ಮಾರ್ಚ್ 17 ರ ನಂತರ ಚುನಾವಣಾ ರಾಜಕೀಯದಿಂದ ಶ್ರೀನಿವಾಸ್ ಪ್ರಸಾದ್ ನಿವೃತ್ತಿ

| Updated By: Rakesh Nayak Manchi

Updated on: Feb 22, 2024 | 1:04 PM

ಶೀಘ್ರದಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ ಬಿಜೆಪಿ ಸಂಸದ ಸಿಎಂ ಸಿದ್ದರಾಮಯ್ಯರನ್ನು ಪ್ರಧಾನಿ ಮೋದಿಗೆ ಹೋಲಿಸಬೇಡಿ. ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ, ಮೋದಿ ಸಮುದ್ರದೊಳಗೆ ಈಜಿದ ನಾಯಕ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದರು. ಚಾಮರಾಜನಗರ ಲೋಕಸಭ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಅವರು, ನನ್ನ ಅಳಿಯ ಡಾ.ಮೋಹನ್ ಆಕಾಂಕ್ಷಿ ಅಂತ ಅಂದುಕೊಂಡಿದ್ದೆ. ಇದೀಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಾಗಿದ್ದಾರೆ ಎಂದರು.

ಮಾರ್ಚ್ 17 ರ ನಂತರ ಚುನಾವಣಾ ರಾಜಕೀಯದಿಂದ ಶ್ರೀನಿವಾಸ್ ಪ್ರಸಾದ್ ನಿವೃತ್ತಿ
ಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ, ಮೋದಿ ಸಮುದ್ರದಲ್ಲಿ ಈಜಿರುವ ನಾಯಕ ಎಂದ ಶ್ರೀನಿವಾಸ್ ಪ್ರಸಾದ್ ಮಾರ್ಚ್​ 17 ರ ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದರು
Follow us on

ಮೈಸೂರು, ಫೆ.22: ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ (Srinivasa Prasad) ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು‌ ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಮುದ್ರದಲ್ಲಿ ಈಜಿರುವ ನಾಯಕ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಪ್ರಧಾನಿ ಮೋದಿಗೆ ಹೋಲಿಸಬೇಡಿ ಎಂದರು.

ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾಡುವುದನ್ನು ಕಲಿತಿದ್ದಾನೆ. ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್ ಖಾನ್​ಗೆ ಏನು ವ್ಯತ್ಯಾಸ ಇದೆ ಹೇಳಿ? ಇಬ್ಬರು ಕೂಡಾ ಸುಮ್ಮನೆ ಕೂಗಾಡುತ್ತಾರೆ ಎಂದರು. ಅಲ್ಲದೆ, ಶೀಘ್ರದಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದರು.

ಚಾಮರಾಜನಗರ ಬಿಜೆಪಿ ಟಿಕೆಟ್​ಗಾಗಿ ಒಂದೇ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳು

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಡಾ.ಮೋಹನ್ ಅವರು ಆಕಾಂಕ್ಷಿಯಾಗಿದ್ದರು. ಇದೀಗ ಹರ್ಷವರ್ಧನ್ ಕೂಡ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ನನಗೆ ನನ್ನ ಅಳಿಯ ಡಾ.ಮೋಹನ್ ಆಕಾಂಕ್ಷಿ ಎನ್ನುವುದು ಗೊತ್ತಿತ್ತು. ಈಗ ಹರ್ಷವರ್ಧನ್ ಆಕಾಂಕ್ಷಿ ಎಂಬುದು ಗೊತ್ತಾಗಿದೆ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ ಎಂದರು.

ಇದನ್ನೂ ಓದಿ: ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್; ಹೆಚ್​ಡಿ ಕುಮಾರಸ್ವಾಮಿ, ಅಮಿತ್ ಶಾ ಮಾತುಕತೆ

ಮೋಹನ್ ಹಾಗೂ ಹರ್ಷವರ್ಧನ್ ತುಂಬಾ ಅನ್ಯೋನ್ಯವಾಗಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆ. ಚಾಮರಾಜನಗರ ಕ್ಷೇತ್ರದ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಹೇಳಿದ್ದೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Thu, 22 February 24