ಬೆಂಗಳೂರು, ನ.10: ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ (D.V.Sadananda Gowda) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S.Yediyurappa), ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಯುವಕರು ರಾಜಕೀಯಕ್ಕೆ ಬರಬೇಕೆಂಬ ಕಾರಣಕ್ಕಾಗಿ ಸದಾನಂದಗೌಡ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂದರು.
ಈ ಬಗ್ಗೆ ಟ್ವೀಟ್ ಮಾಡಿದ ಯಡಿಯೂರಪ್ಪ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ನಾನೂ ಸೇರಿದಂತೆ, ಹಿರಿಯ ನಾಯಕರಾದ ಸದಾನಂದಗೌಡರು, ಎಲ್ಲರೂ ಒಟ್ಟಾಗಿ ದುಡಿಯುತ್ತಿದ್ದೇವೆ ಎಂದಿದ್ದಾರೆ.
ಇದನ್ನೂ ಓದಿ: ಚುನಾವಣಾ ನಿವೃತ್ತಿಗೆ ಹೈಕಮಾಂಡ್ ಸೂಚನೆ: ಯಡಿಯೂರಪ್ಪ ಹೇಳಿಕೆಗೆ ಡಿವಿ ಸದಾನಂದಗೌಡ ಹೇಳಿದ್ದೇನು?
ಯುವಕರು ರಾಜಕೀಯದಲ್ಲಿ ಮುಂದೆ ಬರಬೇಕೆಂದು ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆಯೆ ವಿನಃ ಅವರಿಗೆ ಯಾರೂ ಒತ್ತಡ ಹೇರಿಲ್ಲ. ನಾನು ಹೇಳಿರುವ ಹೇಳಿಕೆಯನ್ನು ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ಅರ್ಥೈಸಲಾಗಿದೆ. ಅವರು ನಿವೃತ್ತಿ ಘೋಷಿಸಿದರೂ ಸಕ್ರಿಯ ರಾಜಕಾರಣದಲ್ಲಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ 25ಕ್ಕೂ ಅಧಿಕ ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಶ್ರಮಿಸಲಿದ್ದಾರೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ನಾನೂ ಸೇರಿದಂತೆ, ಹಿರಿಯ ನಾಯಕರಾದ ಸದಾನಂದಗೌಡರು, ಎಲ್ಲರೂ ಒಟ್ಟಾಗಿ ದುಡಿಯುತ್ತಿದ್ದೇವೆ. ಯುವಕರು ರಾಜಕೀಯದಲ್ಲಿ ಮುಂದೆ ಬರಬೇಕೆಂದು ಅವರು ಚುನಾವಣಾ ರಾಜಕೀಯದಿಂದ…
— B.S.Yediyurappa (@BSYBJP) November 9, 2023
ಇದನ್ನೂ ಓದಿ: ಹೈಕಮಾಂಡ್ ಅವಮಾನಿಸಿ ಕಳುಹಿಸಿದ್ದಕ್ಕೆ ನೊಂದ ಡಿವಿ ಸದಾನಂದಗೌಡರಿಂದ ರಾಜಕೀಯ ನಿವೃತ್ತಿ: ಕಾಂಗ್ರೆಸ್
ಜನರ ಆಶಯದಂತೆ, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವ ನಿಟ್ಟಿನಲ್ಲಿ, ಪಕ್ಷ ಸಂಘಟನೆಯ ಕಾರ್ಯದಲ್ಲಿ ನಾವೆಲ್ಲರೂ ಒಂದಾಗಿ ಮುನ್ನಡೆಯುತ್ತಿದ್ದೇವೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ