AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿರಂಗ ಹೇಳಿಕೆ ನೀಡಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ನಾಯಕರಿಗೆ ಡಿಕೆ ಶಿವಕುಮಾರ್​ ಖಡಕ್​ ಎಚ್ಚರಿಕೆ

ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್​ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಕಾವೇರಿ ನಿವಾಸದ ಬಳಿ ಮಾಧ್ಯಮದರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​​​​, ಸಚಿವರು, ಕಾಂಗ್ರೆಸ್ ಶಾಸಕರು ಬಹಿರಂಗ ಹೇಳಿಕೆ ನೀಡಿ ಭವಿಷ್ಯ ಹಾಳು ಮಾಡಿಕೊಳ್ಳೋದು ಬೇಡ. ಹಾಗೆಯೇ ಪಕ್ಷದ ಭವಿಷ್ಯ ಹಾಳು ಮಾಡುವುದು ಬೇಡ ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ.

Malatesh Jaggin
| Updated By: ಗಂಗಾಧರ​ ಬ. ಸಾಬೋಜಿ

Updated on: Nov 04, 2023 | 2:56 PM

Share

ಬೆಂಗಳೂರು, ನವೆಂಬರ್​​​​​ 04: ಸಚಿವರು, ಕಾಂಗ್ರೆಸ್ ಶಾಸಕರು ಬಹಿರಂಗ ಹೇಳಿಕೆ ನೀಡಿ ಭವಿಷ್ಯ ಹಾಳು ಮಾಡಿಕೊಳ್ಳೋದು ಬೇಡ. ಹಾಗೆಯೇ ಪಕ್ಷದ ಭವಿಷ್ಯ ಹಾಳು ಮಾಡುವುದು ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​​​ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್​ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಕಾವೇರಿ ನಿವಾಸದ ಬಳಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬಹಿರಂಗ ಹೇಳಿಕೆ ನೀಡದಂತೆ ಎಲ್ಲರಿಗೂ ವಾರ್ನ್ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಉಸ್ತುವಾರಿ ಸಚಿವರಿಗೆ ಅವರವರ ಜವಾಬ್ದಾರಿಯನ್ನು ನೀಡಿದ್ದೇವೆ. ಲೋಕಸಭೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡಲು ಸೂಚಿಸಿದ್ದೇವೆ. ಮೂರ್ನಾಲ್ಕು ದಿನದಲ್ಲಿ ವರದಿ ನೀಡಲು ವೀಕ್ಷಕರಿಗೆ ಸೂಚಿಸಿದ್ದೇವೆ. ಈ ಹಿಂದೆ ನಾವೆಲ್ಲ ಬರ ಪ್ರವಾಸ ಮಾಡಿ ಸರ್ಕಾರಕ್ಕೆ ವರದಿ ನೀಡಿದ್ದೆವು. ಬಿಜೆಪಿ ಬರ ಅಧ್ಯಯನ ಬದಲು ಕೇಂದ್ರದಿಂದ ಹಣ ಕೊಡಿಸಲಿ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಉದ್ಘಾಟನೆ, ಟೇಪ್​ ಕತ್ತರಿಸಲು ಡಿಕೆ ಶಿವಕುಮಾರ್​ಗೆ ಕತ್ತರಿ ಕೊಟ್ಟ ಸಿದ್ದರಾಮಯ್ಯ

ಐಟಿ, ಇಡಿ, ಸಿಬಿಐ ಕೇಸ್ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ನಾನು ಭಯಪಡುವುದಿಲ್ಲ. ನಾನು, ನನ್ನ ಹೆಂಡತಿ ಅಕೌಂಟ್‌ ಜನರ ಮುಂದಿದೆ, ಟ್ಯಾಕ್ಸ್‌ ಕಟ್ಟುತ್ತೇವೆ ಎಂದು ಹೇಳಿದ್ದಾರೆ. ಗೃಹ ಲಕ್ಷ್ಮಿ ಖಾತೆಗೆ 10%  ಹಣ ಸರಿಯಾಗಿ ಪಾವತಿಯಾಗಿಲ್ಲ. ಅದನ್ನು ಸರಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಕಾಂತರಾಜ್‌ ಆಯೋಗದ ವರದಿ ಮರುಪರಿಶೀಲನೆಗೆ ಆಗ್ರಹ ವಿಚಾರವಾಗಿ ಮಾತನಾಡಿದ ಅವರು, ಒಕ್ಕಲಿಗ ಸಂಘದ ಸಭೆ, ಚರ್ಚೆ ಬಗ್ಗೆ ಶ್ರೀಗಳಿಗೆ ಡೌಟ್ ಇದೆ. ಇದನ್ನು ಬಗೆಹರಿಸುವ ಕೆಲಸ ಮಾಡಲಾಗುವುದು ಎಂದರು.

ಇದನ್ನೂ ಓದಿ: ವಿಧಾನ ಪರಿಷತ್: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಲ್ಲ ಎಂದ ಕೆಎಸ್​ ಈಶ್ವರಪ್ಪ

ಸಚಿವರಿಗೆ ಟಾಸ್ಕ್ ಕೊಟ್ಟ ವಿಚಾರವಾಗಿ ಮಾತನಾಡಿದ ಅವರು, 15 ಜನರನ್ನು ಆಮಂತ್ರಣ ಮಾಡಿದ್ದು, ಅವರವರ ಜಿಲ್ಲೆಯೇ ಅವರವರ ಜವಾಬ್ದಾರಿ. ಸಲೆಕ್ಷನ್ ವಿಚಾರದಲ್ಲಿ ಅದೇ ಜಿಲ್ಲೆಯನ್ನು ಉಸ್ತುವಾರಿ ಸಚಿವರಿಗೆ ಕೊಟ್ಟಿಲ್ಲ, ಬೇರೆ ಜಿಲ್ಲೆಗೆ ಕೊಟ್ಟಿದ್ದೇವೆ. ಜಾರ್ಜ್ ಎಲೆಕ್ಷನ್ ಕಮಿಟಿ ಮೆಂಬರ್ ಅವರಿಗೆ ರಿಲೀಫ್ ಕೊಟ್ಟಿದ್ದೇವೆ. ಮೂರ್ನಾಲ್ಕು ದಿನಗಳಲ್ಲಿ ವರದಿ ಕೊಡಲು ಹೇಳಿದ್ದೇನೆ. ಪ್ರತಿ ಕ್ಷೇತ್ರದಿಂದ ಮೂರು ಜನರ ಸಂಭಾವ್ಯ ಪಟ್ಟಿ ಕೊಡಲು ಹೇಳಿದ್ದಾರೆ. ನಾವು ಸಭೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಿಜೆಪಿ ಅವರು ಟೂರ್​ ಮಾಡಲಿ

ಬಿಜೆಪಿ ಬರದ ಟೂರ್ ಹಮ್ಮಿಕೊಂಡ ವಿಚಾರವಾಗಿ ಮಾತನಾಡಿದ ಅವರು, ನಾವೆಲ್ಲ ಅಧ್ಯಯನ ಮಾಡಿ ಈಗಾಗಲೇ ರಿಪೋರ್ಟ್ ಕೊಟ್ಡಿದ್ದೇವೆ. ಬಿಜೆಪಿ ಅವರು ಮಾಡಲಿ, ಯಾರು ಬೇಡ ಅಂತ ಹೇಳಿದ್ದು? ಐದು ವರ್ಷ ನಮಗೆ ರಾಜ್ಯದ ಜನರು ಆಡಳಿತ ಮಾಡಲು ಅವಕಾಶ ಕೊಟ್ಟಿದ್ದಾರೆ. ಜನಸೇವೆ ನಾವು ಮಾಡಬೇಕು. ಗ್ಯಾರಂಟಿ ಸರಿಯಾಗಿ ನಡೆಯುತ್ತಿದೆಯಾ ಅಂತ ವಿಮರ್ಶೆ ಮಾಡಬೇಕು. ಲೋಕಸಭಾ ಚುನಾವಣೆ ನಮಗೆ ಇಂಪಾರ್ಟೆಂಟ್ ಆಗಿದೆ. ಸ್ವಲ್ಪ ಟೂರ್ ಮಾಡಲು ಸೂಚನೆ ಕೊಟ್ಟಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ