ಯಾರೂ ಹೆಚ್ಚಾದ ಕರೆಂಟ್ ಬಿಲ್​ನ್ನು ಪಾವತಿ ಮಾಡಬೇಡಿ: ಸಾರ್ವಜನಿಕರಲ್ಲಿ ವಿನಂತಿಸಿದ ಶಾಸಕ ಯತ್ನಾಳ್​

ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಯಾರೂ ಹೆಚ್ಚಾದ ಕರೆಂಟ್ ಬಿಲ್​ನ್ನು ಪಾವತಿ ಮಾಡಬೇಡಿ: ಸಾರ್ವಜನಿಕರಲ್ಲಿ ವಿನಂತಿಸಿದ ಶಾಸಕ ಯತ್ನಾಳ್​
ಬಸನಗೌಡ ಪಾಟೀಲ್ ಯತ್ನಾಳ್
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 10, 2023 | 6:23 PM

ವಿಜಯಪುರ: ಯಾವ ಷರತ್ತಿಲ್ಲದೆ ಎಲ್ಲರಿಗೂ ಉಚಿತ, ಖಚಿತ, ನಿಶ್ಚಿತ ಎಂದಿದ್ದರು. ಆದರೆ ಈಗ ಷರತ್ತು ವಿಧಿಸಿ ಕರ್ನಾಟಕದ ಜನತೆಗೆ ಮೋಸ ಮಾಡಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಷರತ್ತು ವಿಧಿಸಿರುವ ವಿಚಾರವಾಗಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal) ಕಿಡಿ ಕಾರಿದ್ದಾರೆ. 200 ಯೂನಿಟ್ ಒಳಗೆ ಬಳಸುವವರು ಬಿಲ್ ವಾಪಸ್ ಕಳಿಸಿ. 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಿನಮ್ರತೆಯಿಂದ ವಾಪಸ್​ ಕಳುಹಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಮಹಿಳೆಯರು ಎಲ್ಲಾ ಬಸ್‌ಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ. ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಾ ಪಾಟೀಲನಿಗೂ ಕೊಡಬೇಕು. ಎಲ್ಲರಿಗೂ ಕೊಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯತ್ನಾಳ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: CM Siddaramaiah: ಮೈಸೂರು ಭಾಗದಲ್ಲಿ ಡಾ ಯತೀಂದ್ರ ತನಗಿಂತ ಹೆಚ್ಚು ಜನಪ್ರಿಯ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸುತ್ತಾರೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಟ್ವೀಟ್​ನಲ್ಲಿ ಏನಿದೆ?

ಸಾರ್ವಜನಿಕರಲ್ಲಿ ವಿನಂತಿ

ಯಾವುದೇ ಷರತ್ತಿನಬಗ್ಗೆ ಹೇಳದೆ ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ.

  • ಯಾರು ಹೆಚ್ಚಾದ ಕರೆಂಟ್ ಬಿಲ್ ಪಾವತಿ ಮಾಡಬೇಡಿ, 200 ಯೂನಿಟ್ ಒಳಗೆ ಬಳಸುವವರು ಕರೆಂಟ್ ಬಿಲ್ ನೀಡುವವರನ್ನು ವಾಪಸ್ ವಿನಮ್ರತೆಯಿಂದ ಕಳುಹಿಸಿ.
  • ಮಹಿಳೆಯರು ಎಲ್ಲ ಬಸ್ಸುಗಳಲ್ಲೂ ಟಿಕೆಟ್ ತೆಗೆದುಕೊಳ್ಳಬೇಡಿ, ಕಂಡೆಕ್ಟರ್ ಹಾಗು ಸಿಬ್ಬಂದಿಗೆ ಸಿದ್ದರಾಮಯ್ಯರನ್ನು ಕೇಳಿ ಎಂದು ಹೇಳಿ.
  • ನೀರಿನ ಬಿಲ್ ಹೆಚ್ಚಾದರೆ ವಾಪಸ್ ಕಳುಹಿಸಿ.
  • 2000 ರೂ ಪಡೆಯಲು ಎಲ್ಲ ಮಹಿಳೆಯರು ನೋಂದಾಯಿಸಿ.

ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದೆ, ಕೊಟ್ಟ ಮಾತನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಬೇಕು. ಮಹದೇವಪ್ಪನಿಗೂ ಕೊಡಬೇಕು, ಕಾಕಪಾಟಿಲನಿಗೂ ಕೊಡಬೇಕು, ಎಲ್ಲರಿಗೂ ಕೊಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಖ್ಯಮಂತ್ರಿಯವರು ಜಾತಿಗಣತಿ ವರದಿಯ ಅಧ್ಯಯನ ಮಾಡುತ್ತಿದ್ದಾರೆ: ಪರಮೇಶ್ವರ್
ಮುಖ್ಯಮಂತ್ರಿಯವರು ಜಾತಿಗಣತಿ ವರದಿಯ ಅಧ್ಯಯನ ಮಾಡುತ್ತಿದ್ದಾರೆ: ಪರಮೇಶ್ವರ್
ಮಹಿಳಾ ಪ್ರಯಾಣಿಕರಿಂದ ತುಂಬಿದ ಬಸ್: ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ
ಮಹಿಳಾ ಪ್ರಯಾಣಿಕರಿಂದ ತುಂಬಿದ ಬಸ್: ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ
ಚಿಕ್ಕಂದಿನಲ್ಲಿ ಅಪ್ಪನ ಕಳೆದುಕೊಂಡಿದ್ದ ವಿಕ್ರಂಗೌಡ ತಂಗಿಯ ಮದುವೆ ಮಾಡಿಸಿದ್ದ
ಚಿಕ್ಕಂದಿನಲ್ಲಿ ಅಪ್ಪನ ಕಳೆದುಕೊಂಡಿದ್ದ ವಿಕ್ರಂಗೌಡ ತಂಗಿಯ ಮದುವೆ ಮಾಡಿಸಿದ್ದ
ಶೋರೂಮಲ್ಲಿದ್ದ ಬ್ಯಾಟರಿಗಳು ಸ್ಪೋಟಗೊಂಡ ಕಾರಣ ಹೆಚ್ಚಿದ ಬೆಂಕಿ ಪ್ರಮಾಣ
ಶೋರೂಮಲ್ಲಿದ್ದ ಬ್ಯಾಟರಿಗಳು ಸ್ಪೋಟಗೊಂಡ ಕಾರಣ ಹೆಚ್ಚಿದ ಬೆಂಕಿ ಪ್ರಮಾಣ
ರಾಯಚೂರಿನಲ್ಲಿ ಮಧ್ಯರಾತ್ರಿ ಜೆಸಿಬಿ ಘರ್ಜನೆ: ಶಿವ, ಗಣೇಶನ ಗುಡಿ ತೆರವು
ರಾಯಚೂರಿನಲ್ಲಿ ಮಧ್ಯರಾತ್ರಿ ಜೆಸಿಬಿ ಘರ್ಜನೆ: ಶಿವ, ಗಣೇಶನ ಗುಡಿ ತೆರವು
ಪ್ರಧಾನಿ ಮೋದಿಯನ್ನು ಅಪ್ಪುಗೆಯಿಂದ ಬರಮಾಡಿಕೊಂಡ ಇರ್ಫಾನ್ ಅಲಿ
ಪ್ರಧಾನಿ ಮೋದಿಯನ್ನು ಅಪ್ಪುಗೆಯಿಂದ ಬರಮಾಡಿಕೊಂಡ ಇರ್ಫಾನ್ ಅಲಿ
ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗ್ತಾರಾ?
ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗ್ತಾರಾ?
ಸರ್ಫರಾಝ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ
ಸರ್ಫರಾಝ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ
ಅರಳಿ ಮರದ ಎಲೆ ದೀಪದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
ಅರಳಿ ಮರದ ಎಲೆ ದೀಪದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ