ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ ಸುಧಾಕರ್ ಆಕ್ರೋಶ

ಕಾಂಗ್ರೆಸ್ ಮುಖಂಡರ ಹತಾಶೆ, ಜನರ ದಾರಿ ತಪ್ಪಿಸುವ ಆತುರದ ಪ್ರದರ್ಶನವಲ್ಲದೆ ಮತ್ತೇನಲ್ಲ. ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೇ ಸರಿ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದರು.

ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಕೆ ಸುಧಾಕರ್ ಆಕ್ರೋಶ
ಪ್ರಿಯಾಂಕ್ ಖರ್ಗೆ, ಕೆ ಸುಧಾಕರ್
Follow us
TV9 Web
| Updated By: sandhya thejappa

Updated on: Nov 14, 2021 | 3:57 PM

ಬೆಂಗಳೂರು: ಪ್ರಿಯಾಂಕ್ ಖರ್ಗೆ ವಿರುದ್ಧ ಸಚಿವ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಡಾಕೆ ಸುಧಾಕರ್, ಪ್ರಿಯಾಂಕ್ ಖರ್ಗೆಯವರೇ ನಿಮ್ಮ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನ ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಸಚಿವರಿಗೆ ಸರ್ಕಾರದ ಪರ ಮಾತಾಡುವ ಹೊಣೆ ಇದೆ. ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತದ್ದೇಕೆ? ಎಂದು ಪ್ರಶ್ನಿಸಿದ್ದಾರೆ.

ಇದು ಕಾಂಗ್ರೆಸ್ ಮುಖಂಡರ ಹತಾಶೆ, ಜನರ ದಾರಿ ತಪ್ಪಿಸುವ ಆತುರದ ಪ್ರದರ್ಶನವಲ್ಲದೆ ಮತ್ತೇನಲ್ಲ. ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೇ ಸರಿ. ಪ್ರಿಯಾಂಕ್ ಖರ್ಗೆ ಐಟಿ ಬಿಟಿ ಸಚಿವರಾಗಿದ್ದರು. ನಂತರ ಸಮಾಜ ಕಲ್ಯಾಣ ಖಾತೆಯ ಸಚಿವರಾಗಿದ್ದರು. ಆಗ ಕೇವಲ ಇಲಾಖೆ ಬಗ್ಗೆ ಮಾತ್ರ ಮಾತನಾಡಿದ್ದರಾ? ಇದನ್ನು ಪ್ರಿಯಾಂಕ್ ಖರ್ಗೆ ಒಮ್ಮೆ ನೆನಪು ಮಾಡಿಕೊಳ್ಳಲಿ. ಕಾಂಗ್ರೆಸ್​ನ ಅಪಪ್ರಚಾರ, ಸುಳ್ಳಿನ ರಾಜಕಾರಣ ಬಿಜೆಪಿ ಸಹಿಸುವುದಿಲ್ಲ ಎಂದು ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ನಿಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ನೂರು ಸುಳ್ಳು ಹೇಳುವ ನಿಮ್ಮ ಕುತಂತ್ರಗಳನ್ನು ಜನರ ಮುಂದಿಡಲೇಬೇಕು. ಈ ಕೆಲಸವನ್ನು ಕೇವಲ ಸಚಿವರು ಮಾತ್ರವಲ್ಲ, ಪ್ರತಿ ಬಿಜೆಪಿ ಕಾರ್ಯಕರ್ತ ನಾಟಕ ಬಯಲು ಮಾಡುತ್ತಾರೆ. ಕಾಂಗ್ರೆಸ್ ನಾಟಕವನ್ನು ಬಯಲಿಗೆಳೆಯಲು ಸಿದ್ಧರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಸಚಿವ ಡಾ. ಕೆ ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ಆಟದಿಂದ ವಂಚಿತರಾದ ಮಕ್ಕಳು; ಆಟದ ಮೈದಾನದಲ್ಲಿ ಗೋವಿನಜೋಳ ಬೆಳೆ, ಗ್ರಾಮಸ್ಥರಿಂದ ಆಕ್ರೋಶ

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ