ನ್ಯಾಷನಲ್ ಹೆರಾಲ್ಡ್ ಪ್ರಕರಣ; ಕೂಡಲೇ ಮಧ್ಯ ಪ್ರವೇಶಿಸುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಕೆಪಿಸಿಸಿ

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ; ಕೂಡಲೇ ಮಧ್ಯ ಪ್ರವೇಶಿಸುವಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಕೆಪಿಸಿಸಿ
ಸಲೀಂ ಅಹ್ಮದ್
Follow us
| Edited By: Rakesh Nayak Manchi

Updated on: Jun 16, 2022 | 9:58 PM

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಸಲ್ಲಿಸಿದೆ. ತನಿಖೆ ಸಂಬಂಧ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡಲೇ ಮಧ್ಯಪ್ರವೇಶಿಸಬೇಕೆಂದು ರಾಜ್ಯಪಾಲರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಿದ ನಂತರ ರಾಜಭವನದ ಬಳಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (Salim Ahmed), ರಾಹುಲ್ ಮತ್ತು ಸೋನಿಯಾ ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಲಾಗಿದ್ದುಇಡಿ ನೋಟಿಸ್ ಕೊಟ್ಟು ಹೆದರಿಸಲಾಗುತ್ತಿದೆ. ವಿಚಾರಣೆ ಹೆಸರಲ್ಲಿ ರಾಹುಲ್ ಗಾಂಧಿಯವರಿಗೆ 3 ದಿನ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಇಂಥ ಹೆದರಿಕೆ, ಬೆದರಿಕೆಗೆ ನಾವು ಜಗ್ಗೋದಿಲ್ಲ, ಬಗ್ಗೋದಿಲ್ಲ ಎಂದರು.

ಇದನ್ನೂ ಓದಿ: ಪ್ರತಿಭಟನೆಯಲ್ಲಿ ಓವರ್ ಆ್ಯಕ್ಟಿಂಗ್ ಮಾಡಿದವರಿಗೆ ಬಹುಮಾನ, ಕ್ಯಾಮೆರಾ ಕಂಡ ಕೂಡಲೆ ಆ್ಯಕ್ಟಿಂಗ್ ಶುರು: ರಾಜುಗೌಡ ವ್ಯಂಗ್ಯ

ದೆಹಲಿಯ ಎಐಸಿಸಿಗೆ ನಮ್ಮ ಪದಾಧಿಕಾರಿ ಹೋಗಲು ಬಿಡುತ್ತಿಲ್ಲ. ಇಂದು ರಾಜಭವನ ಮುತ್ತಿಗೆ ಹಮ್ಮಿಕೊಂಡಿದ್ದೆವು. ಆದರೆ ನಮ್ಮ ಕಾರ್ಯಕರ್ತರನ್ನು ಅಲ್ಲಲ್ಲಿ ಪೊಲೀಸರು ಬಂಧಿಸಿದರು. ರಾಜಭವನಕ್ಕೆ ಹೋಗಲು ಬಿಡಲಿಲ್ಲ. ಪೊಲೀಸರು ಸರ್ಕಾರದ ಆದೇಶದ ಮೇರೆಗೆ ಬಲವಂತವಾಗಿ ಅರೆಸ್ಟ್ ಮಾಡಿದ್ದಾರೆ. ಬಿಜೆಪಿ ಸರ್ಕಾರ ಪೊಲೀಸ್ ರಾಜ್ಯವನ್ನಾಗಿ ಮಾಡಿದೆ ಎಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವ ಎಲ್ಲಿದೆ ಎಂದು ಪ್ರಶ್ನಿಸಿದರು.

ರಾಜಕೀಯ ಮುಂಚೂಣಿ ಘಟಕ ರೀತಿ ಕೆಲಸ ಮಾಡುವ ಇಡಿ:

ತನಿಖಾ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ರಾಜಕೀಯ ಮುಂಚೂಣಿ ಘಟಕ ರೀತಿ ಕೆಲಸ ಮಾಡುತ್ತಿದೆ. ರಾಹುಲ್ ಗಾಂಧಿ ವಿಚಾರಣೆ ಬಗ್ಗೆ ಕೂಡಲೇ ಮಧ್ಯಪ್ರವೇಶ ಮಾಡುವಂತೆ ಕೋರಿ ಇಂದು ರಾಜ್ಯಪಾಲರ ಮೂಲಕ ಮನವಿ ಪತ್ರ ಸಲ್ಲಿಸಿದ್ದೇವೆ. ಮನವಿ ಪತ್ರ ಸಲ್ಲಿಕೆ ವೇಳೆ ರಾಜ್ಯಪಾಲರು ಇರಲಿಲ್ಲ. ಹೀಗಾಗಿ ಕಾರ್ಯದರ್ಶಿಯವರಿಗೆ ಸಲ್ಲಿಸಿದ್ದೇವೆ. ಅವರು ರಾಜ್ಯಪಾಲರಿಗೆ ಪತ್ರ ತಲುಪಿಸಿರುವುದಾಗಿ ತಿಳಿಸಿದ್ದಾರೆ ಎಂದರು.

ಇದನ್ನೂ ಓದಿ: ರಾಮ, ಕೃಷ್ಣ ಎಲ್ಲರೂ ಶೂದ್ರ ದೇವತೆಗಳು: ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ಆಕ್ರೋಶ

ವಿಚಾರಣೆಗೆ ಹಾಜರಾಗುವಂತೆ ಕೆಜಿಎಫ್​ ಬಾಬುಗೆ ಸೂಚನೆ:

ನಿವಾಸದ ಮೇಲೆ ನಡೆದ ದಾಳಿ ವೇಳೆ ಇಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ಕೆಜಿಎಫ್ ಬಾಬು (ಯೂಸುಫ್ ಶರೀಫ್) ಸಮನ್ಸ್ ಜಾರಿ ಮಾಡಿತ್ತು. ಅದರಂತೆ ಇಂದು ಸತತ 9 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಕೆಜಿಎಫ್ ಬಾಬು ಅವರನ್ನು ನಾಳೆಯೂ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಇಂದು ಕೆಜಿಎಫ್ ಬಾಬು (KGF Babu) ಅವರ ಅಳಿಯ ಸಲ್ಮಾನ್ ಖಾನ್ ಅವರನ್ನೂ ವಿಚಾರಣೆಗೊಳಪಡಿಸಿತು.

ಕೆಜಿಎಫ್ ಬಾಬು ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಮೇ 28ರಂದು ಇಡಿ ದಾಳಿ ನಡೆದಿತ್ತು. ಈ ವೇಳೆ 3.75 ಕೆಜಿ ಚಿನ್ನಾಭರಣಗಳು ಪತ್ತೆಯಾಗಿದ್ದು, ಇದಕ್ಕೆ ದೆಹಲಿಗೆ ಆಗಮಿಸಿ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿತ್ತು.

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ