ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ನಾಯಕ ಅರುಣ್ ಸಿಂಗ್ ಮಾತನಾಡಿದ್ದು ಈ ಹಿಂದೆ ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ನಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನ ಕಾಂಗ್ರೆಸ್ ಮಾಡುತ್ತಿದೆ. ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಾಗೂ ಅವರ ಸಾಧನೆ ಸೇರಿದಂತೆ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ. 150 ಕ್ಕೂ ಅಧಿಕ ಸ್ಥಾನಗಳನ್ನ ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೂ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಘೋಷಿಸಿದ್ದಾರೆ.
ಇದನ್ನೂ ಓದಿ:
ಕಾಂಗ್ರೆಸ್ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ: ಹೆಚ್ಡಿ ಕುಮಾರಸ್ವಾಮಿ ಟ್ವೀಟ್
Published On - 11:55 am, Wed, 29 December 21