AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಹಂಚಿಕೆಯಲ್ಲಿ ವ್ಯತ್ಯಾಸವಾಗಿದ್ದರಿಂದ 2-3 ಕ್ಷೇತ್ರದಲ್ಲಿ ಸೋತಿದ್ದೇವೆ: ಯಡಿಯೂರಪ್ಪ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕರ್ನಾಟಕದಲ್ಲಿ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿವೆ. ಕರ್ನಾಟಕದಿಂದ ನೂತನವಾಗಿ ಆಯ್ಕೆಯಾದ ಮತ್ತು ಕೇಂದ್ರ ಸಚಿವರಾದ ರಾಜ್ಯ ಸಂಸದರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು.

ವಿವೇಕ ಬಿರಾದಾರ
|

Updated on:Jun 22, 2024 | 2:51 PM

Share

ಬೆಂಗಳೂರು, ಜೂನ್​ 22: ಕಾರ್ಯಕರ್ತರ ಪರಿಶ್ರಮದಿಂದ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಗೆಲುವು ಸಾಧ್ಯವಾಯಿತು. ಟಿಕೆಟ್ ಕೊಡುವುದರಲ್ಲಿ ಆದ ವ್ಯತ್ಯಾಸದಿಂದ 3-4 ಸೀಟು ನಾವು ಕಳೆದುಕೊಂಡೆವು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು ಈಗಿನಿಂದಲೇ ಪ್ರಯತ್ನ ಆರಂಭಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ (BS Yediyurappa) ಹೇಳಿದರು.

ರಾಜ್ಯದಿಂದ ಆಯ್ಕೆಯಾದ ನೂತನ ಬಿಜೆಪಿ ಹಾಗೂ ಜೆಡಿಎಸ್ ಸಂಸದರಿಗೆ ಮತ್ತು ಕೇಂದ್ರ ಸಚಿವರಿಗೆ ಅರಮನೆ ಮೈದಾನದಲ್ಲಿ ಅಭಿನಂದನಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್​ ಯಡಿಯೂರಪ್ಪ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ. ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್ ದಯನೀಯ ಸೋಲು ಅನುಭವಿಸಿದೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಯಡಿಯೂರಪ್ಪನವರನ್ನು ಕೆಣಕಲು ಹೋದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ: ಬಿಜೆಪಿ ಎಚ್ಚರಿಕೆ!

ಕಾಂಗ್ರೆಸ್ ವಿರುದ್ಧದ ಆಕ್ರೋಶವನ್ನು ಜನ ಚುನಾವಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಆಮಿಷ, ಹಣಬಲದ ಹೊರತಾಗಿಯೂ 19 ಕ್ಷೇತ್ರಗಳಲ್ಲಿ ಜನರು ಎನ್​ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಸಂಸದರು ಅವರವರ ಕ್ಷೇತ್ರಗಳಲ್ಲಿ ಮೋದಿಯ ಜನ ಸೇವಕರಾಗಿ ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಅಂದರೆ ಅಭಿವೃದ್ಧಿ ಶೂನ್ಯ ಎಂಬುದನ್ನು ಮನವರಿಕೆ ಮಾಡಬೇಕಾಗಿದೆ. ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​, ಗ್ರಾಮ ಪಂಚಾಯತ್​ ಚುನಾವಣೆಗಳನ್ನು ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಹೆಚ್​ಡಿ ಕುಮಾರಸ್ವಾಮಿ, ವಿ ಸೋಮಣ್ಣ ಲೋಕಸಭಾ ಚುನಾವಣಾ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್​ನ ಎಲ್ಲ ಸಂಸದರು, ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:18 pm, Sat, 22 June 24