ಕಾಂಗ್ರೆಸ್ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ

|

Updated on: May 25, 2023 | 2:14 PM

ಮಾಜಿ ಮುಖ್ಯಮಂತ್ರಿಗಳಾದ ಹೆಚ್​ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಕಾಂಗ್ರೆಸ್​ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ-ಕುಮಾರಸ್ವಾಮಿ
Follow us on

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಅಭೂತ ಪೂರ್ವ ಗೆಲುವು ಪಡೆದುಕೊಂಡು ಅಧಿಕಾರಕ್ಕೇರಿದೆ. ಆದ್ರೆ, ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್​ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದರೆ, ಮತ್ತೊಂದೆಡೆ ಹೆಚ್​ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ ಎಂದಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಈ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ದಿಲ್ಲಿಯಲ್ಲಿ ಸಚಿವ ಸಂಪುಟ ಸರ್ಕಸ್‌: ಇಂದು ಹೈಕಮಾಂಡ್ ಜೊತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈನಲ್ ಸಭೆ!

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಮೇ 25) ಜೆಡಿಎಸ್ ಆತ್ಮವಲೋಕನ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ. ಈ ಸರ್ಕಾರದ ಭವಿಷ್ಯ ಲೋಕಸಭಾ ಚುನಾವಣೆ ಮೇಲೆ ನಿಂತಿದೆ. ನಾನು ಭವಿಷ್ಯ ಹೇಳುತ್ತಿಲ್ಲ. ರಾಜಕೀಯ ಸ್ಥಿತಿಗತಿ ನೋಡಿ ಹೇಳುತ್ತಿದ್ದೇನೆ ಹೇಳಿದರು.

ನಂಬಿದವರೇ ನಮಗೆ ಮೋಸ ಮಾಡಿದ್ರು, ಬೆನ್ನಿಗೆ ಚೂರಿ ಹಾಕಿದರು. ಅದ್ದರಿಂದ ನಾನು ನಿಮಗೆ ಹಣ ಸಹಾಯ ಮಾಡಲು ಆಗಲಿಲ್ಲ. ಆದ್ದರಿಂದ ನಾನು ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ. ನಮ್ಮದು ಕುಟುಂಬ ರಾಜಕಾರಣ ಎಂದು ಟೀಕೆ ಮಾಡುತ್ತಾರೆ. ಹೀಗಾಗಿ ನೀವೆಲ್ಲರೂ ಮುಂದೆ ಬಂದು ಪಕ್ಷ ಸಂಘಟನೆ ಮಾಡಿ. ಸಿದ್ದರಾಮಯ್ಯ ಮೊಮ್ಮಗನನ್ನು ರಾಜಕೀಯಕ್ಕೆ ತರುತ್ತೇನೆ ಅಂತಾರೆ. ಅದು ಕುಟುಂಬ ರಾಜಕಾರಣ ಅಲ್ವಾ? ಯಾರೂ ಟೀಕೆ ಮಾಡಲ್ಲ ಎಂದರು.

ಬೊಮ್ಮಾಯಿ ಹೇಳಿದ್ದೇನು?

ಇನ್ನೊಂದೆಡೆ ಶಿಗ್ಗಾಂವಿಯಲ್ಲಿಂದು ಮಾಜಿ ಸಿಎಂ ಬೊಮ್ಮಾಯಿ ಮಾತನಡಿದ್ದು, ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ. ಈ ಸರ್ಕಾರ ಹೋಗುವಂತ ದಾರಿ ನೋಡಿದ್ರೆ ಬಹಳ ದಿನ‌ ನಡೆಯಲ್ಲ ಎಂದು ಭವಿಷ್ಯ ನುಡಿದರು.

ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಶದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್​​ನವರಿಗೆ ನಮ್ಮ ಕಾರ್ಯಕರ್ತರು ತಲೆಬಾಗುವ ಪ್ರಶ್ನೆ ಇಲ್ಲ. ನಾವು ನಮ್ಮ ಹಣದಿಂದ ರಾಜಕೀಯ ಮಾಡುತ್ತಿದ್ದೆವೆ. ನಾವು ತಂದ ಜನಪರ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ. ಎಲ್ಲೋ ಅಲ್ಪ ಸ್ವಲ್ಪ ವ್ಯತ್ಯಾಸ ಆಗಿದಕ್ಕೆ ನಾವು ಸೋತಿರಬಹುದು. ಆದ್ರೆ ಸ್ವಾಭಿಮಾನ ಕಳೆದುಕೊಂಡಿಲ್ಲ. ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಾಡುತ್ತೇವೆ. ಮತ್ತೆ ರಾಜ್ಯದಲ್ಲಿ 25 ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೆವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.