ಬೆಂಗಳೂರು, ನ.9: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಡಿವಿ ಸದಾನಂದಗೌಡ (DV Sadananda Gowda) ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ ನಾಯಕರ ಆಹ್ವಾನದ ಮೇರೆಗೆ ಹೈಕಮಾಂಡ್ ಭೇಟಿಯಾದ ಸದಾನಂದಗೌಡ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ (Congress) ಘಟಕ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ ಅವಮಾನಿಸಿ ಕಳುಹಿಸಿದ್ದರು. ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ಅಣುಕಿಸಿದೆ. ಅಲ್ಲದೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಎಳೆತಂದು “ಮತ್ತೆ ಅವಮಾನವಾಗುವ ಸುಳಿವನ್ನು ಅರಿತು ಗುಡ್ಬೈ ಹೇಳಿದ್ದಾರೆ” ಎಂದು ಹೇಳಿದೆ.
ಇದನ್ನೂ ಓದಿ: ಚುನಾವಣಾ ನಿವೃತ್ತಿಗೆ ಹೈಕಮಾಂಡ್ ಸೂಚನೆ: ಯಡಿಯೂರಪ್ಪ ಹೇಳಿಕೆಗೆ ಡಿವಿ ಸದಾನಂದಗೌಡ ಹೇಳಿದ್ದೇನು?
ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ ಅವಮಾನಿಸಿ ಕಳಿಸಿದ್ದರಿಂದ ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
“ಸಂತೋಷ ಕೂಟ”ದ ದಾಳಕ್ಕೆ ಮುಂದಿನ ಲೋಕಸಭೆಯ ಟಿಕೆಟ್ ಸಿಗದೆ ಮತ್ತೊಮ್ಮೆ ಅವಮಾನವಾಗುವ ಸುಳಿವನ್ನು ಅರಿತು ಈಗಲೇ ಗುಡ್ ಬೈ ಹೇಳಿದ್ದಾರೆ.ಎಲ್ಲಾ ತಲೆಗಳನ್ನೂ ಉರುಳಿಸಿ “ನಾಯಕತ್ವ ಮುಕ್ತ ಬಿಜೆಪಿ” ಮಾಡುವಲ್ಲಿ ಸಂತೋಷ ಕೂಟ…
— Karnataka Congress (@INCKarnataka) November 9, 2023
“ಬಿಜೆಪಿ ಹೈಕಮಾಂಡ್ ನಾಯಕರು ಕರೆಸಿ ಅವಮಾನಿಸಿ ಕಳಿಸಿದ್ದರಿಂದ ನೊಂದ ಸದಾನಂದಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. “ಸಂತೋಷ ಕೂಟ”ದ ದಾಳಕ್ಕೆ ಮುಂದಿನ ಲೋಕಸಭೆಯ ಟಿಕೆಟ್ ಸಿಗದೆ ಮತ್ತೊಮ್ಮೆ ಅವಮಾನವಾಗುವ ಸುಳಿವನ್ನು ಅರಿತು ಈಗಲೇ ಗುಡ್ ಬೈ ಹೇಳಿದ್ದಾರೆ. ಎಲ್ಲಾ ತಲೆಗಳನ್ನೂ ಉರುಳಿಸಿ “ನಾಯಕತ್ವ ಮುಕ್ತ ಬಿಜೆಪಿ” ಮಾಡುವಲ್ಲಿ ಸಂತೋಷ ಕೂಟ ಯಶಸ್ವಿಯಾಗಿದೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ