Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿರುವುದು ಡುಪ್ಲಿಕೇಟ್ ಸಿಎಂ, ಹೈಕಮಾಂಡ್​ಗೆ ಹಣಕೊಟ್ಟರೇ ಮಾತ್ರ ಮಂತ್ರಿ ಸ್ಥಾನ: ಕುಮಾರಸ್ವಾಮಿ

ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದರು.

ರಾಜ್ಯದಲ್ಲಿರುವುದು ಡುಪ್ಲಿಕೇಟ್ ಸಿಎಂ, ಹೈಕಮಾಂಡ್​ಗೆ ಹಣಕೊಟ್ಟರೇ ಮಾತ್ರ ಮಂತ್ರಿ ಸ್ಥಾನ: ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
Follow us
Sunil MH
| Updated By: ವಿವೇಕ ಬಿರಾದಾರ

Updated on:Nov 13, 2023 | 11:34 AM

ಬೆಂಗಳೂರು ನ12: ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ತೆಲಂಗಾಣದಲ್ಲಿ (Telangana) ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲಾ ಅದರೆ ಆಯ್ದ ವ್ಯಕ್ತಿಗಳ ಮನೆಯಲ್ಲಿದೆ. ಒಂದು ರಾಜ್ಯದಲ್ಲಿ ದುಡ್ಡು ಮಾಡಿ ದೇಶದಲ್ಲಿ ಎಲೆಕ್ಷನ್ (Election) ನಡೆಸುವುದು ನಿಮ್ಮ ಉದ್ದೇಶ. ಕರ್ನಾಟಕ ರಾಜ್ಯದ ಸಂಪತ್ತು, ಎಲ್ಲಾ ರಾಜ್ಯದ ಚುನಾವಣೆ. ಐದು ಗ್ಯಾರಂಟಿ ಮೂಲಕ ಎಲ್ಲಾ ರಾಜ್ಯದ ಚುನಾವಣೆ ಮಾಡಲು‌ ಹೋರಾಟ್ಟಿದ್ದಿರಾ? ಡುಪ್ಲಿಕೇಟ್ ಸಿಎಂ ತೆಲಂಗಾಣದಲ್ಲಿ ಭಾಷಣ ಮಾಡೋದು ಅಲ್ಲ, ನಮ್ಮ ರಾಜ್ಯದ ಸಮಸ್ಯೆ ಸರಿ‌ ಮಾಡಪ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಏಕವಚನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಹೈಕಮಾಂಡ್ ಸಿಎಂ, ಡಿಸಿಎಂ ಹಾಗೂ ಮಂತ್ರಿಗಳಿಗೆ ಟಾರ್ಗೆಟ್ ಕೊಟ್ಟಿದೆ. ಯಾರು ಹೆಚ್ಚಿಗೆ ಹಣ ಕೊಡುತ್ತಾರೆ ಅವರು ಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾರು ಕೊಡಲ್ಲಾ ಅವರು ಮಂತ್ರಿಗಳಾಗುವುದಿಲ್ಲ. ಹೆಚ್ಚು ಹಣ ಕೊಟ್ಟವರು ಅಧಿಕಾರದಲ್ಲಿ ಇರುತ್ತಾರೆ. ಯಾವುದೆ ಪವರ್ ಶೇರಿಂಗ್ ಇಲ್ಲ. ಯಾರು ಹಣ ಕೊಡುತ್ತಾರೆ ಅವರು ಅಧಿಕಾರದಲ್ಲಿ ಇರುತ್ತಾರೆ. ಈಗಾಗಲೇ ಹೈಕಮಾಂಡ್ ಇದನ್ನೇ ಹೇಳಿದೆ ಎಂದು ಹೊಸ ಬಾಂಬ್​ ಸಿಡಿಸಿದರು.

ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೇ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಸಿಎಂ ತೆಲಂಗಾಣದಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ.

ಸಿಎಂ ಕಚೇರಿಗೆ ಒಂದು ಕಡೆ ಖರ್ಚು ಮಾಡುತ್ತಾ ಇದ್ದಾರೆ. ಅಲ್ಲದೆ, ಕೋಟಿ ಕೋಟಿ ರೂಪಾಯಿ ಬೆಲೆಬಾಳುವ ಸೋಫಾ ಸೆಟ್ ನೀಡಿದ್ದಾರೆ ಎಂಬ ಮಾಹಿತಿ ಬಂದಿದೆ. ವಿದೇಶದಲ್ಲಿ ಸಿಗುವ ಸ್ಟಾಂಗ್ಲೆ ಅನ್ನೊ ವಿದೇಶಿ ಬ್ರಾಂಡ್ ಸೋಫಾ ಸೆಟ್‌ ಇದಾಗಿದ್ದು, 1 ಕೋಟಿ 90 ಲಕ್ಷ ರೂಪಾಯಿ ಬೆಲೆಬಾಳುತ್ತದೆ. ಇದನ್ನು ಯಾರೋ ಆಪ್ತ ಸಚಿವರೇ ಕೊಟ್ಟಿದ್ದಾರೆ ಎಂಬ ಮಾಹಿತಿಯೂ ಬಂದಿದೆ ಎಂದು ಗಂಭೀರ ಆರೋಪ ಮಾಡಿದರು.

ಸಿದ್ದರಾಮಯ್ಯ ಸರ್ಕಾರದಿಂದ ಕರ್ನಾಟಕಕ್ಕೆ ಕತ್ತಲೆ ಭಾಗ್ಯ: ಕುಮಾರಸ್ವಾಮಿ

ಶಕ್ತಿ ಯೋಜನೆಯಿಂದ ಸಾಕಷ್ಟು ಅವಾಂತರ ಆಗಿದೆ. ಸಿಬ್ಬಂದಿ ಕೊರತೆಯಿಂದ ಸರ್ಕಾರದಲ್ಲಿ ಹಲವು ಸಮಸ್ಯೆಗೆ ಕಾರಣವಾಗಿದೆ. ಲೋಡ್​ಶೆಡ್ಡಿಂಗ್​​​ನಿಂದ ರಾಜ್ಯದಲ್ಲಿ ಕತ್ತಲು ಆವರಿಸಿದೆ. ಮಹದೇವಪ್ಪಗೂ ಕತ್ತಲು, ಕಾಕಾಪಾಟೀಲ್​ಗೂ ಕತ್ತಲು ಎನ್ನುವಂತಾಗಿದೆ. ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​ ನೀಡುತ್ತೇವೆ ಅಂದಿದ್ದರು. ಗ್ರಾಹಕರೊಬ್ಬರ ಮನೆಗೆ ಹೆಚ್ಚುವರಿ ಕರೆಂಟ್ ಬಿಲ್​ ಬಂದಿದೆ. ಪ್ರತಿದಿನ 7 ಗಂಟೆ ವಿದ್ಯುತ್​ ನೀಡುತ್ತೇವೆ ಎಂದು ಸಿಎಂ ಘೋಷಿಸಿದ್ದಾರೆ. ರಾಜ್ಯದ ಯಾವ ಮೂಲೆಯಲ್ಲಿ 7 ಗಂಟೆ ವಿದ್ಯುತ್ ನೀಡುತ್ತಿದ್ದೇವೆ ಸಿಎಂ ಹೇಳಲಿ. ಸಿದ್ದರಾಮಯ್ಯ ಸರ್ಕಾರ ಕರ್ನಾಟಕಕ್ಕೆ ಕತ್ತಲೆ ಭಾಗ್ಯ ನೀಡಿದೆ ಎಂದು ಹರಿಹಾಯ್ದರು.

ಇದನ್ನೂ ಓದಿ: ಬಿಡದಿಯನ್ನು ಗ್ರೇಟರ್ ಬೆಂಗಳೂರು ಮಾಡುವ ವಿಚಾರ; ಡಿಸಿಎಂ​ ಹೇಳಿಕೆಗೆ ಟಾಂಗ್​ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಗೃಹಲಕ್ಷ್ಮೀ ಯೋಜನೆಯಡಿ ಇನ್ನೂ 10 ಲಕ್ಷ ಜನರಿಗೆ ಹಣ ಬಂದಿಲ್ಲ. ರಾಜ್ಯದಲ್ಲಿ ಲಕ್ಷಾಂತರ ಫಲಾನುಭವಿಗಳಿಗೆ ಹಣ ತಲುಪಿಲ್ಲ. ಈಗ ತೆಲಂಗಾಣದಲ್ಲಿ 4 ಸಾವಿರ ಹಣ ನೀಡುತ್ತೇವೆ ಎನ್ನುತ್ತಿದ್ದಾರೆ. ಶಕ್ತಿಯೋಜನೆ ಯೋಜನೆಯಿಂದ ಸಾಕಷ್ಟು ಅವಾಂತರ ಆಗಿದೆ. ಉಚಿತ ಬಸ್​​ ವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಿದೆ. 200 ಯೂನಿಟ್ ಬಗ್ಗೆ ಚರ್ಚೆ ಮಾಡುತ್ತಿರಾ, ಸರ್ಕಾರದ ಬಂದು ಐದು ತಿಂಗಳಲ್ಲಿ ಕರ್ನಾಟಕ ‌ಕತ್ತಲಲ್ಲಿ‌ ಇದೆ. ಅಧಿಕಾರಿಗಳು, ಸಚಿವರು ಮೊಬೈಲ್ ಲೈಟ್​ನಲ್ಲಿ ಸಭೆ ಮಾಡಿದ್ದಾರೆ. 24 ಗಂಟೆ ಉಚಿತ ಕರೆಂಟ್ ಕೊಡುತ್ತೆವೆ ಎಂದು ತೆಲಂಗಾಣದಲ್ಲಿ ಡುಪ್ಲಿಕೇಟ್ ಸಿಎಂ ಭಾಷಣ ಮಾಡುತ್ತಾರೆ. ಮುಖ್ಯಮಂತ್ರಿಗಳೆ ಮೊದಲು ನಮ್ಮ ರಾಜ್ಯದ ಕರೆಂಟ್ ಸಮಸ್ಯೆ ಬಗೆಹರಿಸಿ ಎಂದು ಹರಿಹಾಯ್ದರು.

ಇಂದಿರಾ ಕ್ಯಾಂಟಿನ್​ನಲ್ಲೂ ಕಮಿಷನ್, ಸಮಾಜ ಕಲ್ಯಾಣ ಇಲಾಖೆಯಲ್ಲಿರುವ 11 ಸಾವಿರ ಕೋಟಿಯನ್ನು ಬಳಸಿದ್ದೀರಾ. ಅಭಿವೃದ್ಧಿ ಕಾರ್ಯಕ್ರಮಕ್ಕೆ ಎಲ್ಲಿದೆ ಹಣ. ಇದರ ವಿರುದ್ಧ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಸಮಾಜ ಕಲ್ಯಾಣದಲ್ಲಿ ಇರುವ ಹಣವನ್ನ ಬಳಕೆ ಮಾಡಿಕೊಳ್ಳುತ್ತಿದ್ದೀರಿ ಇದು ನಿಮ್ಮ ಗ್ಯಾರೆಂಟಿನಾ? ಎಂದು ಪ್ರಶ್ನಿಸಿದರು.

ನಾನು (ಹೆಚ್​ಡಿ ಕುಮಾರಸ್ವಾಮಿ) 20 ತಿಂಗಳಲ್ಲಿ 3500 ಕೋಟಿ ರೂ. ಸಾಲ ಮಾಡಿದ್ದೆ. 12 ವರ್ಷದಲ್ಲಿ ಇದ್ದಂತಹ ಸರ್ಕಾರಗಳು 1 ಲಕ್ಷ ಕೋಟಿ ರೂ. ಸಾಲ ಮಾಡಿದ್ದವು. ನೀವು ಹಿಂದೆ 5 ವರ್ಷ ಸಿಎಂ ಆಗಿದ್ದಾಗ 2 ಲಕ್ಷದ 45 ಸಾವಿರ ಕೋಟಿ ರೂ. ಸಾಲ ಮಾಡಿದ್ದೀರಿ. ನಿಮಗೆ ಯಾವ ನೈತಿಕತೆ ಇದೆ. 5 ಲಕ್ಷದ 71 ಸಾವಿರದ 600 ಕೋಟಿ ರೂ. ಸಾಲ ಇದೆ ಈಗ. 8,58,15 ಕೋಟಿ ರೂ. ಸಾಲದ ಗುರಿ ಇಟ್ಟುಕೊಂಡಿದ್ದಾರೆ. ಪ್ರತಿ ವರ್ಷ 56 ಸಾವಿರ ಕೋಟಿ ಕಟ್ಟಬೇಕು ಅಂತಾ ನೀವೆ ಹೇಳಿದ್ದಿರಾ. ನಿಮ್ಮ ಅಧಿಕಾರಿಗಳೇ ಆರ್ಥಿಕ ವ್ಯವಸ್ಥೆ ಅಸ್ತವ್ಯಸ್ತ ಅಂತಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:12 pm, Sun, 12 November 23

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!