AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಓಲೈಕೆ, ಹಿಂದೂ ಕಡೆಗಣನೆ ನೋಡಿ ಶೆಟ್ಟರ್ ವಾಪಸ್​ -ಇದು ಆಪರೇಷನ್ ಕಮಲ ಅಲ್ಲ ಎಂದ ಆರ್. ಅಶೋಕ

ಕಾಂಗ್ರೆಸ್ಸಿನಲ್ಲಿ ಮುಸ್ಲಿಮರ ಓಲೈಕೆ, ಹಿಂದೂ ಕಡೆಗಣನೆ ನೋಡಿ ಜಗದೀಶ್ ಶೆಟ್ಟರ್ ವಾಪಸ್ ಆದರು. ಬಿಜೆಪಿಯವರು ನಮ್ಮಲ್ಲಿಗೆ ಬಂದರು ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದರು. ಇನ್ನು ಆ ಮಾತು ನಿಲ್ಲಲಿದೆ. ಕಾಂಗ್ರೆಸ್ ನಲ್ಲಿ ನಾಯಕರ ಗತಿ ಇಲ್ಲವಾಗಿರುವುದರಿಂದ ನಮ್ಮ ನಾಯಕರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದೂ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ವ್ಯಾಖ್ಯಾನಿಸಿದರು.

ಮುಸ್ಲಿಮರ ಓಲೈಕೆ, ಹಿಂದೂ ಕಡೆಗಣನೆ ನೋಡಿ ಶೆಟ್ಟರ್ ವಾಪಸ್​ -ಇದು ಆಪರೇಷನ್ ಕಮಲ ಅಲ್ಲ ಎಂದ ಆರ್. ಅಶೋಕ
ಮುಸ್ಲಿಮರ ಓಲೈಕೆ, ಹಿಂದೂ ಕಡೆಗಣನೆ ನೋಡಿ ಶೆಟ್ಟರ್ ವಾಪಸ್​
ಸಾಧು ಶ್ರೀನಾಥ್​
|

Updated on:Jan 25, 2024 | 6:02 PM

Share

ಬೆಂಗಳೂರು, ಜನವರಿ 25: ಜಗದೀಶ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌. ರಾಮನವಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತೆ ಆಗಿತ್ತು. ಮುಸ್ಲಿಮರ ಓಲೈಕೆ ಹಾಗೂ ಹಿಂದೂಗಳ ಕಡೆಗಣನೆಯನ್ನು ನೋಡಿ ಅವರಿಗೆ ಉಸಿರುಗಟ್ಟುವ ವಾತಾವರಣ ಉಂಟಾಗಿತ್ತು. ಶೆಟ್ಟರ್ ಅವರು ಮರಳಿ ಗೂಡಿಗೆ ಬಂದಿರುವುದನ್ನು ತುಂಬು ಹೃದಯದಿಂದ ಸ್ವಾಗತ ಮಾಡಿದ್ದೇವೆ ಎಂದರು.

Also Read: ಒಂದು ಸುತ್ತು ರಾಜಕೀಯ ಪಯಣ ಪೂರ್ಣಗೊಳಿಸಿದ 68 ವರ್ಷದ ಜಗದೀಶ್ ಶೆಟ್ಟರ್! ಅದರ ಏಳುಬೀಳುಗಳ ಹಿನ್ನೋಟ ಇಲ್ಲಿದೆ

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮೊದಲಾದ ಕಾರಣಗಳಿಂದ ಇನ್ನಷ್ಟು ನಾಯಕರು ಬಿಜೆಪಿ ಕಡೆ ಬರಲಿದ್ದಾರೆ. ಇನ್ನೇನಿದ್ದರೂ ‘ಕಾಂಗ್ರೆಸ್ ಚೋಡೊ’ ಎಂಬ ಘೋಷಣೆ ಕೇಳಿಬರಲಿದೆ. ಆಮ್ ಆದ್ಮಿ ಪಕ್ಷ, ಮಮತಾ ಬ್ಯಾನರ್ಜಿಯವರ ಪಕ್ಷ ಕಾಂಗ್ರೆಸ್ ನಾಲಾಯಕ್ ಎಂದು ಓಡಿಸಿದೆ. ಕಾಂಗ್ರೆಸ್ ಪಕ್ಷವನ್ನು ದೆಹಲಿಯಿಂದಲೂ ಹೊರಗೆ ಹಾಕಲಾಗುತ್ತದೆ‌. ಈ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಧೂಳಿಪಟವಾಗಲಿದೆ ಎಂದರು.

ಬಿಜೆಪಿಯವರು ನಮ್ಮಲ್ಲಿಗೆ ಬಂದರು ಎಂದು ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದರು. ಈಗ ಆ ಮಾತುಗಳು ನಿಲ್ಲಲಿದೆ. ಕಾಂಗ್ರೆಸ್ ನಲ್ಲಿ ನಾಯಕರ ಗತಿ ಇಲ್ಲವಾಗಿರುವುದರಿಂದ ನಮ್ಮ ನಾಯಕರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದರು. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬಿಜೆಪಿಯ ವರಿಷ್ಠರು ನಿರ್ಧರಿಸಲಿದ್ದಾರೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Thu, 25 January 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!