ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ರೂ. ನೀಡಿದೆ, ಆದರೂ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ: ಜೋಶಿ
ಕರ್ನಾಟಕದಲ್ಲಿ ಬರಗಾಲ ಆವರಿಸಿದ್ದು, ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಇನ್ನೂ ಕೂಡ ಬರ ಪರಿಹಾರ ಘೋಷಣೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆರೆ ಹೋಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿ ಕಾಂಗ್ರೆಸ್ ಸುಳ್ಳಿನ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.
ಹುಬ್ಬಳ್ಳಿ, ಮಾರ್ಚ್ 26: ತೀವ್ರ ಬರಗಾಲದಿಂದ ತತ್ತಿರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ (Union Government) ಪರಿಹಾರ ಬಿಡುಗಡೆ ಮಾಡಿಲ್ಲವೆಂದು ಕರ್ನಾಟಕ ಸರ್ಕಾರ (Karnataka Government) ಸುಪ್ರೀಂ ಕೋರ್ಟ್ನಲ್ಲಿ (Supreme Court) ರಿಟ್ ಅರ್ಜಿ ಸಲ್ಲಿಸಿದೆ. ಕೇಂದ್ರ ಸರ್ಕಾರದ ಯಾವುದೇ ಹಣ ಬಾಕಿ ಉಳಿಸಿಕೊಂಡಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ 2.30 ಲಕ್ಷ ಸಾವಿರ ಕೋಟಿ ಹಣ ನೀಡಿದೆ. ಆದರೂ ಕಾಂಗ್ರೆಸ್ ಹಣ ನೀಡಿಲ್ಲವೆಂದು ವ್ಯವಸ್ಥಿತವಾಗಿ ಸುಳ್ಳು ಹೇಳುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಹಣಕಾಸು ಆಯೋಗ ಯಾವುದೇ ಶಿಫಾರಸು ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉತ್ತರ ನೀಡಿದ್ದಾರೆ. ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ಮಾಡಿದರು.
ಇದನ್ನೂ ಓದಿ: ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ: ಸಿದ್ದರಾಮಯ್ಯ
ಮೋದಿ ಮೋದಿ ಅಂತ ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೀರಿ ಅಂತ ಸಚಿವ ಶಿವರಾಜ ತಂಡಗಿ ಹೇಳುತ್ತಾರೆ. ಸಿದ್ದರಾಮಯ್ಯ ಈ ಹಿಂದೆ ಮೋದಿಯವರಿಗೆ ಏಕ ವಚನದಲ್ಲಿ ಮಿಸ್ಟರ್ ಮೋದಿ ಅಂತ ಮಾತಾಡಿದ್ದರು. ದೇಶದ ಪ್ರತಿಶತ 80 ರಷ್ಟು ಯುವಕರು ಮೋದಿ ಮೋದಿ ಅಂತಾರೆ. ಕಾಂಗ್ರೆಸ್ನವರೇ ನಿಮ್ಮ ಶಕ್ತಿ ತೋರಸಿ. ಕಾಂಗ್ರೆಸ್ನವರದ್ದು ಯಾವಾಗಲೂ ಹೊಡಿ ಬಡಿ ಸಂಸ್ಕ್ರತಿ. ಇದನ್ನು ನಾನು ತೀವೃವಾಗಿ ಖಂಡಿಸುತ್ತೇನೆ ಎಂದರು.
ಕರ್ನಾಟಕ ಸುಂಸ್ಕೃತ ರಾಜ್ಯ, ಇವರ ಹೇಳಿಕೆಯಿಂದ ಕರ್ನಾಟಕ ಸಂಸ್ಕೃತಿಗೆ ಧಕ್ಕೆಯಾಗಿದೆ. ಇವರು ಎಷ್ಟು ಪ್ರಧಾನಿ ಮೋದಿಯನ್ನು ದ್ವೇಷ ಮಾಡುತ್ತಾರೆ, ಅಷ್ಟು ಜನ ಮೋದಿಯವರನ್ನು ಪ್ರೀತಿ ಮಾಡುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದೆ. ಹೀಗಾಗಿ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿ ಐದು ತಿಂಗಳ ಕಳೆದರೂ ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ. ಹೀಗಾಗಿ ಬರ ಪರಿಹಾರ ಕೊಡಿಸುವಂತೆ ಸುಪ್ರೀಂ ಕೋರ್ಟ್ನಲ್ಲಿ ಆರ್ಟಿಕಲ್ 32ರ ಅಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ