ಲೋಕಸಭೆ ಚುನಾವಣೆ ಸಂಬಂಧ ಮುಸ್ಲಿಂ ಮುಖಂಡರ ಜೊತೆ ಸಭೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಲೋಕಸಭೆ ಚುನಾವಣೆ ಸಂಬಂಧ ಮುಸ್ಲಿಂ ಮುಖಂಡರ ಜೊತೆ ಭಾನುವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಮಾಡಿದ್ದಾರೆ. ಬಳಿಕ ಮಾಡಿತನಾಡಿದ ಅವರು, ಲೋಕಸಭಾ ಚುನಾವಣೆಗೆ ಹೆಚ್ಚಿನ ಸ್ಥಾನ ಕೇಳಿದ್ದಾರೆ. ಮೈನಾರಿಟೀಸ್ ಹೆಚ್ಚಿರುವ ಕಡೆ ಅವರೇ ನಿಲ್ಲಲು ಸಾಧ್ಯವಿಲ್ಲ. ಕೆಲ ಸವಲತ್ತು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದಿದ್ದಾರೆ.
ಬೆಂಗಳೂರು, ಆಗಸ್ಟ್ 06: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜುಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ತಂತ್ರ ರೂಪಿಸಲಾಗುತ್ತಿದೆ. ಈ ಹಿನ್ನೆಲೆ ಇಂದು ಅಲ್ಪಸಂಖ್ಯಾತ ನಾಯಕರ ಮುಖಂಡರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಭೆ ಮಾಡಿದ್ದಾರೆ. ಮುಸ್ಲಿಂ ಮುಖಂಡರ ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಲೋಕಸಭಾ ಚುನಾವಣೆಗೆ ಮುಖಂಡರು ಹೆಚ್ಚಿನ ಟಿಕೆಟ್ ಕೇಳಿದ್ದಾರೆ ಎಂದಿದ್ದಾರೆ.
ಅಲ್ಪಸಂಖ್ಯಾತರು ಹೆಚ್ಚಾಗಿರುವ ಕಡೆ ಅವರೇ ಸ್ಪರ್ಧಿಸಲು ಸಾಧ್ಯವಿಲ್ಲ. ಜನಸಂಖ್ಯೆಯ ಆಧಾರದ ಮೇಲೆ ಟಿಕೆಟ್ ಹಂಚಿಕೆ ಮಾಡಬೇಕಿದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರುಗೊಂಡ ಬಳಿಕ ಕುಮಾರಸ್ವಾಮಿ ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ’
ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ-ಡಿ.ಕೆ.ಶಿವಕುಮಾರ್
ವಿಧಾನಪರಿಷತ್ಗೆ ನಾಮನಿರ್ದೇಶನಕ್ಕೆ ಹೆಸರು ಶಿಫಾರಸು ವಿಚಾರವಾಗಿ ಮಾತನಾಡಿದ ಅವರು, ಸದಸ್ಯರ ಹೆಸರು ಶಿಫಾರಸು ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.
ನಾಳೆ ಸಿಎಂ, ನಾನು ಕೆಲ ಜಿಲ್ಲೆಗಳ ನಾಯಕರ ಸಭೆ
ನಾಳೆ ಸಚಿವರು, ಶಾಸಕರ ಜೊತೆ ಸಿಎಂ, ಡಿಸಿಎಂ ಸಭೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಸಿಎಂ, ನಾನು ಕೆಲ ಜಿಲ್ಲೆಗಳ ನಾಯಕರ ಸಭೆ ಮಾಡುತ್ತಿದ್ದೇವೆ. ಲೋಕಸಭಾ ಚುನಾವಣೆಗೆ ನಮ್ಮ ಕೆಲಸ ಪ್ರಾರಂಭ ಆಗಬೇಕಿದೆ. ಮಧ್ಯಾಹ್ನ ಅಲ್ಪಸಂಖ್ಯಾತ ಮುಖಂಡರ ಜತೆ ಸಭೆ ಮಾಡುತ್ತಿದ್ದೇವೆ. ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಸಭೆ ನಡೆಯಲಿದೆ ಎಂದರು.
ಇದನ್ನೂ ಓದಿ: ಭಾಗ್ಯಗಳ ಹೆಸರಿನಲ್ಲಿ ರಾಜಕಾರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಡಾ ಅಶ್ವತ್ಥ್ ನಾರಾಯಣ ಕೆಂಡಾಮಂಡಲ
ಕುಮಾರಸ್ವಾಮಿ ಆರೋಪಕ್ಕೆ ಉತ್ತರ ಕೊಡುತ್ತೇನೆ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ವಿರುದ್ದ ನೈಸ್, ಬಿಡಿಎ, ಬಿಬಿಎಂಪಿ ಅಕ್ರಮ ಕುರಿತು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿಗೆ ಕೇವಲ ಮಾಧ್ಯಮಗಳ ಜೊತೆ ಮಾತಾಡಿದರೆ ಮಾತ್ರ ಸಾಲದು. ಈಗ ಪ್ರಧಾನ ಮಂತ್ರಿಗಳವರೆಗೂ ಹೋಗಿದ್ದಾರೆ. ನಾನು ಅದಕ್ಕೆ ತಕ್ಕಂತೆ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.