AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ: ಹೆಚ್​ಡಿ ಕುಮಾರಸ್ವಾಮಿ

2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ವಿಪಕ್ಷ ನಾಯಕ ರಾಹುಲ್​ ಗಾಂಧಿ ಮಾಡಿರುವ ಗಂಭೀರ ಆರೋಪ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗದ ಮೇಲೆ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಸದ್ಯ ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದು, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ: ಹೆಚ್​ಡಿ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ, ರಾಹುಲ್ ಗಾಂಧಿ
Sunil MH
| Edited By: |

Updated on: Aug 08, 2025 | 9:45 AM

Share

ಬೆಂಗಳೂರು, ಆಗಸ್ಟ್ 08: 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಆ ಬಗ್ಗೆ ನಮ್ಮ ಬಳಿ ಬ್ಲ್ಯಾಕ್​ ಆ್ಯಂಡ್​ ವೈಟ್​ ಸಾಕ್ಷ್ಯಗಳಿವೆ ಅಂತಾ ವಿಪಕ್ಷ ನಾಯಕ ರಾಹುಲ್​ ಗಾಂಧಿ (Rahul Gandhi) ಗಂಭೀರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ ಬಿಜೆಪಿ ಜೊತೆ ಚುನಾವಣಾ ಆಯೋಗ ಶಾಮೀಲಾಗಿದೆ ಎಂದಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy), ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕಿಡಿಕಾರಿದ್ದಾರೆ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ

ಈ ಬಗ್ಗೆ ಟ್ವೀಟ್​ ಮಾಡಿರುವ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ.  ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ
Image
ನಾಳೆ ಬೆಂಗಳೂರಿನಲ್ಲಿ ರಾಹುಲ್ ಪ್ರತಿಭಟನಾ ಸಮಾವೇಶ:ಇಲ್ಲಿದೆ ಸಂಪೂರ್ಣ ಮಾಹಿತಿ
Image
ಮತಗಳ್ಳತನ ಸಂಖ್ಯೆ ಬಿಡುಗಡೆ ಮಾಡಿದ ರಾಹುಲ್​ಗೆ ಚುನಾವಣಾ ಆಯೋಗ ತಿರುಗೇಟು!
Image
ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್ ಗೋಡೆ ನೆಲಸಮ:  ಬಿಜೆಪಿ ದೂರು
Image
ರಾಹುಲ್ ಗಾಂಧಿಯ "ಮತ ಕಳ್ಳತನ" ಪದವು ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ

ಹೆಚ್​​ಡಿ ಕುಮಾರಸ್ವಾಮಿ ಟ್ವೀಟ್​

ಮತಗಳ್ಳತನಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದಿದ್ದಾರೆ.

ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಮಹಾಲಕ್ಷ್ಮಿಯು ಐಶ್ವರ್ಯ ಪ್ರಾಪ್ತಿಸಲಿ:  ನಿಖಿಲ್​ ಕುಮಾರಸ್ವಾಮಿ

ಜೆಡಿಎಸ್​​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಕೂಡ ಟ್ವೀಟ್​ ಮಾಡಿದ್ದು, ಶ್ರೀ ರಾಹುಲ್​ ಗಾಂಧಿ ಅವರೇ, ನಮ್ಮ ಕರ್ನಾಟಕಕ್ಕೆ ಸ್ವಾಗತ. ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು. ಕಳೆದ 3 ವರ್ಷದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 3 ಲಕ್ಷ ಕೋಟಿ ರೂ ಸಾಲ ಮಾಡಿದೆ. ರಾಜ್ಯದ GSDPಯಲ್ಲಿ ಸಾಲದ ಪ್ರಮಾಣ 24.91% ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಮತಗಳ್ಳತನದ ಅಂಕಿ-ಸಂಖ್ಯೆ ಬಿಡುಗಡೆ ಮಾಡಿದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ತಿರುಗೇಟು

ನಿಮ್ಮ ಗ್ಯಾರಂಟಿ ಯೋಜನೆಗೆ ಪ್ರತಿ ವರ್ಷ ಬೇಕಾಗಿರುವುದು 55 ಸಾವಿರ ಕೋಟಿ ರೂ, ಕಳೆದ 3 ವರ್ಷದಿಂದ ನಿಮ್ಮ ಸರ್ಕಾರ ಮಾಡುತ್ತಿರುವ ಸಾಲ ವರ್ಷಕ್ಕೆ 1 ಲಕ್ಷ ಕೋಟಿ ರೂ. ⁠ನಿಮ್ಮ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ತಾಯಿ ಮಹಾಲಕ್ಷ್ಮಿಯು ಹಣಕಾಸು ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಸರ್ವಐಶ್ವರ್ಯ ಪ್ರಾಪ್ತಿಸಲಿ ಎಂದು ಪ್ರಾರ್ಥನೆ ಮಾಡೋಣ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಪ್ರತಿಷ್ಠೆಗಾಗಿ ಈ ಪ್ರತಿಭಟನೆ: ಶಾಸಕ ಅಶ್ವತ್ಥ್ ನಾರಾಯಣ

ಕಾಂಗ್ರೆಸ್​ನಿಂದ ಬೃಹತ್ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಶಾಸಕ ಅಶ್ವತ್ಥ್ ನಾರಾಯಣ, ಈ ಪ್ರತಿಭಟನೆ ಶಕ್ತಿ ಪ್ರದರ್ಶನಕ್ಕಾಗಿ ಮಾಡುತ್ತಿರುವುದು ಅಷ್ಟೇ. ಫ್ರೀಡಂ ಪಾರ್ಕ್‌​ನಲ್ಲಿ 10 ಸಾವಿರ ಜನ ಮಾತ್ರ ಪ್ರತಿಭಟಿಸಬೇಕು. ಆದರೆ ಲಕ್ಷಕ್ಕೂ ಹೆಚ್ಚು ಜನ ಬರ್ತಾರೆ ಅಂತೆ. ರಾಹುಲ್ ಗಾಂಧಿ ಪ್ರತಿಷ್ಠೆಗಾಗಿ ಈ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ಮಾಡೋಕೆ ಯಾವ ಅರ್ಥವೂ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.