ರಾಜಕೀಯ ಊಸರವಳ್ಳಿಗೆ ‘ಜೆಡಿಎಸ್ ಜ್ವರ’ ಬಂದಿದೆ; ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಹೆಚ್​ಡಿ ಕುಮಾರಸ್ವಾಮಿ

ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಎಂದು ಪ್ರಶ್ನೆ ಮಾಡಿರುವ ಕುಮಾರಸ್ವಾಮಿ, ಇಂಥಾ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿರುವ ನೀವು. ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹೇಳುತ್ತಿದ್ದೀರಿ.

ರಾಜಕೀಯ ಊಸರವಳ್ಳಿಗೆ ‘ಜೆಡಿಎಸ್ ಜ್ವರ’ ಬಂದಿದೆ; ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಹೆಚ್​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಮತ್ತು ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: sandhya thejappa

Updated on:Apr 18, 2022 | 9:48 AM

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ‘ಜೆಡಿಎಸ್ ಜ್ವರ’ ಬಂದುಬಿಟ್ಟಿದೆ. ಚುನಾವಣೆಗೆ ಮುನ್ನವೇ ಜೆಡಿಎಸ್ ಜ್ವರ ಬಂದಿದೆ. ‘ಸತ್ಯಭಕ್ಷ’ ನಾಯಕನ ಆಚಾರಹೀನ ನಾಲಗೆ, ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡುವುದಕ್ಕೆ ಆಗಿಲ್ಲ. ಆದರೆ ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ ಎಂದು ಟ್ವೀಟ್ ಮಾಡಿದ್ದಾರೆ.

ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ ಸುಳ್ಳುರಾಮಯ್ಯ? ಎಂದು ಪ್ರಶ್ನೆ ಮಾಡಿರುವ ಕುಮಾರಸ್ವಾಮಿ, ಇಂಥಾ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿರುವ ನೀವು. ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹೇಳುತ್ತಿದ್ದೀರಿ. ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ ಎಂದು ಟ್ವೀಟ್​ನಲ್ಲಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ. ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್​ಮೆಂಟ್ ವಾದಿ. ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? ಎಂದು ಕೇಳಿರುವ ಹೆಚ್​ಡಿಕೆ, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ? ಎಂದಿದ್ದಾರೆ.

ಸಿದ್ದರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆ ಮೇಲೆ ಕಾಂಗ್ರೆಸ್ ತೇಲುತ್ತಿದೆ. ಇಂಥಾ ಸುಳ್ಳುಗಳಿಂದ ಮುಳುಗುತ್ತೇವೆಂಬ ಅರಿವು ಕಾಂಗ್ರೆಸ್‌ಗಿಲ್ಲ. ಬಿಜೆಪಿ ಬಾಲಂಗೋಚಿ ಸಿದ್ದಹಸ್ತನ ಅಡ್ಜಸ್ಟ್‌ಮೆಂಟ್ ರಾಜಕಾರಣ, ಹಣಕ್ಕೆ ಮಾರಿಕೊಂಡ ಆ ಸುಪಾರಿ ಆಟಗಾರ ಕೈಕಚ್ಚುವ ಅರಿವಿಲ್ಲ. ಮುಳುಗುವ ಹಡಗಿನ ಕ್ಯಾಪ್ಟನ್‌ಗೆ ಇದರ ಬಗ್ಗೆ ಅರಿವೇ ಇಲ್ಲ. ಹೆಚ್.ಡಿ.ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ಪರ್ಸೆಂಟೇಜ್ ವ್ಯವಹಾರದ ಪಿತಾಮಹ.  ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾಗಿದ್ದೀರಿ. ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ. ‘ಪರ್ಸೆಂಟೇಜ್ ಪಲ್ಲಕ್ಕಿ’ಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ, ನಿಮ್ಮ ಕತ್ತಲೆ ಮುಖವಾಡ ಇನ್ನೇನು ಕಳಚಿಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಸನಿಹದಲ್ಲಿದೆ. ವಿನಾಶಕಾಲೇ ವಿಪರೀತ ಸುಳ್ಳು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಮುಂದೂಡಿಕೆ

ಆರ್ಥಿಕ ಬಿಕ್ಕಟ್ಟಿನತ್ತ ಚೀನಾ: ಕೊವಿಡ್​ನಿಂದ ಮತ್ತೆ ಸರಣಿ ಸಾವು, ತತ್ತರಿಸಿವೆ ರಿಯಲ್ ಎಸ್ಟೇಟ್, ಆಟೊ ವಲಯ

Published On - 9:04 am, Mon, 18 April 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ