ನಾಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ: ಹೈದರಾಬಾದ್​ಗೆ ತೆರಳಿದ ರಾಜ್ಯ ಕಾಂಗ್ರೆಸ್​ ನಾಯಕರು

ನಾಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹಿನ್ನೆಲೆ ಹೈಕಮಾಂಡ್ ಸೂಚನೆ ಮೇರೆಗೆ ಶಾಸಕ ರಿಜ್ವಾನ್ ಅರ್ಷದ್, ಕೆ.ಹೆಚ್‌.ಮುನಿಯಪ್ಪ, ಎಂ.ಸಿ.ಸುಧಾಕರ್​​ ಸೇರಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ಹೈದರಾಬಾದ್‌ಗೆ ತೆರಳಿದ್ದಾರೆ. ಇಡೀ ದೇಶವೇ ಎದುರು ನೋಡ್ತಿರೋ ಪಂಚರಾಜ್ಯ ಚುನಾವಣೆಯ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ.

ನಾಳೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ: ಹೈದರಾಬಾದ್​ಗೆ ತೆರಳಿದ ರಾಜ್ಯ ಕಾಂಗ್ರೆಸ್​ ನಾಯಕರು
ಕೆ.ಹೆಚ್‌.ಮುನಿಯಪ್ಪ, ರಿಜ್ವಾನ್ ಅರ್ಷದ್
Edited By:

Updated on: Dec 02, 2023 | 8:01 PM

ಬೆಂಗಳೂರು, ಡಿಸೆಂಬರ್​​ 02: ಇಡೀ ದೇಶವೇ ಎದುರು ನೋಡ್ತಿರೋ ಪಂಚರಾಜ್ಯ ಚುನಾವಣೆ (election) ಯ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ. ಐದು ರಾಜ್ಯಗಳಲ್ಲಿ ನಾಲ್ಕು ರಾಜ್ಯ ಚುನಾವಣೆಯ ಫಲಿತಾಂಶ ನಾಳೆ ಬಹಿರಂಗವಾಗಲಿದೆ. ಮಿಜೋರಾಂ ರಾಜ್ಯದಲ್ಲಿ ನಾಳೆ ಬದಲು ನಾಡಿದ್ದು ಮತ ಎಣಿಕೆ ನಡೆಯಲಿದೆ.
ನಾಲ್ಕು ರಾಜ್ಯದಲ್ಲಿ ಸ್ಪರ್ಧಿಸಿರುವ ಪಕ್ಷಗಳ ನಾಯಕರ ಎದೆ ಬಡಿತ ಮತ್ತಷ್ಟು ಜೋರಾಗಿದೆ. ನಾಳೆ ತೆಲಂಗಾಣ ಚುನಾವಣಾ ಫಲಿತಾಂಶ ಹಿನ್ನೆಲೆ ಹೈಕಮಾಂಡ್ ಸೂಚನೆ ಮೇರೆಗೆ ಶಾಸಕ ರಿಜ್ವಾನ್ ಅರ್ಷದ್​ ಸೇರಿದಂತೆ ರಾಜ್ಯ ಕಾಂಗ್ರೆಸ್​ ನಾಯಕರು ಹೈದರಾಬಾದ್‌ಗೆ ತೆರಳಿದ್ದಾರೆ.

ಕೆಂಪೇಗೌಡ ಏರ್‌ಪೋರ್ಟ್‌ನಿಂದ ಶಾಸಕ ರಿಜ್ವಾನ್ ಅರ್ಷದ್ ಪ್ರಯಾಣ ಇಂದು ಸಂಜೆ 6.40ರ ಇಂಡಿಗೋ‌ ವಿಮಾನದಲ್ಲಿ ತೆರಳಲಿದ್ದಾರೆ. ಸಚಿವರಾದ ಕೆ.ಹೆಚ್‌.ಮುನಿಯಪ್ಪ, ಎಂ.ಸಿ.ಸುಧಾಕರ್​, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌, K.R.ಪೇಟೆ ಶಾಸಕ H.T.ಮಂಜು, ಜಮೀರ್ ಅಹಮದ್ ಖಾನ್ ಮತ್ತು ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಕೂಡ ಇಂದು ಬೆಂಗಳೂರಿಂದ ಹೈದರಾಬಾದ್‌ಗೆ ತೆರಳಲಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ: ಸಿಎಂ ಸಿದ್ದರಾಮಯ್ಯ

ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ. ಆಪರೇಷನ್ ಕಮಲಕ್ಕೆ ಯಾರೂ ಒಳಗಾಗುವುದಿಲ್ಲ. ತೆಲಂಗಾಣದಲ್ಲಿ ಬಿಆರ್​ಎಸ್​, ಕಾಂಗ್ರೆಸ್ ನಡುವೆ ಸ್ಪರ್ಧೆ ಇರೋದು. ಮೂರು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದಿದ್ದಾರೆ.

ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು.

ಇದನ್ನೂ ಓದಿ: Assembly Election Result 2023:ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಫಾಲೋ ಮಾಡಿ

ಮಹಾರಾಷ್ಟ್ರದಿಂದ ಆಪರೇಷನ್ ಶುರು ಮಾಡಿದ್ದೆ ಕಾಂಗ್ರೆಸ್ ಪಕ್ಷ. ಬಿಜೆಪಿ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್​​ನವರು ಮಾತನಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿ.ವೈ.ವಿಜಯೇಂದ್ರಗೆ ಸ್ವಾಭಿಮಾನವಿದ್ರೆ ಕರ್ನಾಟಕಕ್ಕೆ ಅನುದಾನ ತರಲಿ: ಸಲೀಂ ಅಹ್ಮದ್

ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದು, ಪಂಚರಾಜ್ಯಗಳ ಪೈಕಿ 4 ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ದೇಶದಲ್ಲಿ ಈಗ ಕರ್ನಾಟಕ ಮಾದರಿ ಹೆಚ್ಚು ಪ್ರಸಿದ್ಧಿ ಪಡೆದಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಸೇರಿ 4 ರಾಜ್ಯಗಳಲ್ಲಿ ಗೆಲ್ತೇವೆ. 6 ತಿಂಗಳ ಬಳಿಕ ಅತ್ತು ಕರೆದು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಬಿ.ವೈ.ವಿಜಯೇಂದ್ರಗೆ ಸ್ವಾಭಿಮಾನವಿದ್ರೆ ಪ್ರಧಾನಿ ಬಳಿ ಹೋಗಿ ಬರಪೀಡಿತ ಕರ್ನಾಟಕಕ್ಕೆ ಅನುದಾನ ತರಲಿ. ಇಷ್ಟು ಸಂಸದರಿದ್ರೂ ಪ್ರಧಾನಿ ಬಳಿ ಕೈ‌ಕಟ್ಟಿ ಕುಳಿತುಕೊಳ್ಳುವುದನ್ನ ನಿಲ್ಲಿಸಲಿ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us