ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು: ಬಸವರಾಜ ಬೊಮ್ಮಾಯಿ
ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಅವರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಇದು ನಿಜವಾಗಿದ್ದರೆ ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಸೆ.19: ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ (Siddaramaiah) ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ (Yathindra Siddaramaiah) ಅವರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಇದು ನಿಜವಾಗಿದ್ದರೆ ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈ ಕುರಿತು ಯತೀಂದ್ರ ಅವರು ಹೇಳಿದ್ದು ನಿಜವಾಗಿದ್ದರೆ, ಅದನ್ನು ಚುಬಾವಣಾ ಆಯೋಗ ಗಮನಿಸಬೇಕಾಗುತ್ತದೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಒಂದು ಚುನಾವಣಾ ತಕರಾರು ಅರ್ಜಿ ಇದೆ ಎಂದರು.
ಇದನ್ನೂ ಓದಿ: ದೇವೇಗೌಡರ ಹಾಗೆ ಬಸವರಾಜ ಬೊಮ್ಮಾಯಿ ರಚನಾತ್ಮಕ ಸಲಹೆ ನೀಡಿದರೆ ಖಂಡಿತ ಪರಿಗಣಿಸುತ್ತೇವೆ: ಡಿಕೆ ಶಿವಕುಮಾರ್, ಡಿಸಿಎಂ
ಡಾ. ಯತೀಂದ್ರ ಹೇಳಿದ್ದಕ್ಕೆ ಸಾಕ್ಷ್ಯಾಧಾರ ಇದ್ದರೆ ಆಯೋಗ ಇದನ್ನು ಪರಿಗಣಿಸಬೇಕಾಗುತ್ತದೆ. ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು.
ನಂಜನಗೂಡು ತಾಲೂಕಿನ ಮಡಿವಾಳ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯತೀಂದ್ರ ಅವರು ಮಾತನಾಡುವ ಭರದಲ್ಲಿ ಸಾವಿರಾರು ಜನರಿಗೆ ಕುಕ್ಕರ್, ಐರನ್ ಬಾಕ್ಸ್ ವಿತರಣೆ ಮಾಡಿದ್ದು ಹೌದು ಎಂದು ಒಪ್ಪಿಕೊಂಡಿದ್ದಾರೆ.
ವರುಣಾ ಕ್ಷೇತ್ರದ ಮಡಿವಾಳ ಸಮುದಾಯದ ಜನರಿಗೆ ಗಿಫ್ಟ್ ವಿತರಿಸಲು ಯೋಜಿಸಲಾಗಿತ್ತು. ಕಾರಣಾಂತರಗಳಿಂದ ಇದು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯಿಂದ ದಿನಾಂಕ ನಿಗದಿ ಮಾಡಿ ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದು ಹೇಳಿಕೆ ನೀಡಿದ್ದರು. ಇದು ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದಂತಾಗಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ