Eknath Shinde: ಫಡ್ನವಿಸ್​ ಜೊತೆ ಇಂದು ಸಿಎಂ ಏಕನಾಥ್ ಶಿಂಧೆ ದೆಹಲಿಗೆ ಭೇಟಿ; ಮಹಾರಾಷ್ಟ್ರ ಸಂಪುಟದ ಬಗ್ಗೆ ಚರ್ಚೆ ಸಾಧ್ಯತೆ

ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವಿಸ್ ಶನಿವಾರ ಹಿರಿಯ ನಾಯಕರಾದ ಪಿಎಂ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.

Eknath Shinde: ಫಡ್ನವಿಸ್​ ಜೊತೆ ಇಂದು ಸಿಎಂ ಏಕನಾಥ್ ಶಿಂಧೆ ದೆಹಲಿಗೆ ಭೇಟಿ; ಮಹಾರಾಷ್ಟ್ರ ಸಂಪುಟದ ಬಗ್ಗೆ ಚರ್ಚೆ ಸಾಧ್ಯತೆ
ಏಕನಾಥ್ ಶಿಂಧೆ
S Chandramohan

| Edited By: Sushma Chakre

Jul 08, 2022 | 3:38 PM

ಮುಂಬೈ: ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ (Eknath Shinde) ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಏಕನಾಥ್ ಶಿಂಧೆ ಭೇಟಿಯಾಗಲಿದ್ದಾರೆ. ದೆಹಲಿಯ ಭೇಟಿ ವೇಳೆ ಮಹಾರಾಷ್ಟ್ರದ ಕ್ಯಾಬಿನೆಟ್ ರಚನೆಯ ಬಗ್ಗೆ ಚರ್ಚೆ ನಡೆಯುವ ನಿರೀಕ್ಷೆ ಇದೆ. ಏಕನಾಥ್ ಶಿಂಧೆ ಜೊತೆಗೆ ಡಿಸಿಎಂ ದೇವೇಂದ್ರ ಫಡ್ನವೀಸ್ ಕೂಡ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಇಂದು ಸಂಜೆ ನವದೆಹಲಿಗೆ ಭೇಟಿ ನೀಡುವರು. ಏಕನಾಥ್ ಶಿಂಧೆ ತಮ್ಮ ಹೊಸ ಕಚೇರಿಯ ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಷ್ಟ್ರ ರಾಜಧಾನಿಯ ಮೊದಲ ಪ್ರವಾಸ ಇದಾಗಿದೆ. ಮಾಹಿತಿ ಪ್ರಕಾರ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ದೆಹಲಿಗೆ ಎರಡು ದಿನಗಳ ಭೇಟಿಯಲ್ಲಿ ಸಿಎಂ ಏಕನಾಥ್ ಅವರೊಂದಿಗೆ ತೆರಳಲಿದ್ದಾರೆ. ಅಧಿಕೃತ ಕಾರ್ಯಕ್ರಮಗಳನ್ನು ಬಹಿರಂಗಪಡಿಸದಿದ್ದರೂ, ಇಬ್ಬರೂ ನಾಯಕರು ತಮ್ಮ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ. ಜೂನ್ 30ರಂದು ಏಕನಾಥ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ಅವರು ಸಿಎಂ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂದು ಸಂಜೆ ನವದೆಹಲಿಗೆ ಸರ್ಕಾರಿ ಚಾರ್ಟರ್ಡ್ ವಿಮಾನದಲ್ಲಿ ತೆರಳುವುದಾಗಿ ಸಿಎಂ ಏಕನಾಥ್ ಶಿಂಧೆ ಅವರ ಪ್ರವಾಸದ ವಿವರವನ್ನು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ. ನಂತರ, ಇತರ ಮಾಹಿತಿಗಳ ಪ್ರಕಾರ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಡಿಸಿಎಂ ದೇವೇಂದ್ರ ಫಡ್ನವಿಸ್ ಶನಿವಾರ ಹಿರಿಯ ನಾಯಕರಾದ ಪಿಎಂ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.

ಇದನ್ನೂ ಓದಿ: Eknath Shinde: ಪ್ರಜ್ಞೆ ತಪ್ಪಿದ ಮಹಿಳಾ ಕಾನ್​ಸ್ಟೆಬಲ್​ಗೆ ಸಹಾಯ ಮಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ; ವಿಡಿಯೋ ವೈರಲ್

ಮಹಾರಾಷ್ಟ್ರದ ಹೊಸ ಸರ್ಕಾರಕ್ಕೆ ಇನ್ನೂ ಕ್ಯಾಬಿನೆಟ್ ಮಂತ್ರಿಗಳು ಸಿಗದಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಈ ಹಿಂದೆ ವರದಿಯಾಗಿತ್ತು. ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೂ ಮುನ್ನ ಮೊದಲ ಘೋಷಣೆ ಹೊರಬೀಳಲಿದ್ದು, ಚುನಾವಣೆ ಬಳಿಕ ಎರಡನೇ ಹಂತದ ಸಂಪುಟ ರಚನೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, 28 ಸಚಿವ ಸ್ಥಾನಗಳು ಬಿಜೆಪಿಗೆ ಬರಲಿದ್ದು, ಈ ಪೈಕಿ 8 ಮಂದಿ ರಾಜ್ಯ ಸಚಿವರಾಗಲಿದ್ದಾರೆ. ಇದೇ ವೇಳೆ ಶಿಂಧೆ ಪಾಳಯಕ್ಕೆ 14 ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಪಿಟಿಐ ಪ್ರಕಾರ, ಸಿಎಂ ಏಕನಾಥ್ ಶಿಂಧೆ ಶನಿವಾರ ಸಂಜೆ ಪುಣೆಗೆ ತೆರಳುತ್ತಾರೆ ಮತ್ತು ಭಾನುವಾರ ಮುಂಜಾನೆ ‘ಆಷಾಢ ಏಕಾದಶಿ’ ಮಹಾಪೂಜೆಯಲ್ಲಿ ಪಾಲ್ಗೊಳ್ಳಲು ದೇವಾಲಯದ ಪಟ್ಟಣವಾದ ಪಂಢರಪುರಕ್ಕೆ ತೆರಳಲಿದ್ದಾರೆ. ಸೊಲ್ಲಾಪುರ ಜಿಲ್ಲೆಯ ಪಂಢರಪುರದಲ್ಲಿ ವಿಠ್ಠಲ ಮತ್ತು ರುಕ್ಮಿಣಿ ದೇವಿಗೆ ಸಮರ್ಪಿತವಾದ ಪ್ರಸಿದ್ಧ ದೇವಾಲಯವಿದೆ.

ಇದನ್ನೂ ಓದಿ: Maharashtra Politics: ಸಿಎಂ ಏಕನಾಥ್ ಶಿಂಧೆ ಸರ್ಕಾರಕ್ಕೆ ಉದ್ಧವ್ ಠಾಕ್ರೆ ಬಣದಿಂದ ಹೊಸ ಸವಾಲು

ಪ್ರಮುಖ ಹಿಂದೂ ಹಬ್ಬವಾದ ‘ಆಷಾಢ ಏಕಾದಶಿ’ಯಂದು ದೇವಸ್ಥಾನದಲ್ಲಿ ಮುಂಜಾನೆ ಪ್ರಾರ್ಥನೆಗೆ ಮುಖ್ಯಮಂತ್ರಿ ಮತ್ತು ಅವರ ಸಂಗಾತಿಯು ಹಾಜರಾಗಲು ಮಹಾರಾಷ್ಟ್ರದಲ್ಲಿ ದೀರ್ಘಕಾಲದ ಸಂಪ್ರದಾಯವಾಗಿದೆ. 15 ಬಂಡಾಯ ಶಿವಸೇನೆ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಜುಲೈ 11 ರಂದು ವಿಚಾರಣೆಗೆ ಮುನ್ನ ಶಿಂಧೆ ಅವರ ದೆಹಲಿ ಭೇಟಿ ನಡೆಯುತ್ತಿದೆ.

ಇದನ್ನೂ ಓದಿ

ಏಕನಾಥ್ ಶಿಂಧೆ ನೇತೃತ್ವದ ಸೇನಾ ಶಾಸಕರ ಒಂದು ವಿಭಾಗದ ಬಂಡಾಯವು ಕಳೆದ ತಿಂಗಳು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಪತನಕ್ಕೆ ಕಾರಣವಾಯಿತು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada