ನಾಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ: ಹೈದರಾಬಾದ್​ಗೆ ತೆರಳಿದ ರಾಜ್ಯ ಕಾಂಗ್ರೆಸ್​ ನಾಯಕರು

ನಾಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹಿನ್ನೆಲೆ ಹೈಕಮಾಂಡ್ ಸೂಚನೆ ಮೇರೆಗೆ ಶಾಸಕ ರಿಜ್ವಾನ್ ಅರ್ಷದ್, ಕೆ.ಹೆಚ್‌.ಮುನಿಯಪ್ಪ, ಎಂ.ಸಿ.ಸುಧಾಕರ್​​ ಸೇರಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ಹೈದರಾಬಾದ್‌ಗೆ ತೆರಳಿದ್ದಾರೆ. ಇಡೀ ದೇಶವೇ ಎದುರು ನೋಡ್ತಿರೋ ಪಂಚರಾಜ್ಯ ಚುನಾವಣೆಯ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ.

ನಾಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ: ಹೈದರಾಬಾದ್​ಗೆ ತೆರಳಿದ ರಾಜ್ಯ ಕಾಂಗ್ರೆಸ್​ ನಾಯಕರು
ಕೆ.ಹೆಚ್‌.ಮುನಿಯಪ್ಪ, ರಿಜ್ವಾನ್ ಅರ್ಷದ್
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 02, 2023 | 8:01 PM

ಬೆಂಗಳೂರು, ಡಿಸೆಂಬರ್​​ 02: ಇಡೀ ದೇಶವೇ ಎದುರು ನೋಡ್ತಿರೋ ಪಂಚರಾಜ್ಯ ಚುನಾವಣೆ (election) ಯ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ. ಐದು ರಾಜ್ಯಗಳಲ್ಲಿ ನಾಲ್ಕು ರಾಜ್ಯ ಚುನಾವಣೆಯ ಫಲಿತಾಂಶ ನಾಳೆ ಬಹಿರಂಗವಾಗಲಿದೆ. ಮಿಜೋರಾಂ ರಾಜ್ಯದಲ್ಲಿ ನಾಳೆ ಬದಲು ನಾಡಿದ್ದು ಮತ ಎಣಿಕೆ ನಡೆಯಲಿದೆ. ನಾಲ್ಕು ರಾಜ್ಯದಲ್ಲಿ ಸ್ಪರ್ಧಿಸಿರುವ ಪಕ್ಷಗಳ ನಾಯಕರ ಎದೆ ಬಡಿತ ಮತ್ತಷ್ಟು ಜೋರಾಗಿದೆ. ನಾಳೆ ತೆಲಂಗಾಣ ಚುನಾವಣಾ ಫಲಿತಾಂಶ ಹಿನ್ನೆಲೆ ಹೈಕಮಾಂಡ್ ಸೂಚನೆ ಮೇರೆಗೆ ಶಾಸಕ ರಿಜ್ವಾನ್ ಅರ್ಷದ್​ ಸೇರಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ಹೈದರಾಬಾದ್‌ಗೆ ತೆರಳಿದ್ದಾರೆ.

ಕೆಂಪೇಗೌಡ ಏರ್‌ಪೋರ್ಟ್‌ನಿಂದ ಶಾಸಕ ರಿಜ್ವಾನ್ ಅರ್ಷದ್ ಪ್ರಯಾಣ ಇಂದು ಸಂಜೆ 6.40ರ ಇಂಡಿಗೋ‌ ವಿಮಾನದಲ್ಲಿ ತೆರಳಲಿದ್ದಾರೆ. ಸಚಿವರಾದ ಕೆ.ಹೆಚ್‌.ಮುನಿಯಪ್ಪ, ಎಂ.ಸಿ.ಸುಧಾಕರ್​, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌, K.R.ಪೇಟೆ ಶಾಸಕ H.T.ಮಂಜು, ಜಮೀರ್ ಅಹಮದ್ ಖಾನ್ ಮತ್ತು ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಕೂಡ ಇಂದು ಬೆಂಗಳೂರಿಂದ ಹೈದರಾಬಾದ್‌ಗೆ ತೆರಳಲಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ: ಸಿಎಂ ಸಿದ್ದರಾಮಯ್ಯ

ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ. ಆಪರೇಷನ್ ಕಮಲಕ್ಕೆ ಯಾರೂ ಒಳಗಾಗುವುದಿಲ್ಲ. ತೆಲಂಗಾಣದಲ್ಲಿ ಬಿಆರ್​ಎಸ್​, ಕಾಂಗ್ರೆಸ್ ನಡುವೆ ಸ್ಪರ್ಧೆ ಇರೋದು. ಮೂರು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದಿದ್ದಾರೆ.

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ಇದನ್ನೂ ಓದಿ: Assembly Election Result 2023:ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಫಾಲೋ ಮಾಡಿ

ಮಹಾರಾಷ್ಟ್ರದಿಂದ ಆಪರೇಷನ್ ಶುರು ಮಾಡಿದ್ದೆ ಕಾಂಗ್ರೆಸ್ ಪಕ್ಷ. ಬಿಜೆಪಿ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್​​ನವರು ಮಾತನಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿ.ವೈ.ವಿಜಯೇಂದ್ರಗೆ ಸ್ವಾಭಿಮಾನವಿದ್ರೆ ಕರ್ನಾಟಕಕ್ಕೆ ಅನುದಾನ ತರಲಿ: ಸಲೀಂ ಅಹ್ಮದ್

ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದು, ಪಂಚರಾಜ್ಯಗಳ ಪೈಕಿ 4 ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ದೇಶದಲ್ಲಿ ಈಗ ಕರ್ನಾಟಕ ಮಾದರಿ ಹೆಚ್ಚು ಪ್ರಸಿದ್ಧಿ ಪಡೆದಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಸೇರಿ 4 ರಾಜ್ಯಗಳಲ್ಲಿ ಗೆಲ್ತೇವೆ. 6 ತಿಂಗಳ ಬಳಿಕ ಅತ್ತು ಕರೆದು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಬಿ.ವೈ.ವಿಜಯೇಂದ್ರಗೆ ಸ್ವಾಭಿಮಾನವಿದ್ರೆ ಪ್ರಧಾನಿ ಬಳಿ ಹೋಗಿ ಬರಪೀಡಿತ ಕರ್ನಾಟಕಕ್ಕೆ ಅನುದಾನ ತರಲಿ. ಇಷ್ಟು ಸಂಸದರಿದ್ರೂ ಪ್ರಧಾನಿ ಬಳಿ ಕೈ‌ಕಟ್ಟಿ ಕುಳಿತುಕೊಳ್ಳುವುದನ್ನ ನಿಲ್ಲಿಸಲಿ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ