Eknath Shinde ಏಕನಾಥ್ ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿ, ಇಂದು ಸಂಜೆ 7.30ಕ್ಕೆ ಪ್ರಮಾಣ ವಚನ ಸ್ವೀಕಾರ
Maharashtra New Chief Minister ಶಿಂಧೆ ಜತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಫಡ್ನವಿಸ್ ಇಂದು ಪ್ರಮಾಣವಚನ ಸಮಾರಂಭದ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು ಶಿವಸೇನಾ ಮತ್ತು ಬಿಜೆಪಿ ನಾಯಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಏಕನಾಥ್ ಶಿಂಧೆ (Eknath Shinde) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದು, ಇಂದು ಸಂಜೆ 7.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜೆಪಿ (BJP) ನಾಯಕ ದೇವೇಂದ್ರ ಫಡ್ನವಿಸ್ (Devendra Fadnavis) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಶಿಂಧೆ ಜತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಫಡ್ನವಿಸ್ ಇಂದು ಪ್ರಮಾಣವಚನ ಸಮಾರಂಭದ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು ಶಿವಸೇನಾ ಮತ್ತು ಬಿಜೆಪಿ ನಾಯಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾನು ಸರ್ಕಾರದ ಅಂಗವಾಗಿರುವುದಿಲ್ಲ ಎಂದಿದ್ದಾರೆ ಫಡ್ನವಿಸ್. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ನಂತರ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದು ಏಕನಾಥ್ ಶಿಂಧೆ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಎಂದು ಘೋಷಿಸಿದರು. ಫಡ್ನವಿಸ್ ಮತ್ತು ಶಿಂಧೆ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿದ್ದು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು 2019 ರಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಕೈ ಜೋಡಿಸುವ ಮೂಲಕ ಶಿವಸೇನೆ ಸಾರ್ವಜನಿಕ ಜನಾದೇಶವನ್ನು ಅವಮಾನಿಸಿದೆ ಎಂದು ಫಡ್ನವೀಸ್ ಹೇಳಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಇಬ್ಬರು ಎನ್‌ಸಿಪಿ ನಾಯಕರನ್ನು ಉಲ್ಲೇಖಿಸಿ ಅವರು ಮಹಾ ವಿಕಾಸ್ ಅಘಾಡಿ ಸರ್ಕಾರದ ಆಡಳಿತದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದ್ದಾರೆ.
“Eknath Shinde to be the Maharashtra Chief Minister, oath ceremony to be held at 7.30pm today,” BJP leader Devendra Fadnavis announces in a joint press conference with Shinde pic.twitter.com/PiXv1I5nkU
ಇದನ್ನೂ ಓದಿ— ANI (@ANI) June 30, 2022
ರಾಜ್ಯ ಮತ್ತು ಶಾಸಕರ ಕ್ಷೇತ್ರಗಳ ಅಭಿವೃದ್ಧಿಗಾಗಿ ನಾವು ಎಂವಿಎ ತ್ಯಜಿಸಿದ್ದೇವೆ. ಶಾಸಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಿಎಂ ಠಾಕ್ರೆ ಅವರಿಗೆ ಕಾಲಕಾಲಕ್ಕೆ ತಿಳಿಸುತ್ತಿದ್ದೆ. ಆದರೆ ಅವರು ಅದರತ್ತ ಗಮನ ಹರಿಸಿಲ್ಲ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.
ಕಳೆದ ಎರಡೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹಲವು ಸಮಸ್ಯೆಗಳನ್ನು ಶಿಂಧೆ ನೇತೃತ್ವದ ಸರ್ಕಾರ ಪರಿಹರಿಸಲಿದೆ. ಮರಾಠರು, ಒಬಿಸಿಗಳಿಗೆ ಮೀಸಲಾತಿ ಮತ್ತು ಮೂಲಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸುವುದು ಹೊಸ ಸರ್ಕಾರದ ಆದ್ಯತೆಗಳಾಗಿರುತ್ತದೆ. ಬಾಳಾಸಾಹೇಬ್ ಠಾಕ್ರೆ ತಮ್ಮ ಜೀವನದುದ್ದಕ್ಕೂ ವಿರೋಧಿಸಿದ ಜನರೊಂದಿಗೆ ಶಿವಸೇನಾ ಹೋಗಿದೆ. ಠಾಕ್ರೆ ಸರ್ಕಾರವು ಭ್ರಷ್ಟಾಚಾರದಿಂದ ಕೂಡಿತ್ತು. ಇಬ್ಬರು ಮಂತ್ರಿಗಳು ಭ್ರಷ್ಟಾಚಾರದ ಆರೋಪದಲ್ಲಿ ಜೈಲಿಗೆ ಹೋಗಿದ್ದಾರೆ ಎಂದು ಎಂದು ಫಡ್ನವಿಸ್ ಹೇಳಿದ್ದಾರೆ.
Published On - 4:41 pm, Thu, 30 June 22