ಸತೀಶ್ ಜಾರಕಿಹೊಳಿ ಅಸಮಾಧಾನದ ನಡುವೆ ಬುಧವಾರ ಬೆಳಗಾವಿಗೆ ಡಿಕೆ ಶಿವಕುಮಾರ್: ಗೈರಾಗ್ತಾರಾ ಸತೀಶ್?

ಬೆಳಗಾವಿ ರಾಜಕೀಯದಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಅಸಮಾಧಾನ ಸತೀಶ್ ಜಾರಕಿಹೊಳಿ ಅವರಲ್ಲಿದೆ. ಈ ಮಧ್ಯೆ, ಡಿಕೆ ಶಿವಕುಮಾರ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಜತೆಗೂ ಸತೀಶ್ ಜಾರಕಿಹೊಳಿ ಮುನಿಸು ಮುಂದುವರಿದಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಅವರು ಬೆಳಗಾವಿ ಪ್ರವಾಸ ಕೈಗೊಂಡಿರುವುದು ಕುತೂಹಲ ಹೆಚ್ಚಿಸಿದೆ.

ಸತೀಶ್ ಜಾರಕಿಹೊಳಿ ಅಸಮಾಧಾನದ ನಡುವೆ ಬುಧವಾರ ಬೆಳಗಾವಿಗೆ ಡಿಕೆ ಶಿವಕುಮಾರ್: ಗೈರಾಗ್ತಾರಾ ಸತೀಶ್?
ಡಿಕೆ ಶಿವಕುಮಾರ್
Follow us
TV9 Web
| Updated By: Ganapathi Sharma

Updated on: Oct 17, 2023 | 7:35 PM

ಬೆಂಗಳೂರು, ಅಕ್ಟೋಬರ್ 17: ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ (Belagavi Politics) ಹೊರಗಿನವರ ಹಸ್ತಕ್ಷೇಪಕ್ಕೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ವಿರೋಧ ವ್ಯಕ್ತಪಡಿಸುತ್ತಿರುವ ಮತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಧ್ಯೆಯೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬುಧವಾರ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿರುವ ಕಾರಣ ಡಿಕೆ ಶಿವಕುಮಾರ್ ಅವರ ಬೆಳಗಾವಿ​ ಪ್ರವಾಸ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಈ ಮಧ್ಯೆ, ಉಪಮುಖ್ಯಮಂತ್ರಿ ಬೆಳಗಾವಿ ಪ್ರವಾಸದ ವೇಳೆ ಸತೀಶ್ ಜಾರಕಿಹೊಳಿ ಗೈರಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಬುಧವಾರ ಬೆಳಗ್ಗೆ 10.55ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಡಿಕೆ ಶಿವಕುಮಾರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ. ಬಳಿಕ ಜಲಸಂಪನ್ಮೂಲ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ಹುಕ್ಕೇರಿಗೆ ತೆರಳಲಿರುವ ಡಿಸಿಎಂ ಡಿಕೆ ಶಿವಕುಮಾರ್ ಸಂಜೆ 4 ಗಂಟೆಗೆ ಹುಕ್ಕೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಹುಕ್ಕೇರಿ ಹಿರೇಮಠದ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬುಧವಾರ ರಾತ್ರಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿರುವ ಡಿಕೆ ಶಿವಕುಮಾರ್, ಅಕ್ಟೋಬರ್ 19ರಂದು ಬೆಳಗ್ಗೆ 11.15ರ ವಿಮಾನದಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಸಚಿವರ ಮುಸುಕಿನ ಗುದ್ದಾಟ: ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್​ ನಡುವೆ ಜಟಾಪಟಿ

ಬೆಳಗಾವಿ ರಾಜಕೀಯದಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಅಸಮಾಧಾನ ಸತೀಶ್ ಜಾರಕಿಹೊಳಿ ಅವರಲ್ಲಿದೆ. ಈ ಮಧ್ಯೆ, ಡಿಕೆ ಶಿವಕುಮಾರ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಜತೆಗೂ ಸತೀಶ್ ಜಾರಕಿಹೊಳಿ ಮುನಿಸು ಮುಂದುವರಿದಿದೆ. ಅಧಿಕಾರಿಗಳ ವರ್ಗಾವಣೆ ಜಟಾಪಟಿ ಬೆನ್ನಲ್ಲೇ ಇದೀಗ ಬೂಡಾ, ಕಾಡಾ ಅಧ್ಯಕ್ಷರ ನೇಮಕಾತಿಯಲ್ಲೂ ಉಭಯ ಸಚಿವರ ಮಧ್ಯೆ ಶೀತಲ ಸಮರ ಆರಂಭವಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇಮಕಾತಿ, ಮಲಪ್ರಭಾ, ಘಟಪ್ರಭಾ ಅಚ್ಚುಕಟ್ಟ ಪ್ರದೇಶ ಅಭಿವೃದ್ಧಿ ಅಧ್ಯಕ್ಷರ ಸ್ಥಾನಕ್ಕೆ ಆಪ್ತರನ್ನ ನೇಮಕ ಮಾಡಲು ಉಭಯರೂ ಪೈಪೋಟಿಗೆ ಇಳಿದಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಅವರು ಬೆಳಗಾವಿ ಪ್ರವಾಸ ಕೈಗೊಂಡಿರುವುದು ಕುತೂಹಲ ಹೆಚ್ಚಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ