AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೆ ಎಷ್ಟು ಗೌರವ ಕೋಡಬೇಕೆಂದು ನಮಗೆ ಗೊತ್ತಿದೆ; ಆರ್ ಅಶೋಕ್​ಗೆ ಡಿಕೆ ಶಿವಕುಮಾರ್ ತಿರುಗೇಟು

ಶಾಸಕ ಆರ್​ ಅಶೋಕ್​ಗೆ ಸ್ವಲ್ಪ ಪ್ರಾಬ್ಲಂ ಇದೆ. ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ನಮಗೆ ಇದೆ. ಪ್ರಧಾನಮಂತ್ರಿ ಕಚೇರಿಯಿಂದ ನಮಗೆ ಕರೆ ಬಂದಿತ್ತು. ಪ್ರಧಾನಿಯವರ ಸ್ವಾಗತಕ್ಕೆ ಬರುವುದು ಬೇಡ ಎಂದು ಕೇಂದ್ರ ಸರ್ಕಾರವೇ ನಮಗೆ ಹೇಳಿತ್ತು. ಹಾಗಾಗಿ ಸರ್ಕಾರದ ವತಿಯಿಂದ ಪ್ರಧಾನಿ ಮೋದಿ ಅವರ ಸ್ವಾಗತ ಮಾಡಿಸಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

ಯಾರಿಗೆ ಎಷ್ಟು ಗೌರವ ಕೋಡಬೇಕೆಂದು ನಮಗೆ ಗೊತ್ತಿದೆ; ಆರ್ ಅಶೋಕ್​ಗೆ ಡಿಕೆ ಶಿವಕುಮಾರ್ ತಿರುಗೇಟು
ಡಿಕೆ ಶಿವಕುಮಾರ್ & ಆರ್ ಅಶೋಕ್
TV9 Web
| Edited By: |

Updated on: Aug 26, 2023 | 12:59 PM

Share

ಬೆಂಗಳೂರು, ಆಗಸ್ಟ್ 26: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬೆಂಗಳೂರು ಭೇಟಿ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಿಷ್ಟಾಚಾರ ಪಾಲನೆ ಮಾಡಿಲ್ಲ ಎಂಬ ಬಿಜೆಪಿ ನಾಯಕ ಆರ್ ಅಶೋಕ ಟೀಕೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಯಾರಿಗೆ ಎಷ್ಟು ಗೌರವ ಕೋಡಬೇಕೆಂದು ನಮಗೆ ಗೊತ್ತಿದೆ. ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ಇದೆ. ಅಶೋಕ್ ಅವರಿಗೆ ಸ್ವಲ್ಪ ಸಮಸ್ಯೆ ಇದ್ದಂತಿದೆ ಎಂದು ಹೇಳಿದರು.

ಶಾಸಕ ಆರ್​ ಅಶೋಕ್​ಗೆ ಸ್ವಲ್ಪ ಪ್ರಾಬ್ಲಂ ಇದೆ. ರಾಜಕೀಯ ಪ್ರಜ್ಞೆ, ಸಮಯ ಪ್ರಜ್ಞೆ ಎಲ್ಲವೂ ನಮಗೆ ಇದೆ. ಪ್ರಧಾನಮಂತ್ರಿ ಕಚೇರಿಯಿಂದ ನಮಗೆ ಕರೆ ಬಂದಿತ್ತು. ಪ್ರಧಾನಿಯವರ ಸ್ವಾಗತಕ್ಕೆ ಬರುವುದು ಬೇಡ ಎಂದು ಕೇಂದ್ರ ಸರ್ಕಾರವೇ ನಮಗೆ ಹೇಳಿತ್ತು. ಹಾಗಾಗಿ ಸರ್ಕಾರದ ವತಿಯಿಂದ ಪ್ರಧಾನಿ ಮೋದಿ ಅವರ ಸ್ವಾಗತ ಮಾಡಿಸಿದ್ದೇವೆ. ಯಾರಿಗೆ ಎಷ್ಟು ಗೌರವ ಕೋಡಬೇಕು ಅಂತಾ ನಮಗೆ ಗೊತ್ತಿದೆ. ಬೇರೆ ರಾಜ್ಯಗಳ ರೀತಿ ಅಲ್ಲ ನಮ್ಮ ಸಂಸ್ಕೃತಿ. ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಪ್ರಧಾನಿ ಅವರಿಗೆ ಗೌರವ ಕೊಡುತ್ತೇವೆ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ: PM Modi ISRO Visit: ಪ್ರಧಾನಿ ಮೋದಿ ಸ್ವಾಗತಕ್ಕೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಹೋಗದ್ದೇಕೆ? ಇಲ್ಲಿದೆ ಕಾರಣ

ಅತ್ತ ಮೋದಿ ಕೂಡ ಹೆಚ್​ಎಎಲ್​ ಏರ್​ಪೋರ್ಟ್​ ಹೊರಭಾಗದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಧನ್ಯವಾದ ಎಂದು ಹೇಳಿದ್ದರು. ಪ್ರೋಟೋಕಾಲ್ ಪ್ರಕಾರ (ಶಿಷ್ಟಾಚಾರ) ಇಷ್ಟೊಂದು ಕಡಿಮೆ ಅವಧಿಯಲ್ಲಿ ವ್ಯವಸ್ಥೆ ಮಾಡಿದ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು ಎಂದು ಹೇಳಿದ್ದರು. ಬಹು ದೂರದ ಅಥೆನ್ಸ್​ನಿಂದ ಬರುವುದಾದ ಕಾರಣ ನಿಖರವಾಗಿ ಇಂತಿಷ್ಟೇ ಹೊತ್ತಿಗೆ ಬೆಂಗಳೂರಿಗೆ ತಲುಪಬಹುದು ಎಂಬ ಖಚಿತತೆ ಇರಲಿಲ್ಲ. ತಮ್ಮ ಸ್ವಾಗತಕ್ಕೆ ಮುಖ್ಯಮಂತ್ರಿ, ರಾಜ್ಯಪಾಲರು ಬಂದು ತಾಸುಗಟ್ಟಲೆ ಕಾಯುವುದು ಬೇಡ ಎಂಬ ಕಾರಣಕ್ಕೆ ಅಧಿಕಾರಿಗಳನ್ನಷ್ಟೇ ಕಳುಹಿಸಿದರೆ ಸಾಕು ಎಂದು ಮೋದಿ ಹೇಳಿದ್ದರು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್