ಕರ್ನಾಟಕದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ

ಗೃಹ ಜ್ಯೋತಿ ಜಾರಿ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಅನಾವಶ್ಯಕವಾಗಿ ಲೋಡ್ ಶೆಡ್ಡಿಂಗ್ ಮಾಡುತ್ತದೆ ಎನ್ನುವ ಆರೋಒಇಗಳಿಗೆ ಸ್ವತಃ ಇಂಧನ ಸಚಿವ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ
ಕೆಜೆ ಜಾರ್ಜ್​​
Follow us
ರಮೇಶ್ ಬಿ. ಜವಳಗೇರಾ
|

Updated on:Jun 26, 2023 | 2:29 PM

ರಾಯಚೂರು: ಕರ್ನಾಟಕದಲ್ಲಿ 200 ಯುನಿಟ್ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ(Gruha Jyothi Scheme,) ಜಾರಿಗೆ ಬಂದಾಗಿನಿಂದ ಲೋಡ್​ ಶೆಡ್ಡಿಂಗ್ (load shedding ) ಶುರುವಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸ್ವತಃ ಇಂಧನ ಸಚಿವ ಕೆಜೆ ಜಾರ್ಚ್((KJ george) )ರಾಯಚೂರಿನಲ್ಲಿ ಇಂದು (ಜೂನ್ 26) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನನಗೆ ಗೊತ್ತಿರುವ ಹಾಗೆ ಯಾವುದೇ ಲೋಡ್​ ಶೆಡ್ಡಿಂಗ್ ಇಲ್ಲ. ಪರೀಕ್ಷೆ ಹಾಗೂ ಚುನಾವಣೆ ವೇಳೆ ಲೋಡ್ ಶೆಡ್ಡಿಂಗ್ ಮಾಡಿಲ್ಲ. ಈಗ ಮೈಂಟೇನೆನ್ಸ್​ಗಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಕರೆಂಟ್ ಶಾರ್ಟೇಜ್ ಆಗಿ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Electricity Bill ವಿದ್ಯುತ್​ ಬಿಲ್​ ದುಪ್ಪಟ್ಟು ಬರುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಕೆಜೆ ಜಾರ್ಜ್

ಇನ್ನು ಇದೇ ವೇಳೆ ಜೆಸ್ಕಾ ಇಂಜಿನಿಯರ್​ಗಳನ್ನು ತರಾಟೆಗೆ ತೆಗೆದುಕೊಂಡ ಕೆಜೆ ಚಾರ್ಜ್, ನಾನೇನು ಹೊಸದಾಗಿ ಮಂತ್ರಿಯಾಗಿಲ್ಲ. ಓವರ್ ಲೋಡ್ ಕಡಿಮೆ ಮಾಡಲು ಏನ್ ಮಾಡುತ್ತೀರಿ. ನಿಮ್ಮ ಕೈಲಾಗದೇ ಇದ್ದರೆ ಹೆಡ್ ಆಫೀಸ್ ಗೆ ಹೇಳಿ. ಅದನ್ನು ಬಿಟ್ಟು ಜನರಿಗೆ ತೊಂದರೆಕೊಡಬೇಡಿ ಎಂದರು.

ಇದೇ ವೇಳೆ ವಿದ್ಯುತ್ ದರ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿದ್ದು,ವಿದ್ಯುತ್ ದರ ಹೆಚ್ಚಿಸಿದ್ದು ಯಾರು? ನಾಲ್ಕು ವರ್ಷ ಯಾರು ಸರ್ಕಾರ ನಡೆಸಿದ್ದು? ಕರೆಂಟ್ ಬಿಲ್ ಕೇಂದ್ರ ಸರ್ಕಾರದ ಕಾಯ್ದೆಯಡಿ‌ ಹೆಚ್ಚಾಗಿದೆ. ನವೆಂಬರ್ ಅಲ್ಲಿ ಕರ್ನಾಟಕ ಇಲೆಕ್ಟ್ರಿಕ್ ಸಿಟಿ ರೆಗ್ಯುಲೇಟರಿ ಅಥಾರಿಟಿ ಕಮಿಷನ್ ಇದನ್ನ ತೆಗೆದುಕೊಂಡಿದ್ದಾರೆ. ಎಸ್ಕಾಂಗಳು,ಇಂಡಸ್ಟ್ರಿ ಅವರು ಸಂಪರ್ಕಿಸಿದ್ದಾರೆ. ಅವರು (ಬಿಜೆಪಿ) ಮಾರ್ಚ್ ನಲ್ಲಿ ತೀರ್ಮಾನಿಸಬೇಕಿತ್ತು.. ಚುನಾವಣೆ ಅಂತ ಮೇ 12 ಕ್ಕೆ ಆದೇಶಿಸಿದ್ದಾರೆ. ಆಗ ಯಾವ ಸರ್ಕಾರ ಇತ್ತು ಎಂದು ಪ್ರಶ್ನಿಸಿದರು.

ಅದಾನಿ ಅವರಿಗೆ ಬ್ಲೆಂಡಿಂಗ್ ಮಾಡಲು ಕೇಂದ್ರ ಸರ್ಕಾರ ಆದೇಶ ಕೊಟ್ಟಿದೆ. ಬ್ಲೆಂಡಿಂಗ್ ಮಾಡೋವಾಗ ಅಂತಾರಾಷ್ಟ್ರೀಯ ದರ ಜಾಸ್ತಿ ಇತ್ತು. ಬ್ಲೆಂಡ್ ಮಾಡುವಾಗ ಹೆಚ್ಚಾಯ್ತು. ಈ ಹೆಚ್ಚಳವನ್ನ ರೆಗ್ಯುಲೇಟರಿ ಅಥಾರಿಟಿ ಜಾಸ್ತಿ ಮಾಡಿದ್ದಾರೆ. ಇದು ನಮ್ಮ ಕಾಲದಲ್ಲಿ ಮಾಡಿರುವುದಲ್ಲ ಎಂದು ಕಿಡಿಕಾರಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:25 pm, Mon, 26 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ