ಲೋಕಸಭೆ ಚುನಾವಣೆ (Lok Sabha Elections) 2024 ಕಾವು ಜೋರಾಗಿದೆ. ಲೋಕಸಭೆ ಚುನಾವಣೆ 2024 ಕಾವು ಜೋರಾಗಿದೆ. ಭಾರತದ ಚುನಾವಣಾ ಆಯೋಗವು ಇದೀಗ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದೆ. ಕರ್ನಾಟಕದಲ್ಲಿ ಉತ್ತರ ಕರ್ನಾಟಕ-ದಕ್ಷಿಣ ಕರ್ನಾಟಕ ಎಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ಆಯೋಗವು ಈ ಬಾರಿ ಹಲವು ವಿಚಾರಗಳಿಗೆ ನಿರ್ಬಂಧಗನ್ನು ವಿಧಿಸಿದೆ. ಮುಖ್ಯವಾಗಿ ಜಾತಿ-ಧಾರ್ಮಿಕದ ಮೂಲಕ ಪ್ರಚಾರ ನಡೆಸುವುಂತಿಲ್ಲ ಎಂದು ಹೇಳಿದೆ.
ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.
ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.
ಏಪ್ರಿಲ್ 19 ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಏಪ್ರಿಲ್ 26ರಂದು ಎರಡನೇ ಹಂತದಲ್ಲಿ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 7ರಂದು ಮೂರನೇ ಹಂತದಲ್ಲಿ 94 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 13ರಂದು ನಾಲ್ಕನೇ ಹಂತದಲ್ಲಿ 96 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 20 ರಂದು ಐದನೇ ಹಂತದಲ್ಲಿ 49 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 25ರಂದು ಆರನೇ ಹಂತದಲ್ಲಿ 56 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಜೂನ್ 1ರಂದು ಏಳನೇ ಹಂತದಲ್ಲಿ 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ.
ಏಪ್ರಿಲ್ 19ರಂದು ಮೊದಲ ಹಂತದ ಮತದಾನ
ಏಪ್ರಿಲ್ 26ರಂದು ಎರಡನೇ ಹಂತದ ಮತದಾನ
ಮೇ 7ರಂದು ಮೂರನೇ ಹಂತದ ಮತದಾನ
ಮೇ 20 ರಂದು ನಾಲ್ಕನೇ ಹಂತದ ಮತದಾನ
ಮೇ 25 ರಂದು ಐದನೇ ಹಂತದ ಮತದಾನ
ಮೇ 25 ರಂದು ಐದನೇ ಹಂತದ ಮತದಾನ
ಜೂನ್ 1 ರಂದು ಐದನೇ ಹಂತದ ಮತದಾನ
ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟ
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.
ಪ್ರಚಾರದ ವೇಳೆ ಅಭ್ಯರ್ಥಿಗಳು ಗೌರವ ಕಾಪಾಡಿಕೊಳ್ಳಬೇಕು. ದ್ವೇಷ ಭಾಷಣ ಮಾಡಬಾರದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಅಭ್ಯರ್ಥಿಗಳು ಶತ್ರುಗಳ ರೀತಿ ವರ್ತಿಸಬಾರದು. ಚುನಾವಣೆಯ ಶತ್ರುಗಳು ಮುಂದೆ ಸ್ನೇಹಿತರಾಗಬಹದು. ಅದಕ್ಕೆ ಉದಾಹರಣೆ ಇದೆ ಎಂದರು.
ವಿಭಜಿಸಲು ಪ್ರೇರೇಪಿಸುವ ರಾಜಕೀಯ ಭಾಷಣ ಮಾಡುವಂತಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ಸಲಹೆ ನೀಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ವಿಷಯ ಆಧಾರಿತ ಪ್ರಚಾರ ಮಾಡಬೇಕು. ದ್ವೇಷದ ಭಾಷಣಗಳಿಗೆ ಅವಕಾಶವಿಲ್ಲ. ಯಾವುದೇ ಜಾತಿ ಅಥವಾ ಧಾರ್ಮಿಕ ವಿಷಯದ ಮೂಲಕ ಮತಯಾಚನೆ ಮಾಡುವಂತಿಲ್ಲ. ಖಾಸಗಿ ಜೀವನದ ಯಾವುದೇ ಅಂಶವನ್ನು ಟೀಕಿಸುವುದಿಲ್ಲ. ಪರಿಶೀಲಿಸದ ಮತ್ತು ತಪ್ಪುದಾರಿಗೆಳೆಯುವ ಜಾಹೀರಾತು ಪ್ರಕಟಿಸಬಾರದು. ಪಕ್ಷದ ಜಾಹೀರಾತುಗಳನ್ನು ಸುದ್ದಿಯಾಗಿ ನೀಡುವಂತಿಲ್ಲ. ಪ್ರತಿಸ್ಪರ್ಧಿಗಳನ್ನು ನಿಂದಿಸುವ/ಅವಮಾನಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೇಲೆ ನಿರ್ಬಂಧ ಹೇರಲಾಗುವುದು. ಸ್ಟಾರ್ ಪ್ರಚಾರಕರು ಪ್ರಚಾರದ ಗೌರವ ಕಾಪಾಡಿಕೊಳ್ಳಬೇಕು. ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸುವಂತಿಲ್ಲ ಎಂದರು.
ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಬೇಕು. ಎಲ್ಲ ಬ್ಯಾಂಕ್ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಿರ್ದೇಶ ನೀಡಿದರು.
ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ನಿಗಾ ಇಡಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ ಎಂದರು.
ರೈಲ್ವೆ ಸ್ಟೇಷನ್, ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. 11 ರಾಜ್ಯಗಳ ಚುನಾವಣೆಯಲ್ಲಿ 3400 ಕೋಟಿ ರೂ. ಸೀಜ್ ಮಾಡಲಾಗಿದೆ. ಚುನಾವಣೆ ವೇಳೆ ವಶಕ್ಕೆ 3400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದರು.
ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ರೌಡಿಶೀಟರ್ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು.
ಆ್ಯಪ್ ಮೂಲಕ ತಮ್ಮ ಅಭ್ಯರ್ಥಿಗಳ ಮಾಹಿತಿ ಲಭ್ಯ ಇರಲಿದೆ. ಅಭ್ಯರ್ಥಿಗಳ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಆ್ಯಪ್ನಲ್ಲಿರಲಿದೆ. ಚುನಾವಣಾ ಅಕ್ರಮಗಳನ್ನು ಮತದಾರ ಬಯಲು ಮಾಡಬಹುದು. ಆ್ಯಪ್ ಮೂಲಕ ಅಕ್ರಮದ ಫೋಟೋ, ವಿಡಿಯೋ ಅಪ್ಲೋಡ್ ಮಾಡಬಹುದು. ಕೂಡಲೇ ಅಕ್ರಮ ಎಸಗುವ ಅಭ್ಯರ್ಥಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ರಾಜೀವ್ ಕುಮಾರ್ ಹೇಳಿದರು.
ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್ಡೆಸ್ಕ್, ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ.
12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ನಾವು ಬದ್ಧರಾಗಿದ್ದೇವೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.
ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ ಎಂದು ಹೇಳಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ಮೋದಿ, ಸರ್ಕಾರದ ಬಳಿ ಹಣವೇ ಇಲ್ಲ ಎಂದು ಮೋದಿ ಲೇವಡಿ ಮಾಡಿದರು. ನೀವು ಕರ್ನಾಟಕವನ್ನ ಬಲಪಡಿಸಲು ಇಚ್ಛಿಸುತ್ತೀರಾ? ಹಾಗದರೆ ಬಿಜೆಪಿಯನ್ನು ಬೆಂಬಲಿಸಿ. ನಿಮ್ಮ ಕನಸು ಈಡೇರಿಸಿಕೊಳ್ಳಬೇಕಾದರೆ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.
ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಜನರ ಮನಸ್ಸಿನಲ್ಲಿ ಭರವಸೆಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಕಾಂಗ್ರೆಸ್ಗೆ ಭ್ರಷ್ಟಾಚಾರವೇ ಉಸಿರಾಗಿದೆ ಎಂದರು. ಚುನಾವಣೆಗೂ ಮೊದಲೇ ದೊಡ್ಡದೊಡ್ಡ ಭರವಸೆ ನೀಡಿದರು. ಚುನಾವಣೆಗೂ ಮೊದಲು ಫ್ರೀ ಕರೆಂಟ್ ಎಂದು ಹೇಳಿದರು. ಈಗ ನೋಡಿದ್ರೆ ಕರೆಂಟ್ ಕೂಡ ಇಲ್ಲ ಏನೂ ಇಲ್ಲ. ಚುನಾವಣೆ ಬಳಿಕ ನಿಮ್ಮ ಜೇಬಿಗೆ ಕೈಹಾಕಿದರು ಎಂದು ಹೇಳುವ ಮೂಲಕ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದರು. ಅಲ್ಲದೆ, ರೈತರಿಗೆ ಈ ಸರ್ಕಾರ ಮೋಸ ಮಾಡಿದೆ ಎಂದರು.
ನಾನು 2 ದಿನಗಳಲ್ಲಿ 4 ದಕ್ಷಿಣ ರಾಜ್ಯಗಳಿಗೆ ಭೇಟಿ ನೀಡಿದೆ. ದಕ್ಷಿಣ ಭಾರತ ರಾಜ್ಯಗಳಲ್ಲಿ ಬಿಜೆಪಿ ಬಗ್ಗೆ ಉತ್ಸುಕತರಾಗಿದ್ದಾರೆ. ಜನರ ಉತ್ಸಾಹ ನೋಡಿ ನನಗೆ ಬಹಳ ಆನಂದವಾಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಬಗ್ಗೆ ಜನ ಆಕ್ರೋಶಗೊಂಡಿದ್ದಾರೆ ಎಂದು ಹೇಳುವ ಮೂಲಕ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರ ಇಷ್ಟು ಬೇಗ ಜನರ ಆಕ್ರೋಶಕ್ಕೆ ಗುರಿಯಾಗಿದೆ ಎಂದರು.
ಕಲಬುರಗಿ ಬಿಜೆಪಿ ಸಮಾವೇಶದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಅವರು, ಕಲಬುರಗಿ ಜನತೆಗೆ ನಮಸ್ಕಾರಿಸಿದರು. ಇದೇ ವೇಳೆ ದಾಖಲೆಯ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಸಂಕಲ್ಪ ಮಾಡಿದ್ದಾಗಿ ಹೇಳಿದರು. ಅಲ್ಲದೆ, ನಾನು ಹೆಲಿಪ್ಯಾಡ್ನಿಂದ ಬರುವಾಗ ರಸ್ತೆಯಲ್ಲಿ ನೋಡಿದೆ. ಜನರ ಉತ್ಸಾಹ ನೋಡಿ ನನಗೆ ಬಹಳ ಸಂತಸವಾಯಿತು ಎಂದು ಹೇಳಿದ ಅವರು ಮತ್ತೊಮ್ಮೆ ಬಿಜೆಪಿ ಸರ್ಕಾರ ಎಂದು ಹೇಳಿದರು.
ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪೇಠ ತೊಡಿಸಿದರು. ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿಗೆ ಕಂಬಳಿ ಶಾಲು ಹಾಕಿದರು. ಭಗವಂತ ಖೂಬಾ ಮತ್ತು ಸಂಸದ ಉಮೇಶ್ ಜಾಧವ್ ಅವರು ಮೋದಿ ಅವರಿಗೆ ಹಾರ ಹಾಕಿ ಸನ್ಮಾನಿಸಿದರು. ಇದೇ ವೇಳೆ ಮಹಿಳೆಯರು ಬಸವಣ್ಣನ ಫೋಟೋ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಎನ್ ವಿ ಗ್ರೌಂಡ್ನಲ್ಲಿ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದ ವೇದಿಕೆಗೆ ಆಗಮಿಸಿದರು.
ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ಆರ್ ಅಶೋಕ, ವಿಧಾನಸೌಧಧಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಕಾಂಗ್ರೆಸ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಭದ್ರತೆಗಾಗಿ, ಪಾಕಿಸ್ತಾನ ಘೋಷಣೆ ಕೂಗಿದವರ ಹೆಡೆಮುರಿ ಕಟ್ಟಲು ಸಿಂಹದ ರೀತಿ ಘರ್ಜನೆ ಮಾಡಿದವರು ನರೇಂದ್ರ ಮೋದಿ. ಕಾಂಗ್ರೆಸ್ನಲ್ಲಿ ಯಾವುದೇ ಅಭ್ಯರ್ಥಿಗಳು ನಿಲ್ಲಲು ರೆಡಿ ಇಲ್ಲ. ಯುದ್ಧಕ್ಕೆ ಮುನ್ನವೇ ಸೋಲನ್ನು ಒಪ್ಪಿಕೊಂಡಿದ್ದಾರೆ. ಮೋದಿಯಿಂದ ಮಾತ್ರ ಈ ದೇಶ ರಕ್ಷಣೆ ಮಾಡಲು ಸಾಧ್ಯ. ಒಂದೇ ಒಂದು ಕಾಳು ಅಕ್ಕಿಯನ್ನೂ ಸಿದ್ದರಾಮಯ್ಯ ಕೊಟ್ಟಿಲ್ಲ, ಅದನ್ನು ಕೊಟ್ಟಿದ್ದು ನರೇಂದ್ರ ಮೋದಿ. ಅನ್ನ ಅಲ್ಲ, ಕನ್ನ ಹಾಕಲು, ಲೂಟಿ ಮಾಡಲು ಸಿದ್ದರಾಮಯ್ಯ ಬಂದಿರುವುದು. ಸಿದ್ದರಾಮಯ್ಯ ಕಾಲಿಟ್ಟಿದ್ದೇ ಇಟ್ಟಿದ್ದು, ರಾಜ್ಯದಲ್ಲಿ ಬರಗಾಲ ಉಂಡಾಗಿದೆ. ನೀರಿಲ್ಲಾ ನೀರಿಲ್ಲಾ ಎಲ್ಲೆಲ್ಲೂ ನೀರಿಲ್ಲಾ. ಹಿಂದೆಯೂ ಸಿದ್ದರಾಮಯ್ಯ ಇದ್ದಾಗ ಬರಗಾಲ ಉಂಟಾಗಿತ್ತು. ಆಮೇಲೆ ಯಡಿಯೂರಪ್ಪ ಸಿಎಂ ಆದಾಗ ಎಲ್ಲೆಲ್ಲೂ ಮಳೆಯಾಗಿತ್ತು. ಸಿದ್ದರಾಮಯ್ಯರವರೇ ನಿಮಗೆ ಆತ್ಮಸಾಕ್ಷಿ ಇದ್ದರೆ, ಅಭಿವೃದ್ಧಿಗೆ ಒಂದು ರೂಪಾಯಿ ಕೊಟ್ಟಿದ್ದೀರಾ ಹೇಳಿ? ಒಂದು ರೂಪಾಯಿ ಕೆಲಸ ಇಲ್ಲ, ಆದರೆ ಫ್ರೀ ಫ್ರೀ ಅಂತೀರಿ. ಐನೂರು ಫ್ರೀ ಕೊಡಿ, ಆದರೆ ಗಂಡನಿಂದ ಕಿತ್ತು ಹೆಂಡತಿಗೆ ಕೊಡಬೇಡಿ. ದಿನಪೂರ್ತಿ ದುಡಿದು ಸ್ವಲ್ಪ ಸಂಜೆ ಎಣ್ಣೆ ಹೊಡೆದರೆ ಅದಕ್ಕೆ 50 ರೂಪಾಯಿ ಟ್ಯಾಕ್ಸ್ ವಿಧಿಸುತ್ತಿದ್ದಾರೆ. ಕದ್ದು ಮುಚ್ಚಿ ಎಲ್ಲದಕ್ಕೂ ಟ್ಯಾಕ್ಸ್. ನನ್ನ ದುಡ್ಡು ತೆಗೆದುಕೊಂಡು ನನ್ನ ಹೆಂಡತಿಗೆ ಕೊಡಲು ನೀನು ಯಾರಯ್ಯಾ ಎಂದು ಸಿದ್ದರಾಮಯ್ಯಗೆ ಕೇಳಬೇಕು ಎಂದರು.
ಕಲಬುರಗಿ ಡಿಎಆರ್ ಗ್ರೌಂಡ್ನಿಂದ ಮೋದಿ ರೋಡ್ ಶೋ ಆರಂಭಿಸಿದ್ದಾರೆ. ರೋಟರಿ ಕ್ಲಬ್ ಕಾಂಪೌಂಡ್ ಮೂಲಕ ಸಮಾವೇಶ ನಡೆಯುವ ಎನ್ವಿ ಕಾಲೇಜು ಕಡೆ ರೋಡ್ಶೋ ಸಾಗುತ್ತಿದೆ. ಒಟ್ಟು ಒಂದೂವರೆ ಕಿಲೋಮೀಟರ್ ರೋಡ್ಶೋ ನಡೆಯಲಿದೆ.
ಕಲಬುರಗಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕಲ್ಯಾಣ ಕರ್ನಾಟಕದಿಂದ ಮೋದಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ. ರಾಜ್ಯಕ್ಕೆ ಮೋದಿ ಸಾಕಷ್ಟು ಅನುದಾನ ಕೊಟ್ಟಿದ್ದಾರೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಹೆಚ್ಚು ಆಸಕ್ತಿಯನ್ನು ಮೋದಿ ಕೊಟ್ಟಿದ್ದಾರೆ. ಈ ಬಾರಿ 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ ಎಂದರು. ಅಲ್ಲದೆ, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಕೇವಲ ಪ್ರಚಾರಕ್ಕಾಗಿ ಕೆಲವಹ ಕಾರ್ಯಕ್ರಮ ಘೋಷಣೆ ಮಾಡಿದ್ದಾರೆ. 28 ಕ್ಷೇತ್ರದಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನಾದರೂ ಗೆಲ್ಲಲಿ ನೋಡೋಣ ಎಂದು ಸವಾಲು ಹಾಕಿದರು. ಕರ್ನಾಟಕದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ. ಯಾವುದೋ ಕಾರಣದಿಂದ ವಿಧಾನಸಭೆಯಲ್ಲಿ ಹಿನ್ನಡೆಯಾಗಿರಬಹುದು ಅಷ್ಟೇ ಎಂದರು.
ಮೋದಿ ಅವರು ಕಲಬುರಿಗೆ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇತ್ತ, ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದಾರೆ. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಅಂತ ಘೋಷಣೆ ಕೂಗುತ್ತಿದ್ದಾರೆ. ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದಾರೆ.
ಕಲಬುರಗಿಗೆ ಪ್ರಧಾನಿ ಮೋದಿ ಮೋದಿ ಅವರು ಆಗಮಿಸಿದ್ದಾರೆ. ತೆಲಂಗಾಣದಿಂದ ಸೇನಾ ಹೆಲಿಕಾಪ್ಟರ್ ಮೂಲಕ ಕಲಬುರಗಿಗೆ ಆಗಮಿಸಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ತೆಲಂಗಾಣದಿಂದ ಕಲಬುರಗಿ ಹೆಲಿಪ್ಯಾಡ್ ಆಗಮಿಸಲಿರುವ ಮೋದಿ, ನಗರದ ಡಿಎಆರ್ ಹೆಲಿಪ್ಯಾಡ್ನಿಂದ ಬೃಹತ್ ರ್ಯಾಲಿ ಮೂಲಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಿಂದಲೇ ಪ್ರಚಾರ ಆರಂಭಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ 2024ರಲ್ಲೂ ಕಲಬುರಗಿಯಿಂದಲೇ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ.
ಕಲಬುರಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶ ನಡೆಯಲಿದೆ. ಕೆಲವೇ ಹೊತ್ತಿನಲ್ಲಿ ಪ್ರಧಾನಿ ಮೋದಿ ಅವರು ತೆಲಂಗಾಣದ ನಾಗರ ಕರ್ನೂಲ್ನಿಂದ ಹೆಲಿಕಾಫ್ಟರ್ ಮೂಲಕ ಕಲಬುರಗಿಗೆ ಆಗಮಿಸಲಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಕಲಬುರಗಿ ಮತ್ತು ಬೀದರ್ ಜಿಲ್ಲೆಯ ಸಂಸದರು ಹಾಗೂ ಶಾಸಕರು ಎನ್ ವಿ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ವೇದಿಕೆಗೆ ಆಗಮಿಸಿದ್ದಾರೆ.
ಗ್ಯಾರಂಟಿ ಸಮಾವೇಶದ ನೆಪದಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋಟೆ ಕಲಬುರಗಿಯಲ್ಲಿ ಕೆಲವೇ ಕ್ಷಣಗಳಲ್ಲಿ ನರೇಂದ್ರ ಮೋದಿ ಅವರು ಚುನಾವಣೆ ಪಾಂಚಜನ್ಯ ಮೊಳಗಿಸಲಿದ್ದಾರೆ. ಲೋಕಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್ ಆಗುವ ಮುನ್ನ ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲಿದ್ದಾರೆ.
Published On - 1:20 pm, Sat, 16 March 24