EC on President Election 2022 Date ರಾಷ್ಟ್ರಪತಿ ಚುನಾವಣೆ: ಜುಲೈ 18ಕ್ಕೆ ಮತದಾನ, 21ಕ್ಕೆ ಮತ ಎಣಿಕೆ

2022 ರ ರಾಷ್ಟ್ರಪತಿ  ಚುನಾವಣೆಯಲ್ಲಿ ಮತ ಚಲಾಯಿಸುವ ಒಟ್ಟು ಮತದಾರರ ಸಂಖ್ಯೆ 4,809 . ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಾಸಕರಿಗೆ ಯಾವುದೇ ವಿಪ್ ನೀಡುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್  ಹೇಳಿದ್ದಾರೆ

EC on President Election 2022 Date ರಾಷ್ಟ್ರಪತಿ ಚುನಾವಣೆ: ಜುಲೈ 18ಕ್ಕೆ ಮತದಾನ, 21ಕ್ಕೆ ಮತ ಎಣಿಕೆ
ಚುನಾವಣಾ ಆಯೋಗ ಪತ್ರಿಕಾಗೋಷ್ಠಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 09, 2022 | 3:52 PM

ದೆಹಲಿ: ಭಾರತದ ಮುಂದಿನ ರಾಷ್ಟ್ರಪತಿ ಚುನಾವಣೆಗೆ (President of India Election )ಚುನಾವಣಾ ಆಯೋಗವು (Election Commission) ವೇಳಾಪಟ್ಟಿ ಪ್ರಕಟಿಸಿದ್ದು ಜುಲೈ 18ರಂದು ಮತದಾನ ನಡೆಯಲಿದೆ. ಜುಲೈ  21ಕ್ಕೆ  ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Chief Election Commissioner Rajiv Kumar) ಹೇಳಿದ್ದಾರೆ.  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದ್ದು, ಸಂವಿಧಾನದ 62 ನೇ ವಿಧಿಯ ಪ್ರಕಾರ, ಮುಂದಿನ ರಾಷ್ಟ್ರಪತಿಯನ್ನು ಆ ಹೊತ್ತಿಗೆ ಆಯ್ಕೆ ಮಾಡಬೇಕಾಗಿದೆ.

ರಾಷ್ಟ್ರಪತಿಯನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ?

ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರು ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ.

ಚುನಾವಣಾ ಆಯೋಗದ ಸುದ್ದಿಗೋಷ್ಠಿ

2022 ರ ರಾಷ್ಟ್ರಪತಿ  ಚುನಾವಣೆಯಲ್ಲಿ ಮತ ಚಲಾಯಿಸುವ ಒಟ್ಟು ಮತದಾರರ ಸಂಖ್ಯೆ 4,809 . ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಾಸಕರಿಗೆ ಯಾವುದೇ ವಿಪ್ ನೀಡುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್  ಹೇಳಿದ್ದಾರೆ. ರಾಮನಾಥ್ ಕೋವಿಂದ್ ಅವರು 2017 ರಲ್ಲಿ 65% ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದರು. ಸಂಸದರ ಮತದ ಮೌಲ್ಯ 700 ಆಗಿರುತ್ತದೆ. ಮುಂಜಾಗ್ರತಾ ಕ್ರಮವಾಗಿ ಬಂಧನದಲ್ಲಿರುವವರು  ಮತ ಚಲಾಯಿಸಬಹುದು.  ಜೈಲಿನಲ್ಲಿರುವವರು ಪೆರೋಲ್‌ಗೆ ಅರ್ಜಿ ಸಲ್ಲಿಸಬೇಕು, ಪೆರೋಲ್ ಪಡೆದರೆ ಅವರು ಮತ ಚಲಾಯಿಸಬಹುದು ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ. ಸಂವಿಧಾನದ ಪ್ರಕಾರ ಅನುಪಾತದ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ ರಹಸ್ಯ ಮತಪತ್ರ ಮೂಲಕ ಚುನಾವಣೆಗಳನ್ನು ನಡೆಸಲಾಗುವುದು.

ರಾಷ್ಟ್ರಪತಿ ಚುನಾವಣೆಯ ಪ್ರಮುಖ ದಿನಾಂಕಗಳು

ಅಧಿಸೂಚನೆಯ ಕರೆಗೆ ದಿನಾಂಕ: ಜೂನ್ 15 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 29 ನಾಮಪತ್ರಗಳ ಪರಿಶೀಲನೆಗೆ ಕೊನೆಯ ದಿನಾಂಕ: ಜೂನ್ 30 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಜುಲೈ 2 ಮತದಾನದ ದಿನಾಂಕ: ಜುಲೈ 18 ಮತ ಎಣಿಕೆ: ಜುಲೈ 21

ಸಂಸತ್ ಭವನ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮತದಾನ ನಡೆಯಲಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:23 pm, Thu, 9 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್