AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದರು ಯಾರ ಸ್ವತ್ತೂ ಅಲ್ಲ: ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್​ ವಾಗ್ದಾಳಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಚಲನಚಿತ್ರ ಕಲಾವಿದರಿಗೆ ದಮ್ಕಿ ಹಾಕಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪ ಮಾಡಿದ್ದಾರೆ. ಡಿಕೆ ಶಿವಕುಮಾರ್ ಹೇಳಿಕೆಯನ್ನು ಆರ್​ ಅಶೋಕ್​ ತೀವ್ರವಾಗಿ ಖಂಡಿಸಿದ್ದು, ಕಲಾವಿದರಿಗೆ ತಮ್ಮದೇ ಆದ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಕಲಾವಿದರು ಯಾರ ಸ್ವತ್ತೂ ಅಲ್ಲ: ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್​ ವಾಗ್ದಾಳಿ
ಡಿಕೆ ಶಿವಕುಮಾರ್, ಆರ್ ಅಶೋಕ್​
Sunil MH
| Updated By: ವಿವೇಕ ಬಿರಾದಾರ|

Updated on: Mar 02, 2025 | 10:18 AM

Share

ಬೆಂಗಳೂರು, ಮಾರ್ಚ್​ 02: ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ (Congress) ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ವಿಪಕ್ಷ ನಾಯಕ ಆರ್​ ಅಶೋಕ್​ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಾಜಿಕ ಮಾದ್ಯಮ ಎಕ್ಸ್​ನಲ್ಲಿ ಟ್ವಿಟ್​ ಮಾಡಿದ ಆರ್​. ಅಶೋಕ್​, ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ
Image
ರಾಜಕೀಯದಲ್ಲಿ ನಂಬಿಕೆ ಬಹಳ ಮುಖ್ಯ, ಅದನ್ನು ಕಳೆದುಕೊಳ್ಳಬಾರದು: ಸುರೇಶ್
Image
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
Image
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್

ಕಲಾವಿದರು ನಿಮ್ಮ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದರು.

ಟ್ವಿಟರ್ ಪೋಸ್ಟ್​

ಕನ್ನಡ ಚಿತ್ರರಂಗದ ಕಲಾವಿದರ ವಿರುದ್ಧ ಡಿಸಿಎಂ ಡಿಕೆ ಅಸಮಾಧಾನ

ಶನಿವಾರ (ಮಾರ್ಚ್​.01) ರಂದು ಬೆಂಗಳೂರಿನಲ್ಲಿ ನಡೆದ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಷಣದ ವೇಳೆ ” ಮೇಕೆದಾಟು ಪಾದಯಾತ್ರೆಗೆ ಖುದ್ದು ಆಹ್ವಾನ ಕೊಟ್ಟಿದ್ದರೂ ನಟ ದುನಿಯಾ ವಿಜಯ್, ಸಾಧು ಕೋಕಿಲಾ ಇಬ್ಬರನ್ನೂ ಹೊರತುಪಡಿಸಿ ಉಳಿದ ನಟ, ನಟಿಯರು ದೂರ ಉಳಿದಿದ್ದರು” ಎಂದು ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ: ‘ನಿಮ್ಮ ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್

“ನಿಮ್ಮ ಚಲನ ವಲನ, ಹಾವ ಭಾವ ಎಲ್ಲವೂ ನಮಗೆ ಅರ್ಥವಾಗುತ್ತದೆ, ಎಲ್ಲವನ್ನು ಗಮನಿಸುತ್ತಿರುತ್ತೇನೆ. ಅಷ್ಟು ಮಾತ್ರವೇ ಅಲ್ಲದೆ ಸಿನಿಮಾ ರಂಗದವರ ಮೇಲೆ ವಿಶೇಷವಾಗಿ ನಮ್ಮ ನಟ, ನಟಿಯರ ಮೇಲೆ ನನಗೆ ಬಹಳ ಸಿಟ್ಟಿದೆ. ಯಾರು ಯಾರಿಗೆ ಎಲ್ಲೆಲ್ಲಿ ನಟ್ಟು ಬೋಲ್ಟು ಟೈಟ್ ಹೇಗೆ ಮಾಡಬೇಕು ಎಂಬುದು ನನಗೂ ಗೊತ್ತಿದೆ. ಇದನ್ನು ಎಚ್ಚರಿಕೆ ಎಂದಾದರೂ ತೆಗೆದುಕೊಳ್ಳಿ, ಮನವಿ ಎಂದಾದರೂ ತೆಗೆದುಕೊಳ್ಳಿ” ಎಂದು ನೇರವಾಗಿಯೇ ಸಿಟ್ಟು ಹೊರಹಾಕಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ