DK Suresh: ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ: ಸಂಸದ ಡಿಕೆ ಸುರೇಶ್ ಸ್ಪಷ್ಟನೆ

ರಾಮನಗರ ಕ್ಷೇತ್ರದಿಂದ ಡಿಕೆ ಸುರೇಶ್​ರನ್ನು ಕಣಕ್ಕಿಳಿಸುವ ಬಗ್ಗೆ ಡಿ.ಕೆ.ಶಿವಕುಮಾರ್​ ಸುಳಿವು ನೀಡಿದರ ಬೆನ್ನೆಲೆ ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಸಂಸದ ಡಿಕೆ ಸುರೇಶ್ ಸ್ಪಷ್ಟನೆ ನೀಡಿದ್ದಾರೆ.

DK Suresh: ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ: ಸಂಸದ ಡಿಕೆ ಸುರೇಶ್ ಸ್ಪಷ್ಟನೆ
ಡಿಕೆ ಸುರೇಶ್Image Credit source: varthabharati.in
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 15, 2023 | 7:16 PM

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ (Ramanagara)  ಕ್ಷೇತ್ರದಿಂದ ಡಿಕೆ ಸುರೇಶ್​ರನ್ನು (DK Suresh) ಕಣಕ್ಕಿಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಇತ್ತೀಚೆಗೆ ಸುಳಿವು ನೀಡಿದ್ದರು. ಇದರ ಬೆನ್ನೆಲೆ ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಸಂಸದ ಡಿಕೆ ಸುರೇಶ್ ಇಂದು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನೊಂದಿಗೆ ಚರ್ಚಿಸದ ವಿಷಯದ ಬಗ್ಗೆ ನಾನು ನಿಮ್ಮೊಂದಿಗೆ ಹೇಗೆ ಚರ್ಚಿಸಲಿ. ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಅಲ್ಲದೆ, ಕಳೆದ ಇಪ್ಪತ್ತು ವರ್ಷಗಳಲ್ಲಿ ಹಲವಾರು ಉಪಚುನಾವಣೆಗಳ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ, ಸಾರ್ವಜನಿಕ ಹಣವನ್ನು ವ್ಯರ್ಥ ಮಾಡುವುದನ್ನು ನಾನು ಇಷ್ಟಪಡುವುದಿಲ್ಲ ಎಂದು ಸುರೇಶ್​ ಉತ್ತರಿಸಿದ್ದಾರೆ.

ಚನ್ನಪಟ್ಟಣ, ರಾಜರಾಜೇಶ್ವರಿ ನಗರ ಸೇರಿದಂತೆ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ಕ್ಷೇತ್ರಗಳು, ಹೊರಗಿನ 4 ಕ್ಷೇತ್ರಗಳು ಸೇರಿದಂತೆ ಒಟ್ಟು 10 ಕ್ಷೇತ್ರಗಳಿಂದ ನನ್ನ ಸ್ಪರ್ಧೆಗೆ ಆಹ್ವಾನವಿದೆ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿಯನ್ನು ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Karnataka polls: ರಾಮನಗರದಿಂದ ಡಿಕೆ ಸುರೇಶ್ ಸ್ಪರ್ಧೆ; ಮಹತ್ವದ ಸುಳಿವು ಕೊಟ್ಟ ಡಿಕೆ ಶಿವಕುಮಾರ್

ಸದ್ಯಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿಲ್ಲ

ನಾನು ಸದ್ಯಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧನಿಲ್ಲ. ಒಂದು ವೇಳೆ ನಿರ್ಧರಿಸಿದರೆ ಹೈಕಮಾಂಡ್ ಸೂಚನೆ ಮಾತ್ರವಲ್ಲದೆ, ನನ್ನ ಮೇಲೆ ವಿಶ್ವಾಸವಿಟ್ಟು ನನ್ನನ್ನು ಮೂರು ಬಾರಿ ಲೋಕಸಭೆಗೆ ಕಳುಹಿಸಿದ್ದ ನನ್ನ ಕ್ಷೇತ್ರದ ಕಾರ್ಯಕರ್ತರಿಂದಲೂ ನಾನು ಅನುಮತಿ ಪಡೆಯಬೇಕಾಗುತ್ತದೆ. ಆದ್ದರಿಂದ ಚುನಾವಣೆಗೆ ಸ್ಪರ್ಧಿಸಲು, ಸ್ಥಳೀಯ ಕಾರ್ಯಕರ್ತರು ಸೇರಿದಂತೆ ವಿವಿಧ ಅಂಶಗಳನ್ನು ಗಣನೆಗೆ ತೆಗೆದುಕೊಂಡು ವಿವರವಾಗಿ ಚರ್ಚಿಸಬೇಕಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದುಳಿದ, SCST ಸಮುದಾಯಗಳನ್ನು ವರ್ಷಕ್ಕೊಮ್ಮೆ ಮೇಲೆತ್ತುವುದು, ಮತ್ತೆ ಬಾವಿಗೆ ಹಾಕುವುದು: ಕಾಂಗ್ರೆಸ್​ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ರಾಮನಗರದಲ್ಲಿ ಸಹೋದರನನ್ನು ಕಣಕ್ಕಿಳಿಸಲು ಸಜ್ಜಾದ ಶಿವಕುಮಾರ್ 

ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ರಾಮನಗರದಲ್ಲಿ ಸಂಸದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಹೈಕಮಾಂಡ್​​ ಮಟ್ಟದಲ್ಲಿಯೂ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ತಿಳಿಸಿದ್ದಾರೆ. ಡಿಕೆ ಸುರೇಶ್ ಸ್ಪರ್ಧಿಸಬೇಕು ಎಂದು ಬಹಳ ದಿನಗಳಿಂದ ಈ ಭಾಗದ ನಮ್ಮ ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಈ‌ ಕ್ಷೇತ್ರದಲ್ಲಿ ಒಂದು ಇತಿಹಾಸ ಇದೆ. ಪಕ್ಷ ಸೂಚಿಸಿದ ಮೇಲೆ ಏನೂ ಮಾಡಲಾಗದು. ನಾನು ಸಚಿವನಾಗಿದ್ದವನು ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿರಲಿಲ್ಲವೇ? ರಾಜಕೀಯದಲ್ಲಿ ಕೆಲವು ಸಂದರ್ಭಗಳಲ್ಲಿ ಅನಿವಾರ್ಯ ಎದುರಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:15 pm, Wed, 15 March 23

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ