ದೆಹಲಿ: ಭಾರತದ ಮುಂದಿನ ರಾಷ್ಟ್ರಪತಿ ಚುನಾವಣೆಗೆ (President of India Election )ಚುನಾವಣಾ ಆಯೋಗವು (Election Commission) ವೇಳಾಪಟ್ಟಿ ಪ್ರಕಟಿಸಿದ್ದು ಜುಲೈ 18ರಂದು ಮತದಾನ ನಡೆಯಲಿದೆ. ಜುಲೈ 21ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ (Chief Election Commissioner Rajiv Kumar) ಹೇಳಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದ್ದು, ಸಂವಿಧಾನದ 62 ನೇ ವಿಧಿಯ ಪ್ರಕಾರ, ಮುಂದಿನ ರಾಷ್ಟ್ರಪತಿಯನ್ನು ಆ ಹೊತ್ತಿಗೆ ಆಯ್ಕೆ ಮಾಡಬೇಕಾಗಿದೆ.
As per the Article 54, the President is elected by an Electoral College consisting of elected MP of LS/RS and elected MLAs of the Legislative Assemblies of all States including NCT of Delhi and Puducherry. pic.twitter.com/Lr9z1iYti3
— Election Commission of India #SVEEP (@ECISVEEP) June 9, 2022
ರಾಷ್ಟ್ರಪತಿಯನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ?
ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರು ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಸದಸ್ಯರು ರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ.
ಚುನಾವಣಾ ಆಯೋಗದ ಸುದ್ದಿಗೋಷ್ಠಿ
2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವ ಒಟ್ಟು ಮತದಾರರ ಸಂಖ್ಯೆ 4,809 . ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಾಸಕರಿಗೆ ಯಾವುದೇ ವಿಪ್ ನೀಡುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ರಾಮನಾಥ್ ಕೋವಿಂದ್ ಅವರು 2017 ರಲ್ಲಿ 65% ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದರು. ಸಂಸದರ ಮತದ ಮೌಲ್ಯ 700 ಆಗಿರುತ್ತದೆ. ಮುಂಜಾಗ್ರತಾ ಕ್ರಮವಾಗಿ ಬಂಧನದಲ್ಲಿರುವವರು ಮತ ಚಲಾಯಿಸಬಹುದು. ಜೈಲಿನಲ್ಲಿರುವವರು ಪೆರೋಲ್‌ಗೆ ಅರ್ಜಿ ಸಲ್ಲಿಸಬೇಕು, ಪೆರೋಲ್ ಪಡೆದರೆ ಅವರು ಮತ ಚಲಾಯಿಸಬಹುದು ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ. ಸಂವಿಧಾನದ ಪ್ರಕಾರ ಅನುಪಾತದ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ ರಹಸ್ಯ ಮತಪತ್ರ ಮೂಲಕ ಚುನಾವಣೆಗಳನ್ನು ನಡೆಸಲಾಗುವುದು.
Presidential poll | The value of the vote of an MP will be 700. Those in preventive detention can vote and those in jail will have to apply for parole and if they get parole, they can vote: Chief Election Commissioner Rajiv Kumar pic.twitter.com/NvjrGFLO1c
— ANI (@ANI) June 9, 2022
ರಾಷ್ಟ್ರಪತಿ ಚುನಾವಣೆಯ ಪ್ರಮುಖ ದಿನಾಂಕಗಳು
ಅಧಿಸೂಚನೆಯ ಕರೆಗೆ ದಿನಾಂಕ: ಜೂನ್ 15
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 29
ನಾಮಪತ್ರಗಳ ಪರಿಶೀಲನೆಗೆ ಕೊನೆಯ ದಿನಾಂಕ: ಜೂನ್ 30
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಜುಲೈ 2
ಮತದಾನದ ದಿನಾಂಕ: ಜುಲೈ 18
ಮತ ಎಣಿಕೆ: ಜುಲೈ 21
ಸಂಸತ್ ಭವನ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮತದಾನ ನಡೆಯಲಿದೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 3:23 pm, Thu, 9 June 22