ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ರಾಜೇಂದ್ರ ಪ್ರಸಾದ್ ನೇಮಕ

ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಯಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕ ಕೆಎಎಸ್​ ಅಧಿಕಾರಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ ನೇಮಕಗೊಂಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ರಾಜೇಂದ್ರ ಪ್ರಸಾದ್ ನೇಮಕ
ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಡಾ ಎಂಎನ್ ರಾಜೇಂದ್ರ ಪ್ರಸಾದ್ ನೇಮಕ
Rakesh Nayak Manchi

Updated on: Jun 06, 2023 | 6:43 PM

ಬೆಂಗಳೂರು: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರ ಆಪ್ತ ಕಾರ್ಯದರ್ಶಿಯಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕ ಕೆಎಎಸ್​ ಅಧಿಕಾರಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ (Dr MN Rajendra Prasad) ನೇಮಕಗೊಂಡಿದ್ದಾರೆ. ಇತ್ತೀಚೆಗಷ್ಟೇ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ (Dr Venkateshaiah) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದ್ದು, ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಹಾಗೂ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಡ್ರಗ್ಸ್​ ಕಂಟ್ರೋಲ್​ಗೆ ಬೆಂಗಳೂರು ಪೊಲೀಸರ ಪ್ಲಾನ್​: ಶಾಲಾ-ಕಾಲೇಜುಗಳ ಪಿಟಿ ಮಾಸ್ಟರ್, ಹೆಡ್​ಮಾಸ್ಟರ್​ ನೋಡಲ್ ಆಫೀಸರ್​​ ಆಗಿ ನೇಮಕ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us