ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ: ಡಿಸಿಎಂ ಹೇಳಿದ್ದಿಷ್ಟು…

ಹೈಕಮಾಂಡ್ ನೀಡಿರುವ ಸೂಚನೆ ಚಿಕ್ಕವರಿಂದ ಹಿಡಿದು ದೊಡ್ಡ ನಾಯಕರವರೆಗೆ ಅನ್ವಯವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದರು. ಅದರ ಬೆನ್ನಲ್ಲೇ, ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದರು. ಇದೀಗ ಡಿಕೆಶಿ ಮೌನ ಮುರಿದಿದ್ದಾರೆ.

ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ: ಡಿಸಿಎಂ ಹೇಳಿದ್ದಿಷ್ಟು...
ಡಿಕೆ ಶಿವಕುಮಾರ್
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Nov 02, 2023 | 8:24 PM

ಬೆಂಗಳೂರು, ನವೆಂಬರ್ 2: ನಾನೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದೇನೆ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ಪಕ್ಷದ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ‌ಕೇಳುತ್ತೇವೆ ಅಷ್ಟೆ. ನಾನು ಯಾವತ್ತೂ ಏನೂ ಮಾತನಾಡಿಲ್ಲ, ಮಾತನಾಡುವುದೂ ಇಲ್ಲ. ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಸದ್ಯ ನಾನು ಮುಖ್ಯಮಂತ್ರಿಯಾಗಿದ್ದೇನೆ. ನಾನೇ ಹುದ್ದೆಯಲ್ಲಿ ಮುಂದುವರಿಯಲಿದ್ದೇನೆ. ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅವರ ಈ ಹೇಳಿಕೆ ಕಾಂಗ್ರೆಸ್​​ನಲ್ಲಿ ಮತ್ತೆ ಆಂತರಿಕ ತಲ್ಲಣಕ್ಕೆ ಕಾರಣವಾಗಿದೆ.

ಹೈಕಮಾಂಡ್ ನೀಡಿರುವ ಸೂಚನೆ ಚಿಕ್ಕವರಿಂದ ಹಿಡಿದು ದೊಡ್ಡ ನಾಯಕರವರೆಗೆ ಅನ್ವಯವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದರು. ಅದರ ಬೆನ್ನಲ್ಲೇ, ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ವರಿಷ್ಠರ ಸೂಚನೆಗೂ ಬಗ್ಗದ ಕಾಂಗ್ರೆಸ್ಸಿಗರು: ಒಂದೂವರೆ ವರ್ಷದ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಇಕ್ಬಾಲ್ ಹುಸೇನ್

ಬುಧವಾರವಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರ ಜತೆ ಸಭೆ ನಡೆಸಿತ್ತು. ಬಳಿಕ, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಬಾರದು. ಏನಿದ್ದರೂ ಸಿಎಂ, ಡಿಸಿಎಂ ಬಳಿ ಅಥವಾ ನಮ್ಮ ಬಳಿ ಚರ್ಚಿಸಿ ಎಂದು ನಾಯಕರಿಗೆ ಹೈಕಮಾಂಡ್ ಸೂಚಿಸಿತ್ತು. ಇದಾದ ಮರುದಿನವೇ ರಾಜ್ಯದಲ್ಲಿ ಸಿಎಂ ಹೇಳಿಕೆಯೇ ಪಕ್ಷದ ಆಂತರಿಕ ಬೇಗುದಿಗೆ ಕಾರಣವಾಗಿದೆ.

ರಾಜಕಾರಣಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ