ನಾನೇ ನಿಮ್ಮ ಮುಂದೆ ಬರ್ತೇನೆ, ಗುಂಡಿಟ್ಟು ಕೊಲ್ಲಿ; ಈಶ್ವರಪ್ಪಗೆ ಡಿಕೆ ಸುರೇಶ್ ಸವಾಲ್‌

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಡಿ ಕೆ ಸುರೇಶ್ ಹಾಗೂ ಅವರ ಸಹೋದರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಅದರಲ್ಲೂ ಡಿಕೆ ಶಿವಕುಮಾರ್, ಈಶ್ವರಪ್ಪಗೆ​ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ನಾನೇ ನಿಮ್ಮ ಮುಂದೆ ಬರ್ತೇನೆ, ಗುಂಡಿಟ್ಟು ಕೊಲ್ಲಿ; ಈಶ್ವರಪ್ಪಗೆ ಡಿಕೆ ಸುರೇಶ್ ಸವಾಲ್‌
Follow us
| Updated By: ರಮೇಶ್ ಬಿ. ಜವಳಗೇರಾ

Updated on:Feb 10, 2024 | 2:44 PM

ಬೆಂಗಳೂರು (ಫೆಬ್ರವರಿ 10): ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಿ ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ  (KS Eshwarappa) ಹೇಳಿಕೆಗೆ ಡಿ ಕೆ ಸುರೇಶ್ (DK Suresh) ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಏಕೆ ಗುಂಡಿಕ್ಕಿ ಕೊಲ್ಲಬೇಕು, ನೀವು ಸಮಯ ಕೊಟ್ಟರೆ ನಿಮ್ಮ ಎದುರು ಬಂದು ನಿಲ್ಲುತ್ತೇನೆ, ನೀವೇ ಗುಂಡಿಕ್ಕಿ ಕೊಂದುಬಿಡಿ ಈಶ್ವರಪ್ಪನವರೇ, ಕನ್ನಡಿಗರಿಗಾಗಿ, ಕರ್ನಾಟಕ್ಕೋಸ್ಕರ ಇನ್ನೊಂದು ವಾರದೊಳಗೆ ಸಮಯ ಕೊಡುತ್ತೇನೆ, ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ, ದಯವಿಟ್ಟು ನಿಮ್ಮ ಆಸೆ ಈಡೇರಿಸಿಕೊಂಡು ನಿಮ್ಮ ನಾಯಕರಿಂದ ಶಹಬ್ಬಾಸ್ ಗಿರಿ ತೆಗೆದುಕೊಳ್ಳಿ ಎಂದು ವ್ಯಂಗ್ಯವಾಡಿದರು.

ಮಹಾತ್ಮಾ ಗಾಂಧಿಯವರನ್ನು ಕೊಂದ ಕೀರ್ತಿ ಬಿಜೆಪಿ ಪಕ್ಷಕ್ಕಿದೆ. ಕನ್ನಡಪರ, ಕರ್ನಾಟಕ ಪರ ಧ್ವನಿಯೆತ್ತಿದ್ದಕ್ಕೆ ನನ್ನನ್ನು ಗುಂಡಿಕ್ಕಿ ಕೊಲ್ಲಿ ಎಂದು ಹೇಳುತ್ತಿದ್ದಾರೆ. ಬಡವರನ್ನು ಬಾವಿಗೆ ತಳ್ಳಿ ಯಾಕೆ ಆಟ ನೋಡುತ್ತೀರಿ, ನಿಮಗೆ ರಾಜ್ಯಪಾಲ ಹುದ್ದೆಯ ಆಸೆ ಇರಬೇಕೆಂದು ಕಾಣಿಸುತ್ತದೆ. ಬಿಜೆಪಿಯವರು ನಿಮ್ಮನ್ನು ಮೂಲೆಗುಂಪು ಮಾಡುತ್ತಿದ್ದಾರೆ ಅಂತ ಕಾಣಿಸುತ್ತದೆ. ಇದರಿಂದಾಗಿ ನೊಂದು ಹಿರಿಯರಾಗಿದ್ದರೂ ಕೂಡ ಏನೋ ಮಾತನಾಡಬೇಕೆಂದು ಆಗಾಗ ಈ ರೀತಿ ಮಾತನಾಡುತ್ತಿದ್ದೀರಿ ಎಂದು ಕಾಣಿಸುತ್ತಿದೆ ಎಂದು ಈಶ್ವರಪ್ಪಗೆ ಟಾಂಗ್ ಕೊಟ್ಟರು.

ಇದನ್ನೂ ಓದಿ: ಗುಂಡಿಕ್ಕಿ ಕೊಲ್ಲಿ ಹೇಳಿಕೆ: ಪೊಲೀಸರ ನೋಟಿಸಿಗೂ ಜಗ್ಗದೆ ಮತ್ತೆ ಗುಡುಗಿದ ಈಶ್ವರಪ್ಪ

ಈಶ್ವರಪ್ಪಗೆ ಒಂದು ರೌಂಡ್ ಸೆಟಲ್​ಮೆಂಟ್​ ಆಗಿದೆ

ಇನ್ನು ಈ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಈಶ್ವರಪ್ಪ ಅವರಿಗೆ ಒಂದ್ ರೌಂಡ್ ಸೆಟಲ್​ಮೆಂಟ್‌ ಆಗಿದೆ. ಹಿಂದೆ ಅಸೆಂಬ್ಲಿಯಲ್ಲಿ ಹೀಗೆ ಮಾತನಾಡಿದ್ರು ನಿಮಗೆ ನೆನಪಿದ್ಯಾ? ನಮ್ಮ ತಂದೆಯವರನ್ನ ನೆನಪಿಸಿಕೊಂಡಿದ್ದರು. ಈಗ ಎಲ್ಲಿದ್ದಾರೆ ಈಶ್ವರಪ್ಪ ಅವರು. ಯಾರ್ಯಾರು ನಮ್ಮ ಸುದ್ದಿಗೆ ಬಂದಿದಾರೋ ಅವರಿಗೆಲ್ಲ ಒಂದೊಂದೇ ಸೆಟಲ್​ಮೆಂಟ್ ಆಗುತ್ತಿದೆ ಎಂದು ಹೇಳಿದರು. ಪರೋಕ್ಷವಾಗಿ ಅವರಿಗೆ ಟಿಕೆಟ್​ ಸಿಗದೇ ಅವರ ಯಾವ ಸ್ಥಿತಿಯಲ್ಲಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಗುಂಡಿಟ್ಟು ಕೊಲ್ಲುತ್ತೇನೆ ಅಂತಾರೆ ಕೊಲ್ಲಲಿ ಬಿಡಿ. ಡಿಕೆ ಸುರೇಶ್ ಅವರದು ಈ ಗುಂಡಿಗೆ ಹೆದರುವ ಬ್ಲಡ್ ಅಲ್ಲ.ಬೆಂಗಳೂರಿನಲ್ಲಿ ನಮ್ಮದೇ ಆದ ಇತಿಹಾಸವಿದೆ. ರಾಜಕಾರಣ ಮಾಡಬೇಕಾದವರು. ಹಿಂದೆನೂ‌ ಹೇಳಿದ್ದೇನೆ. ನಾವು ಹುಲ್ಲು ಗಾಡಿನ‌ ಹಿಡ್ಕೊಂಡು ಬರಲಿಲ್ಲ. ಕಿವಿ ಮೇಲೆ ಹೂ ಇಟ್ಕೊಂಡು ಬರಲಿಲ್ಲ ಎಂದು ಈಶ್ವರಪ್ಪಗೆ ಪರೋಕ್ಷವಾಗಿ ಎಚ್ಚರಿಕೆ ಸಂದೇಶ ರವಾನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:42 pm, Sat, 10 February 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ