ತಾಂತ್ರಿಕ ದೋಷ ಹಿನ್ನೆಲೆ: 2ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ಶಂಕರ ಪಾಟೀಲ್ ಮುನೇನಕೊಪ್ಪ
Basavaraj Bommai Cabinet: ಈ ತಾಂತ್ರಿಕ ದೋಷ ಅರಿವಾದ ಬಳಿಕ ಸಚಿವ ಮುನೇನಕೊಪ್ಪ ರಾಜಭವನ ಸಂಪರ್ಕ ಮಾಡಿದ್ದರು. ಬಳಿಕ, ಶಂಕರ ಪಾಟೀಲ್ ರಾಜ್ಯಪಾಲರೆದುರು ಗೌಪ್ಯತಾ ಪ್ರಮಾಣ ವಿಧಿ ಸ್ವೀಕಾರ ಮಾಡಿದ್ದಾರೆ.
ಬೆಂಗಳೂರು: ಕರ್ನಾಟಕ ನೂತನ ಸಚಿವ ಸಂಪುಟ ಪ್ರಮಾಣವಚನ ಸಮಾರಂಭದಲ್ಲಿ ತಮ್ಮ ಪ್ರಮಾಣ ಸ್ವೀಕಾರ ವೇಳೆ ತಾಂತ್ರಿಕ ದೋಷ ಉಂಟಾಗಿದ್ದು, ಅದು ಗಮನಕ್ಕೆ ಬಂದ ಮೇಲೆ ಶಂಕರ ಪಾಟೀಲ್ ಮುನೇನಕೊಪ್ಪ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಘಟನೆ ಇಂದು (ಆಗಸ್ಟ್ 4) ನಡೆದಿದೆ. ಅವರು ರಾಜಭವನದಲ್ಲಿ ರಾಜ್ಯಪಾಲರ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಶಂಕರ ಪಾಟೀಲ್ ಮುನೇನಕೊಪ್ಪ 2ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ರಾಜಭವನದಲ್ಲಿ ರಾಜ್ಯಪಾಲರ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ ವೇಳೆ ತಾಂತ್ರಿಕ ದೋಷ ಉಂಟಾಗಿತ್ತು. ಮುನೇನಕೊಪ್ಪ, ಅಧಿಕಾರ ಪ್ರಮಾಣವನ್ನೇ ಎರಡು ಬಾರಿ ಓದಿದ್ದರು. ಗೌಪ್ಯತಾ ಪ್ರಮಾಣ ವಿಧಿ ಪೂರೈಸಿರಲಿಲ್ಲ.
ಈ ತಾಂತ್ರಿಕ ದೋಷ ಅರಿವಾದ ಬಳಿಕ ಸಚಿವ ಮುನೇನಕೊಪ್ಪ ರಾಜಭವನ ಸಂಪರ್ಕ ಮಾಡಿದ್ದರು. ಬಳಿಕ, ಶಂಕರ ಪಾಟೀಲ್ ರಾಜ್ಯಪಾಲರೆದುರು ಗೌಪ್ಯತಾ ಪ್ರಮಾಣ ವಿಧಿ ಸ್ವೀಕಾರ ಮಾಡಿದ್ದಾರೆ. ಈ ವೇಳೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.
ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿ ಸರಿಯಾಗಿ ಒಂದು ವಾರದ ಬಳಿಕ ಇಂದು (ಆಗಸ್ಟ್ 4) ಸಚಿವ ಸಂಪುಟ ಅಸ್ಥಿತ್ವಕ್ಕೆ ಬಂದಿದೆ. ಹೊಸ ಸಚಿವರಾಗಿ 29 ಮಂದಿ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ರಾಜ್ಯಪಾಲ ಥಾವರಚಂದ ಗೆಹಲೋತ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದ್ದಾರೆ.
ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು, ವಿ. ಸೋಮಣ್ಣ, ಉಮೇಶ್ ವಿಶ್ವನಾಥ್ ಕತ್ತಿ, ಎಸ್. ಅಂಗಾರ, ಜೆ.ಸಿ. ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಸಿ.ಸಿ. ಪಾಟೀಲ್, ಆನಂದ್ ಸಿಂಗ್, ಕೋಟ ಶ್ರೀನಿವಾಸ ಪೂಜಾರಿ, ಪ್ರಭು ಚೌಹಾಣ್, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್, ಬಿ.ಸಿ. ಪಾಟೀಲ್, ಭೈರತಿ ಬಸವರಾಜ್, ಡಾ.ಕೆ. ಸುಧಾಕರ್, ಕೆ. ಗೋಪಾಲಯ್ಯ, ಶಶಿಕಲಾ ಜೊಲ್ಲೆ, ಎಂಟಿಬಿ ನಾಗರಾಜ್, ಕೆ.ಸಿ. ನಾರಾಯಣಗೌಡ, ಬಿ.ಸಿ. ನಾಗೇಶ್, ವಿ. ಸುನಿಲ್ ಕುಮಾರ್, ಹಾಲಪ್ಪ ಆಚಾರ್, ಶಂಕರ ಪಾಟೀಲ್ ಮುನೇನಕೊಪ್ಪ, ಮುನಿರತ್ನ ಪ್ರಮಾಣವಚನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ವ್ಯಕ್ತಿ ಚಿತ್ರಣ: ಕೃಷಿ ಕುಟುಂಬದ ಹಿನ್ನೆಲೆಯ ನವಲಗುಂದ ಕ್ಷೇತ್ರದ ಶಾಸಕ, ನೂತನ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ
ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ: ಸಚಿವ ಸಂಪುಟ ರಚನೆ ಬಳಿಕ ಸಿಎಂ ಮೊದಲ ಮಾತು
(Due to Technical Issue MLA Shankar Patil Munenakoppa take Oath for second time at Rajbhavan)
Published On - 8:17 pm, Wed, 4 August 21