ಗೃಹಲಕ್ಷ್ಮೀ ಯೋಜನೆಗೆ 1 ರೂ ಖರ್ಚು ಮಾಡುವುದು ಬೇಡ, ನಿಗದಿಯಾದ ಹಣವನ್ನು ಸರ್ಕಾರವೇ ಭರಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆ ಅರ್ಜಿ ಹೆಸರಿನಲ್ಲಿ 150 ರೂ. ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತಿಯಾಗಿ ಪ್ರತಿಕ್ರಿಯೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆಗೆ ಒಂದೂ ರೂ. ಖರ್ಚು ಮಾಡುವುದು ಬೇಡ. ಅರ್ಜಿ ಸಲ್ಲಿಕೆಗೆ ನಿಗದಿಯಾದ 20 ರೂ. ಹಣವನ್ನು ಸರ್ಕಾರ ಭರಿಸಲಿದೆ ಎಂದಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ 1 ರೂ ಖರ್ಚು ಮಾಡುವುದು ಬೇಡ, ನಿಗದಿಯಾದ ಹಣವನ್ನು ಸರ್ಕಾರವೇ ಭರಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Edited By:

Updated on: Jun 29, 2023 | 5:53 PM

ಬೆಳಗಾವಿ: ಆನಲೈನ್​ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಅರ್ಜಿ ಹೆಸರಿನಲ್ಲಿ 150 ರೂ. ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಳ್ಳಾರಿಯಲ್ಲಿ ಈ ರೀತಿ ಪ್ರಕರಣ ನಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಗೃಹಲಕ್ಷ್ಮೀ ಯೋಜನೆಗೆ ಒಂದೂ ರೂ. ಖರ್ಚು ಮಾಡುವುದು ಬೇಡ. ಅರ್ಜಿ ಸಲ್ಲಿಕೆಗೆ ನಿಗದಿಯಾದ 20 ರೂ. ಹಣವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅರ್ಜಿಗೆ 20 ರೂ. ನೀಡುತ್ತೇವೆ

ನನ್ನ ಇಲಾಖೆಯ ಎಲ್ಲ ಸಿಬ್ಬಂದಿಗೂ ಈಗಾಗಲೇ ಸೂಚನೆ ನೀಡಿದ್ದೇನೆ. ಸೇವಾಸಿಂಧು, ಗ್ರಾಮ ಒನ್, ನಾಡಕಚೇರಿ, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್​ನಲ್ಲಿ ಅರ್ಜಿ ಸಲ್ಲಿಸುವ ವೆಚ್ಚವನ್ನು ಸರ್ಕಾರ ಭರಿಸುತ್ತೆ. ಸೇವಾ ಕೇಂದ್ರಗಳಿಗೆ ಇಲಾಖೆಯಿಂದಲೇ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅರ್ಜಿಗೆ 20 ರೂ. ನೀಡುತ್ತೇವೆ.

ಇದನ್ನೂ ಓದಿ: ಸಿದ್ದರಾಮಯ್ಯ ನಿವಾಸಕ್ಕೆ ಬೆನ್ಜ್ ಕಾರಿನಲ್ಲಿ ಬಂತು ಬಕ್ರೀದ್ ಬಿರಿಯಾನಿ

ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು. ಅರ್ಜಿ ಸಲ್ಲಿಕೆ ವೇಳೆ ಯಾರೂ ಒಂದು ರೂಪಾಯಿಯನ್ನೂ ಕೊಡಬೇಡಿ. ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಟೈಂ ಲಿಮಿಟ್ಸ್​​ ಇಲ್ಲ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ನಿರಂತರವಾಗಿ ಇರುತ್ತೆ ಎಂದು ಮಾಹಿತಿ ನೀಡಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಬೇಕು ಎಂಬುದೇ ನಮ್ಮ ಉದ್ದೇಶ

ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಹಾಲು ವಿತರಣೆ ಸ್ಥಗಿತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಳೆದ ನಾಲ್ಕು ತಿಂಗಳಿಂದ ನನ್ನ ಇಲಾಖೆಗೆ ಹಾಲು ಪೂರೈಕೆ ಆಗುತ್ತಿಲ್ಲ. ಕೆಎಂಎಫ್‌ನವರು ಹಿಂದಿನ ಬೆಲೆಗೆ ಹಾಲಿನ ಪೌಡರ್ ಕೊಡಲು ಆಗಲ್ಲ ಎಂದು ಸ್ಥಗಿತಗೊಳಿಸಿದ್ದಾರೆ. ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಬೇಕು ಎಂಬುದೇ ನಮ್ಮ ಉದ್ದೇಶ. ಹಾಲಿನ ಪೌಡರ್ ಕೊಡಲು ಆಗದಿದ್ದರೆ ಬೇರೆ ಪೌಷ್ಟಿಕ ಆಹಾರ ವಿತರಣೆ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟೀಕೆ ಮಾಡುವವರು ಅನ್ನಭಾಗ್ಯ ಫಲಾನುಭವಿಗಳಲ್ಲ: ಬಿಜೆಪಿ ನಾಯಕರಿಗೆ ಶಾಸಕ ರಾಘವೇಂದ್ರ ಹಿಟ್ನಾಳ್​ ತಿರುಗೇಟು

ಭಾವುಕರಾದ ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿಯಲ್ಲಿ ಗ್ರೇಡ್​-2 ತಹಶೀಲ್ದಾರ್​ ಅನುಮಾನಾಸ್ಪದ ಸಾವು ಹಿನ್ನೆಲೆ ಅಶೋಕ್ ಮಣ್ಣಿಕೇರಿ ಅಂತಿಮ ದರ್ಶನ ಪಡೆಯುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾದರು. ಬಳಿಕ ಮಾತನಾಡಿದ ಅವರು,​ ಮಧ್ಯರಾತ್ರಿ 3 ಗಂಟೆ ಸುಮಾರಿಗೆ 2-3 ಬಾರಿ ಮಿಸ್​​ಕಾಲ್​ ಇತ್ತು. ಬೆಳಗ್ಗೆ ಅಶೋಕ್​ ಅಣ್ಣಿಕೇರಿ ಮೃತಪಟ್ಟಿರುವುದು ಗೊತ್ತಾಯಿತು. ನಾಲ್ಕೂವರೆ ವರ್ಷ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು. ಅಶೋಕ್ ಮಣ್ಣಿಕೇರಿ ಕ್ಷೇತ್ರದ ಜನರ ಕಷ್ಟ ಸುಖ ಕೇಳುತ್ತಿದ್ದರು. ಇಂತಹ ಆಪ್ತ ಸಹಾಯಕನನ್ನು ಕಳೆದುಕೊಂಡಿದ್ದಕ್ಕೆ ನೋವಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us