ಲೋಕಸಭೆ ಟಿಕೆಟ್ ಕೊಡದಿದ್ರೆ ನೋವಾಗುತ್ತೆ: ಅಂದು ಚುನಾವಣಾ ನಿವೃತ್ತಿ ಎಂದಿದ್ದ ಸದಾನಂದಗೌಡರಿಂದ ಈಗ ಭಿನ್ನರಾಗ!

ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ (DV Sadananda Gowda) ಅವರು 2023 ಜನವರಿ 08, ಬುಧವಾರದಂದು ಹಾಸನದಲ್ಲಿ ಮಾತನಾಡಿ, ‘ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ಬಳಿಕ ಬಿಜೆಪಿ ಕೆಲ ನಾಯಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಅದರಂತೆ ನಾನು ನಿವೃತ್ತಿ ಘೋಷಣೆಯನ್ನ ಹಿಂಪಡೆಯುತ್ತೇನೆ ಎಂದಿದ್ದರು. ಇದೀಗ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್ನುವ ಮೂಲಕ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಲೋಕಸಭೆ ಟಿಕೆಟ್ ಕೊಡದಿದ್ರೆ ನೋವಾಗುತ್ತೆ: ಅಂದು ಚುನಾವಣಾ ನಿವೃತ್ತಿ ಎಂದಿದ್ದ ಸದಾನಂದಗೌಡರಿಂದ ಈಗ ಭಿನ್ನರಾಗ!
ಸಂಸದ ಡಿವಿ ಸದಾನಂದ ಗೌಡ
Follow us
Sunil MH
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 09, 2024 | 3:01 PM

ಬೆಂಗಳೂರು, ಮಾ.09: ಈ ಹಿಂದೆ ಚುನಾವಣಾ ರಾಜಕೀಯದಿಂದ ಬಿಜೆಪಿ ಹಾಲಿ ಸಂಸದ ಡಿ.ವಿ ಸದಾನಂದಗೌಡ (DV Sadananda Gowda) ಅವರು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು. ಅದಾದ ಬಳಿಕ ಬಿಜೆಪಿ ಕೆಲ ನಾಯಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಅದರಂತೆ ನಾನು ನಿವೃತ್ತಿ ಘೋಷಣೆಯನ್ನ ಹಿಂಪಡೆಯುತ್ತೇನೆ ಎಂದಿದ್ದರು. ಇದೀಗ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್ನುವ ಮೂಲಕ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ ಎಲ್ಲ ಶಾಸಕರು, ಮುಖಂಡರು ನೀವೇ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ಇನ್ನೂ ನಾನು ಹತ್ತು ವರ್ಷ ರಾಜಕೀಯದಲ್ಲಿರಬಹುದು. ಒಂದು ವೇಳೆ ನನಗೆ ಟಿಕೆಟ್ ಕೊಡದಿದ್ರೆ, ಸ್ವಲ್ಪ ನೋವಾಗುತ್ತದೆ. ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ, ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ ಎಂದಿದ್ದಾರೆ.

ಇದನ್ನೂ ಓದಿ:ಸದಾನಂದಗೌಡರ ಹೆಸರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆಯೇ? ಅಶೋಕರಿಂದ ಸ್ಪಷ್ಟ ಉತ್ತರವಿಲ್ಲ!

ಇನ್ನು ಇತ್ತೀಚೆಗೆ ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ್ದ ವಿರೋಧ ಪಕ್ಷದ ನಾಯಕ ಆರ್ ಅಶೋಕ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಇನ್ನೊಂದು ಹಂತದ ಮಾತುಕತೆಯ ಬಳಿಕ ಅಂತಿಮಗೊಳ್ಳಲಿದೆ ಎಂದು ಹೇಳಿದ್ದರು. ಬಳಿಕ ಕೆಲ ತಿಂಗಳ ಹಿಂದೆ ಹಾಲಿ ಸಂಸದ ಸದಾನಂದ ಗೌಡ ಬಹಳ ಭಾರದ ಮನಸ್ಸಿನಿಂದ ಚುನಾವಣಾ ರಾಜಕೀಯದಿಂದ ನಿವೃತ್ತರಾಗುತ್ತಿರುವುದಾಗಿ ಘೋಷಣೆ ಮಾಡಿದ್ದರು. ಅವರ ಮನವೊಲಿಸಿ ಪುನಃ ಟಿಕೆಟ್ ನೀಡುವ ಚರ್ಚೆ ನಡೆದಿದೆಯೇ ಎಂದು ಕೇಳಿದ ಪ್ರಶ್ನೆಗೆ ಅಶೋಕ ಸ್ಪಷ್ಟವಾದ ಉತ್ತರ ನೀಡಲಿಲ್ಲ. ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಸೇರಿದಂತೆ ಎಲ್ಲ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ವರಿಷ್ಠರಿಗೆ ತಿಳಿಸಲಾಗಿದೆ, ಕೇಂದ್ರೀಯ ನಾಯಕರು ಸಹ ಬಂದು ಸಮೀಕ್ಷೆ ನಡೆಸಿದ್ದಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sat, 9 March 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ