AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ: ಎಚ್​​​ಡಿ ಕುಮಾರಸ್ವಾಮಿ ಟ್ವೀಟ್

ದೇಶದಲ್ಲಿ ಇನ್ನೂ ಒಪ್ಪತ್ತಿನ ಊಟಕ್ಕೂ ತತ್ವಾರ ಇರುವ ಜನರೂ ಇದ್ದಾರೆಂದರೆ ಅದು 'ರಾಷ್ಟ್ರೀಯ ಅಪಮಾನ' ಅಲ್ಲದೆ ಮತ್ತೇನು? ಹೊಸಬಾಳೆ ಅವರು ನೀಡಿರುವ ಅಂಕಿ-ಅಂಶ ನನಗೆ ಆಘಾತ ಉಂಟು ಮಾಡಿದೆ ಎಂದು ಎಚ್​​ಡಿಕೆ ಟ್ವೀಟ್.

ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ: ಎಚ್​​​ಡಿ ಕುಮಾರಸ್ವಾಮಿ ಟ್ವೀಟ್
ಕುಮಾರಸ್ವಾಮಿ- ದತ್ತಾತ್ರೇಯ ಹೊಸಬಾಳೆ
TV9 Web
| Edited By: |

Updated on: Oct 03, 2022 | 2:58 PM

Share

ದೆಹಲಿ: ಭಾರತದ ಸುಮಾರು 20 ಕೋಟಿ ಜನರು ಬಡತನದಲ್ಲಿದ್ದಾರೆ. ಇದಕ್ಕೆ ಹಲವು ದಶಕಗಳಿಂದ ಅಸ್ತಿತ್ವದಲ್ಲಿದ್ದ ಆರ್ಥಿಕ ನೀತಿಗಳೇ ಕಾರಣ. ಕಳೆದ ಕೆಲ ವರ್ಷಗಳಲ್ಲಿ ಪರಿಸ್ಥಿತಿ ಬದಲಿಸಲು ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಿ ಸಂಘಟನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh – RSS) ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ (RSS General Secretary Dattatreya Hosabale) ಹೇಳಿದ್ದಾರೆ. ಪ್ರತಿವರ್ಷ ವಿಜಯದಶಮಿಯಂದು ಆರ್​ಎಸ್​ಎಸ್​ನ ಸರಸಂಘಚಾಲಕರು ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದು ವಾಡಿಕೆ. ಅದಕ್ಕೆ ಕೇವಲ ಮೂರು ದಿನ ಮೊದಲ ಸರಕಾರ್ಯವಾಹ ಹುದ್ದೆಯಲ್ಲಿರುವ ದತ್ತಾತ್ರೇಯ ಹೊಸಬಾಳೆ ಅವರು ಬಡತನದ ಕುರಿತು ಪ್ರಸ್ತಾಪಿಸಿರುವುದು ಮಹತ್ವ ಪಡೆದಿದೆ. ದತ್ತಾತ್ರೇಯ ಹೊಸಬಾಳೆ  ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಸರಣಿ ಟ್ವೀಟ್ ಮಾಡಿದ ಜೆಡಿಎಸ್ ನಾಯಕ, ಕರ್ನಾಟಕದ ಮಾಜಿಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ,  ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ. ಆರ್​ಎಸ್​ಎಸ್​ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ದತ್ತಾತ್ರೇಯ ಹೊಸಬಾಳೆ ಅವರು ನೀಡಿರುವ ಈ ಹೇಳಿಕೆ ಭಾರತದ ಸದ್ಯದ ಸ್ಥಿತಿಗೆ ಹಿಡಿದ ಕನ್ನಡಿ. ಈಗ ಅಚ್ಛೇದಿನದ ಅಸಲಿಯೆತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ. ಕಳೆದ 7 ವರ್ಷದ ಬಿಜೆಪಿ ಆಡಳಿತದಲ್ಲಿ ಯಾರು ಉದ್ಧಾರ ಆಗಿದ್ದಾರೆ? ಯಾರು ಹಾಳಾಗಿದ್ದಾರೆ? ಎನ್ನುವುದನ್ನು ಹೇಳಲು ವಿಶೇಷ ಪಾಂಡಿತ್ಯವೇನೂ ಬೇಕಿಲ್ಲ. 20 ಕೋಟಿ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ಯುವಕರಿಗೆ ಉದ್ಯೋಗವೇ ಇಲ್ಲ ಎಂದು ಹೊಸಬಾಳೆ ಅವರೇ ಹೇಳಿದ್ದಾರೆ. ಹಾಗಾದರೆ, ಕಳೆದ 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು? 23 ಕೋಟಿ ಜನರ ದಿನದ ಆದಾಯ 375 ರೂ.ಗಿಂತ ಕಡಿಮೆ ಇದೆ. ಆದರೆ, ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ, ವಾರಕ್ಕೆ 6,000 ಕೋಟಿ ರೂ. ಸಂಪಾದನೆ ಮಾಡುತ್ತಿದ್ದಾರೆ!! ಇದು ಸದ್ಯದ ಭಾರತದ ಚಿತ್ರಣ. ದೇಶದ ಶೇ.20ರಷ್ಟು ಆದಾಯ ಶೇ.1ರಷ್ಟು ಜನರ ಕೈಯ್ಯಲ್ಲಿದೆ ಎಂದರೆ ಇದಕ್ಕಿಂತ ಆಘಾತಕಾರಿ ಸಂಗತಿ ಮತ್ತೊಂದು ಇದೆಯಾ? ಇದು ಹೊಸಬಾಳೆ ಅವರ ಪ್ರಶ್ನೆ ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವವಾಡುತ್ತಿದೆ. ಲಕ್ಷೋಪಲಕ್ಷ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ. ಸತ್ಯ ಸ್ಥಿತಿ ಹೀಗಿದ್ದ ಮೇಲೆ ಅಚ್ಛೇದಿನದ ಆತ್ಮಾವಲೋಕನಕ್ಕೆ ಅಂಜಿಕೆ ಏಕೆ? ಸಮೀಕ್ಷೆಗಳು ಹೇಳಿದ ಸತ್ಯವನ್ನೇ ಹೊಸಬಾಳೆ ಅವರು ಹೇಳಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ ಮಹಾ ಆಕ್ರೋಶಕ್ಕೆ ಕಾರಣವಾದರೂ ಅಚ್ಚರಿ ಇಲ್ಲ. ‘ಕಾರ್ಪೋರೇಟ್ ರಾಜ್ಯ’ದ ಕಬಂಧ ಬಾಹುಗಳಲ್ಲಿ ಭಾರತ ಸಿಕ್ಕಿಬಿದ್ದಿರುವುದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ. ಜನರ ಅಸಹನೆ, ಬೇಗುದಿ ದಿನೇದಿನೆ ಹೆಚ್ಚುತ್ತಿದೆ. ಕೇಂದ್ರ ಬಿಜೆಪಿ ಸರಕಾರ ಎಚ್ಚೆತ್ತುಕೊಳ್ಳಲು ಇದು ಸಕಾಲ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊತ್ತಿನಲ್ಲೂ ಭಾರತದ ಮೇಲೆ ಆರ್ಥಿಕ ಅಸಮಾನತೆಯ ಕಪ್ಪುಚುಕ್ಕೆ ಇದೆ. ದೇಶದಲ್ಲಿ ಇನ್ನೂ ಒಪ್ಪತ್ತಿನ ಊಟಕ್ಕೂ ತತ್ವಾರ ಇರುವ ಜನರೂ ಇದ್ದಾರೆಂದರೆ ಅದು ‘ರಾಷ್ಟ್ರೀಯ ಅಪಮಾನ’ ಅಲ್ಲದೆ ಮತ್ತೇನು? ಹೊಸಬಾಳೆ ಅವರು ನೀಡಿರುವ ಅಂಕಿ-ಅಂಶ ನನಗೆ ಆಘಾತ ಉಂಟು ಮಾಡಿದೆ ಎಂದು ಎಚ್​​ಡಿಕೆ ಟ್ವೀಟ್ ಮಾಡಿದ್ದಾರೆ.

ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?

ಆರ್​ಎಸ್​ಎಸ್​ನ ಪರಿವಾರ ಸಂಘಟನೆ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿದ್ದ ‘ಸ್ವಾವಲಂಬಿ ಭಾರತ್ ಅಭಿಯಾನ’ದಲ್ಲಿ ಮಾತನಾಡಿದ ದತ್ತಾತ್ರೇಯ ಹೊಸಬಾಳೆ, ಹಲವು ವಿಚಾರಗಳಲ್ಲಿ ದೇಶವು ಪ್ರಗತಿ ಸಾಧಿಸಿದೆಯಾದರೂ ಎಷ್ಟೋ ಕ್ಷೇತ್ರಗಳಲ್ಲಿ ಸವಾಲು ಹಾಗೆಯೇ ಉಳಿದಿದೆ ಎಂದು ಅಭಿಪ್ರಾಯಪಟ್ಟರು. ‘ಬಡತನ ಎನ್ನುವುದು ನಮ್ಮೆದುರು ಇರುವ ದೈತ್ಯ ಸವಾಲಾಗಿದೆ. ಬಡತನದ ರಾಕ್ಷಸನನ್ನು ಮಣಿಸುವುದು ನಮ್ಮ ಆದ್ಯತೆಯಾಗಬೇಕು. ದೇಶದ 20 ಕೋಟಿಗಿಂತಲೂ ಹೆಚ್ಚಿನ ಜನರು ಬಡತನ ರೇಖೆಗಿಂತಲೂ ಕೆಳಗೆ ಬದುಕುತ್ತಿದ್ದಾರೆ ಎನ್ನುವುದು ನೋವಿನ ಸಂಗತಿ. ಮತ್ತೊಂದು ಅಂಕಿಅಂಶದ ಪ್ರಕಾರ ದೇಶದ 23 ಕೋಟಿಗೂ ಹೆಚ್ಚು ಜನರು ದಿನಕ್ಕೆ ₹ 275ಕ್ಕೂ ಕಡಿಮೆ ಆದಾಯದಲ್ಲಿ ದಿನದೂಡುತ್ತಿದ್ದಾರೆ ಎಂದು ಹೇಳಿದರು. ಭಾರತದಲ್ಲಿ 4 ಕೋಟಿ ಉದ್ಯೋಗಸ್ಥರಿದ್ದಾರೆ. ಆದರೂ ನಮ್ಮಲ್ಲಿ ನಿರುದ್ಯೋಗಿಗಳ ಪ್ರಮಾಣ ಶೇ 7.6ರಷ್ಟು ಇದೆ ಎಂದು ವಿವರಿಸಿದರು.

ಬಡತನಕ್ಕೆ ಕಾರಣವಾಗುವ ಅಂಶಗಳ ಕುರಿತು ಹೊಸಬಾಳೆ ಪ್ರಸ್ತಾಪಿಸಿದರು. ನಿರುದ್ಯೋಗ, ಸಮರ್ಪಕ ವಿದ್ಯಾಭ್ಯಾಸ ಇಲ್ಲದಿರುವುದು, ಅಪೌಷ್ಟಿಕತೆ ಮತ್ತು ಶುದ್ಧ ಕುಡಿಯುವ ನೀರಿನ ಅಲಭ್ಯತೆ ಮತ್ತು ಪರಿಸರ ಸಂಬಂಧಿ ಸಮಸ್ಯೆಗಳು ಬಡತನದ ತೀವ್ರತೆಯನ್ನು ಹೆಚ್ಚಿಸುತ್ತಿವೆ ಎಂದು ಹೇಳಿದರು. ತಮ್ಮ ಹೇಳಿಕೆಗೆ ಆಧಾರವಾಗಿ ವಿಶ್ವಸಂಸ್ಥೆಯ ದತ್ತಾಂಶಗಳನ್ನು ಹೊಸಬಾಳೆ ನೀಡಿದರು. ‘ಸಾಮಾಜಿಕ ಅಶಾಂತಿ, ಹವಾಮಾನ ವೈಪರಿತ್ಯವೂ ಬಡತನಕ್ಕೆ ಕಾರಣ. ಕೆಲವೊಮ್ಮೆ ಸರ್ಕಾರಗಳ ಕಾರ್ಯನಿರ್ವಹಣೆಯಲ್ಲಿ ಆಗುವ ಲೋಪಗಳು ಬಡತನದ ತೀವ್ರತೆಯನ್ನು ಹೆಚ್ಚಿಸುತ್ತವೆ’ ಎಂದು ಅವರು ತಿಳಿಸಿದರು.

ಉದ್ಯಮಶೀಲತೆಯ ಅಗತ್ಯ ಕುರಿತು ಪ್ರಸ್ತಾಪಿಸಿದ ಅವರು, ‘ಉದ್ಯೋಗ ಕೇಳಿಕೊಂಡು ಓಡಾಡುವವರು ಸ್ವತಃ ಉದ್ಯೋಗದಾರರಾಗಬೇಕು. ಉದ್ಯಮಶೀಲತೆ ಬೆಳೆದಾಗ ಮಾತ್ರ ಇದು ಸಾಧ್ಯವಾಗುತ್ತದೆ. ಉದ್ಯಮಿಗಳನ್ನು ಪ್ರೋತ್ಸಾಹಿಸುವ ವಾತಾವರಣವನ್ನು ನಾವು ರೂಪಿಸಬೇಕಿದೆ. ಎಲ್ಲ ಕೆಲಸಗಳು ಸಮಾನ ಎಂದು ಸಮಾಜವೂ ಅರ್ಥ ಮಾಡಿಕೊಳ್ಳಬೇಕು. ಎಲ್ಲ ಕೆಲಸಗಳಿಗೂ ಸಮಾನ ಗೌರವ ಸಿಗಬೇಕು. ತೋಟದ ಕೆಲಸ ಮಾಡುವವರಿಗೆ ಗೌರವ ಸಿಗುವುದಿಲ್ಲ ಎಂದಾದರೆ ಆ ಕೆಲಸ ಮಾಡಲು ಯಾರೂ ಮುಂದೆ ಬರುವುದಿಲ್ಲ. ನಮ್ಮ ಮನಸ್ಥಿತಿ ಬದಲಾಗಬೇಕಿದೆ’ ಎಂದು ಹೇಳಿದರು.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!