ಪರಿಶೀಲಿಸುತ್ತದೆ ಎಂದರು.

ನಿಗಮ-ಮಂಡಳಿ ಮತ್ತು ನಿಗಮಗಳ ಮುಖ್ಯಸ್ಥರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ನಾಯಕರ ಸಲಹೆ ಪಡೆಯದ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಗೃಹ ಸಚಿವ ಡಾ.ಜಿ.ಪರಮೇಶ್ವರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಪಕ್ಷದ ಕೇಂದ್ರ ನಾಯಕರ ವಿರುದ್ಧ ಧ್ವನಿ ಎತ್ತಿದ್ದರು.

ಇದನ್ನೂ ಓದಿ: 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ, ಪಟ್ಟಿ ಇಲ್ಲಿದೆ

ಯಾರು ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸಾಮರ್ಥ್ಯ ಏನು ಎಂದು ಪಕ್ಷದ ಹೈಕಮಾಂಡ್ ನಮ್ಮನ್ನು ಕೇಳಬೇಕು ಮತ್ತು ನಂತರ ನೇಮಕಾತಿಗಳನ್ನು ಮಾಡಬೇಕು. ದಿಲ್ಲಿಯಲ್ಲಿ ಕುಳಿತು ಪಕ್ಷದ ನಾಯಕರು ಸಿದ್ಧಪಡಿಸಿದ ಪಟ್ಟಿಯನ್ನು ಒಪ್ಪಿಕೊಳ್ಳಲು ನಾವು ಗುಲಾಮರೇ? ಅದು ಯಾವುದೇ ಜಿಲ್ಲೆಯಾಗಿರಬಹುದು. ನೇಮಕಾತಿ ಮಾಡುವ ಮೊದಲು ಆಯಾ ಜಿಲ್ಲೆಗಳ ಉಸ್ತುವಾರಿಗಳನ್ನು ಕೇಳಬೇಕು. ಅವರು ಕೇವಲ ಲಾಟರಿಯಂತೆ ನೇಮಕಾತಿಗಳನ್ನು ಮಾಡಿದರೆ ಕೇಳುವವರಾರು? ಅದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಹೈಕಮಾಂಡ್ ನಾಯಕರ ವಿರುದ್ಧ ರಾಜಣ್ಣ ಕಿಡಿಕಾರಿದ್ದರು.

ಈ ಹಿಂದೆ ಸಿಎಂ, ರಾಜ್ಯಾಧ್ಯಕ್ಷರು ನಿರ್ಧಾರ ಮಾಡುತ್ತಿದ್ದರು, ಈಗ ದೆಹಲಿಯಲ್ಲಿ ನಿರ್ಧಾರ ಆಗುತ್ತಿದೆ ಎಂದ ರಾಜಣ್ಣ, ನನಗಷ್ಟೇ ಅಲ್ಲ, ಎಲ್ಲ ನಾಯಕರಿಗೂ ಒಂದೇ ಭಾವನೆ ಇದೆ. ಕೆಲವರು ಮಾತನಾಡುತ್ತಿದ್ದಾರೆ ಮತ್ತು ಕೆಲವರು ಮೌನವಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇದೇ ಕೆಲಸ ಮಾಡಿದರೆ ದೆಹಲಿಯಿಂದ ಬಂದು ಕೆಲಸ ಮಾಡಬೇಕಷ್ಟೇ ಎಂದು ಹೇಳಿದ್ದರು.

ಇದಕ್ಕೂ ಮುನ್ನ ಪಾಲಿಕೆ, ನಿಗಮ-ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ಆಯ್ಕೆ ಮಾಡುವಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದರ ವಿರುದ್ಧ ಪರಮೇಶ್ವರ್‌ ವಾಗ್ದಾಳಿ ನಡೆಸಿದ್ದರು. ಕಳೆದ ವಾರ, ಕಾಂಗ್ರೆಸ್ ಕೇಂದ್ರ ನಾಯಕರು ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ಪಟ್ಟಿಯನ್ನು ಮಂಡಳಿಗಳು ಮತ್ತು ನಿಗಮಗಳ ಮುಖ್ಯಸ್ಥರಿಗೆ ಕಳುಹಿಸಿದ್ದರು. ರಾಜ್ಯ ನಾಯಕರ ಅಭಿಪ್ರಾಯ ಕೇಳದೆ ಕೆಲವರ ಹೆಸರು ಸೇರ್ಪಡೆ ಮಾಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇಂದು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಭೆ ನಡೆಸಲಾಗಿತ್ತು. ಬಳಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ