ಆಣೆ ಮಾಡಲು ಹೇಳಕ್ಕೆ ನೀನು ಯಾರು? ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಹೆಚ್ಡಿ ಕುಮಾರಸ್ವಾಮಿ
ಇವರ ಪಕ್ಷದವರೇ ಹೋಗಿ ಡಿ.ಜೆ.ಹಳ್ಳಿಯಲ್ಲಿ ಬೆಂಕಿ ಹಚ್ಚಿದ್ದರು. ಈಗ ಹುಬ್ಬಳ್ಳಿಯಲ್ಲೂ ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಇಂತಹವರು ದೇಶದಲ್ಲಿ ಜಾತ್ಯತೀತ ವಾದವನ್ನು ಉಳಿಸುತ್ತಾರಾ? ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ಹಾಸನ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ನಡುವೆ ರಾಜಕೀಯ ಟ್ವೀಟ್ ಸಮರ, ವಾಕ್ಸಮರ ನಡೆಯುತ್ತಲೆ ಇರುತ್ತವೆ. ಇಂದು (ಏಪ್ರಿಲ್ 20) ಕುಮಾರಸ್ವಾಮಿ ಹಾಸನದಲ್ಲಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಆಣೆ ಮಾಡಿ. ಹೆಚ್ ಡಿ ದೇವೇಗೌಡರ ಮೇಲೆ ಆಣೆ ಮಾಡಲು ಸಿದ್ಧರಿದ್ದೀರಾ? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದ ಸಿದ್ದರಾಮಯ್ಯಗೆ, ಸುಳ್ಳಿನ ರಾಮಯ್ಯ ನಾನು ಕೇಳಿದ 4 ಪ್ರಶ್ನೆಗಳಿಗೆ ಉತ್ತರಿಸಲಿ. ಇಡೀ ದೇಶದಲ್ಲಿ ಜನರು ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಸ್ವಲ್ಪ ಉಸಿರಾಡುತ್ತಿದೆ. ಇವರು ಯಾವ ಕೋಮುವಾದ ನಿಲ್ಲಿಸುತ್ತಾರೆ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಇವರ ಪಕ್ಷದವರೇ ಹೋಗಿ ಡಿ.ಜೆ.ಹಳ್ಳಿಯಲ್ಲಿ ಬೆಂಕಿ ಹಚ್ಚಿದ್ದರು. ಈಗ ಹುಬ್ಬಳ್ಳಿಯಲ್ಲೂ ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಇಂತಹವರು ದೇಶದಲ್ಲಿ ಜಾತ್ಯತೀತ ವಾದವನ್ನು ಉಳಿಸುತ್ತಾರಾ? ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ದೇವೇಗೌಡರ ಮೇಲೆ ಆಣೆ ಮಾಡುವುದಕ್ಕೆ ಹೇಳುತ್ತಾರೆ. ಇದನ್ನು ಹೇಳಲು ಸಿದ್ದರಾಮಯ್ಯ ನೀನು ಯಾವೂರು ದಾಸಯ್ಯ. ಸಿದ್ದರಾಮಯ್ಯ ಎಚ್ಚರಿಕೆಯಿಂದ ಮಾತನಾಡಬೇಕು. ಪದೇಪದೆ ಜೆಡಿಎಸ್ ಅನ್ನು ಬಿಜೆಪಿ ಬಿ ಟೀಂ ಎನ್ನುತ್ತೀರಿ. ರಾಜ್ಯದಲ್ಲಿ ಈಗ ಬಿಜೆಪಿ ಸರ್ಕಾರ ಬಂದಿದ್ದು ಯಾರಿಂದ. ಸಂಪುಟ ವಿಸ್ತರಣೆಯ ವೇಳೆ ಟವಲ್ ಕೊಡವಿ ಎದ್ದಿದ್ದರು. ಇಬ್ಬರು ಪಕ್ಷೇತರರನ್ನು ಮಾತ್ರಿ ಮಾಡಿಸಿ ಸರ್ಕಾರ ಕಿತ್ತರು. ಸಮ್ಮಿಶ್ರ ಸರ್ಕಾರ ಬೀಳುವುದಕ್ಕೆ ಇವರೇ ಮೂಲ ಕಾರಣ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇನ್ನು ಇದೇ ವೇಳೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಈ ಬಗ್ಗೆ ಕಾಂಗ್ರೆಸ್‌ನವರು ಪದೇ ಪದೆ ಮಾತಾಡುತ್ತಿದ್ದಾರೆ. ಇವರು ಕಲ್ಲಪ್ಪ ಹಂಡಿಭಾಗ್ ಬಗ್ಗೆ ಏಕೆ ಮಾತನಾಡಲ್ಲ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ ಕಲ್ಲಪ್ಪ ಮೃತಪಟ್ಟಿದ್ದ. ಕಲ್ಲಪ್ಪ ಹಂಡಿಭಾಗ್ ಪ್ರಮಾಣಿಕ ಅಧಿಕಾರಿಯಾಗಿದ್ದರು. ಈ ಪ್ರಕರಣದಲ್ಲಿ ಇವರು ಯಾರಿಗಾದರೂ ಶಿಕ್ಷೆ ಕೊಟ್ಟರಾ? ಎಂದು ಕುಮಾರಸ್ವಾಮಿ ಕೇಳಿದರು.
ಸಿದ್ದರಾಮಯ್ಯ ಯೋಗ್ಯತೆಗೆ 50-60 ಸೀಟ್ ಗೆಲ್ಲುತ್ತಾರಷ್ಟೇ; ಕುಮಾರಸ್ವಾಮಿ: 150 ಸ್ಥಾನ ಗೆಲ್ಲುವುದಾಗಿ ಭಾಷಣ ಮಾಡ್ತಾ ಹೋಗ್ತಿದ್ದಾರೆ. ಸಿದ್ದರಾಮಯ್ಯ ಯೋಗ್ಯತೆಗೆ 50-60 ಸೀಟ್ ಗೆಲ್ಲುತ್ತಾರಷ್ಟೇ. ಮುಂದಿನ ಚುನಾವಣೆಯಲ್ಲಿ ಜನರು ನಿಮ್ಮನ್ನು ತಿರಸ್ಕರಿಸುತ್ತಾರೆ. ನಾವು ಯಾರ ಜೊತೆಯೂ ಮೈತ್ರಿ ಮಾಡಿಕೊಳ್ಳಲ್ಲ ಎಂದರು.
ಯಾವನ್ರೀ ವಚನಭ್ರಷ್ಟ?- ಕುಮಾರಸ್ವಾಮಿ ಗರಂ: ವಚನಭ್ರಷ್ಟ ಎಂದು ಹೇಳ್ತಾರೆ, ಯಾವನ್ರೀ ವಚನಭ್ರಷ್ಟ? ಪದೇಪದೆ ವಚನಭ್ರಷ್ಟ ಎಂದು ಹೇಳುವ ಅಗತ್ಯವಿಲ್ಲ. ತಿಂದ ಮನೆಗೆ ದೋಖಾ ಮಾಡಿದವ್ರು ನನ್ನ ಬಗ್ಗೆ ಮಾತಾಡ್ತಾರಾ? ಜೆಡಿಎಸ್ನಲ್ಲಿ ಬೆಳೆದು ಈ ಪಕ್ಷಕ್ಕೆ ಚಾಕು ಹಾಕಿ ಹೋದಂತಹ ವ್ಯಕ್ತಿ. ದಿನಾ ಬೆಳಗಾದರೆ ಜನತಾದಳ ಮುಗಿಸಬೇಕು ಎಂದು ಹೇಳ್ತಾರೆ. ಮೊನ್ನೆ ನೀವೇ ಕಾಂಗ್ರೆಸ್ ಕಿತ್ತೊಗೆಯಬೇಕು ಎಂದು ಹೇಳಿದ್ದೀರಿ. ಮನಸ್ಸಿನಲ್ಲಿರುವುದನ್ನು ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್ ಮುಗಿಸುತ್ತೇನೆಂದು ಹೇಳೋದು ನಿಮಗಿರುವ ನಂಜು. ಮೊದಲು ಅದನ್ನು ಸರಿಮಾಡಿಕೊಳ್ಳಿ ಅಂತ ಕುಮಾರಸ್ವಾಮಿ ಗರಂ ಆಗಿದ್ದಾರೆ.
ಇದನ್ನೂ ಓದಿ
‘ಡಾನ್ಸಿಂಗ್ ಚಾಂಪಿಯನ್’ ಶೋ ನಡುವೆ ಮೇಘನಾ ರಾಜ್ ಫೋಟೋಶೂಟ್; ಇಲ್ಲಿವೆ ಚೆಂದದ ಫೋಟೋಗಳು
Published On - 10:51 am, Wed, 20 April 22