AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮುಲ್​ ಹೇರಿಕೆ ಮಾಡಿ ಗುಜರಾತ್ ಬೆಳೆಯಬೇಕು, ಕರ್ನಾಟಕ ಮುಚ್ಚಬೇಕೆಂಬ ಆಶಯ; ಡಿಕೆ ಶಿವಕುಮಾರ್ ಆಕ್ರೋಶ

ಕರ್ನಾಟಕದ ಮೇಲೆ ಅಮುಲ್ ಹೇರಿಕೆ ಮಾಡಲಾಗುತ್ತಿದೆ. ಇದರ ಹಿಂದೆ ಗುಜರಾತ್ ಬೆಳೆಯಬೇಕು, ಕರ್ನಾಟಕ ಮುಚ್ಚಬೇಕೆಂಬ ಆಶಯ ಇದ್ದಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಅಮುಲ್​ ಹೇರಿಕೆ ಮಾಡಿ ಗುಜರಾತ್ ಬೆಳೆಯಬೇಕು, ಕರ್ನಾಟಕ ಮುಚ್ಚಬೇಕೆಂಬ ಆಶಯ; ಡಿಕೆ ಶಿವಕುಮಾರ್ ಆಕ್ರೋಶ
ಡಿ.ಕೆ.ಶಿವಕುಮಾರ್Image Credit source: hindustantimes.com
ಗಣಪತಿ ಶರ್ಮಾ
| Edited By: Rakesh Nayak Manchi|

Updated on:Apr 07, 2023 | 8:12 PM

Share

ಬೆಂಗಳೂರು: ಕರ್ನಾಟಕದ ಮೇಲೆ ಅಮುಲ್ ಹೇರಿಕೆ ಮಾಡಲಾಗುತ್ತಿದೆ. ಇದರ ಹಿಂದೆ ಗುಜರಾತ್ ಬೆಳೆಯಬೇಕು, ಕರ್ನಾಟಕ ಮುಚ್ಚಬೇಕೆಂಬ ಆಶಯ ಇದ್ದಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಮುಲ್ ಹಾಲು, ಮೊಸರು ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದರು. ಜತೆಗೆ, ಬೆಳಗಾವಿಯ 865 ಹಳ್ಳಿಗಳಿಗೆ ಮಹಾರಾಷ್ಟ್ರ ಆರೋಗ್ಯ ವಿಮೆ ಯೋಜನೆ ನೀಡಿರುವ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ರಾಜ್ಯದ ನೆಲ, ಜಲ ಉಳಿಸುವವರು ಈಗ ಮಾತೇ ಆಡುತ್ತಿಲ್ಲವಲ್ಲ? ರಾಜ್ಯದ ನೆಲ, ಜಲ, ಭಾಷೆ ಕಾಪಾಡಿ ಜನರ ಹಿತ ಕಾಯುವ ಪ್ರತಿಜ್ಞೆ ಮಾಡುವ ಮೂಲಕ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಾವೇನೋ ಚುನಾವಣೆಯಲ್ಲಿ ವ್ಯಸ್ತರಾಗಿದ್ದೇವೆ. ಜತೆಗೆ, ಸಿನಿಮಾ ನಟರು, ಕನ್ನಡ ಪರ ಹೋರಾಟಗಾರರು ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.

ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣ ಎಂದರೆ ಫುಟ್ಬಾಲ್ ಅಲ್ಲ, ಚೆಸ್​ ಗೇಮ್​ ಇದ್ದಂತೆ. ಕಾಂಗ್ರೆಸ್​ಗೆ ಸೇರಿಸಿಕೊಳ್ಳುವಾಗ ಟಿಕೆಟ್​ ಕೊಡುವುದಾಗಿ ಹೇಳಿರಲಿಲ್ಲ. ಬೇಷರತ್​ ಆಗಿ ಪಕ್ಷಕ್ಕೆ ಸೇರಿಸಿಕೊಂಡಿದ್ದೆವು. ಪಕ್ಷಕ್ಕೆ ಸೇರಿದವರೆಲ್ಲರಿಗೂ ಟಿಕೆಟ್​ ಕೊಡಲು ಆಗುವುದಿಲ್ಲ. ಅಸಮಾಧಾನ ಇರುವವರನ್ನು ಕರೆದು ಮಾತನಾಡುತ್ತೇವೆ, ಅಸಮಾಧಾನ ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:06 pm, Fri, 7 April 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್