ಸ್ವಯಂಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ; ಹೆಚ್​ಡಿ ಕುಮಾರಸ್ವಾಮಿ ಸರಣಿ ಟ್ವೀಟ್

ಸ್ವಯಂಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ; ಹೆಚ್​ಡಿ ಕುಮಾರಸ್ವಾಮಿ ಸರಣಿ ಟ್ವೀಟ್
ಸಿದ್ದರಾಮಯ್ಯ ಮತ್ತು ಹೆಚ್​ಡಿ ಕುಮಾರಸ್ವಾಮಿ

ಸುಖಾಸುಮ್ಮನೆ ಅವರ ಬಗ್ಗೆ ಮಾತಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋಗಿ ಪಕ್ಷಕ್ಕೆ ಸೇರಿಸಿಕೊಳ್ತಾರೆ. ಅಂತಹವರು ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

TV9kannada Web Team

| Edited By: sandhya thejappa

Jan 23, 2022 | 11:03 AM

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್ (Tweet) ಮಾಡಿದ್ದಾರೆ. ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಸ್ವಯಂಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ. ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡಿದ್ದಾರೆ. ಹೀಗಾಗಿ ನಾನು ಅವರಿಗೆ ಉತ್ತರವನ್ನು ನೀಡಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆ ಇರಬೇಕು. ಆ ಯೋಗ್ಯತೆ ಸಿದ್ದರಾಮಯ್ಯಗೆ ಇಲ್ಲ ಅಂತ ಗುಡುಗಿದ್ದಾರೆ.

ಸುಖಾಸುಮ್ಮನೆ ಅವರ ಬಗ್ಗೆ ಮಾತಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋಗಿ ಪಕ್ಷಕ್ಕೆ ಸೇರಿಸಿಕೊಳ್ತಾರೆ. ಅಂತಹವರು ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು ಎಂದು ಪ್ರಶ್ನೆ ಮಾಡಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ? ಅಂತ ಸಿದ್ದರಾಮಯ್ಯಗೆ ಕೇಳಿದ್ದಾರೆ.

ಜಿಲ್ಲೆಯಿಂದ ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕೀಯ. ಲಂಗು ಲಗಾಮಿಲ್ಲದೆ ನಾಲಗೆ ಹರಿಬಿಡುವವರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ ಅಂತ ಟ್ವೀಟ್ ಮೂಲಕ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ? ಅವರಿಂದ ನಾನು ಪಾಠ ಕಲಿಯಬೇಕಾ. ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅಂತಾರೆ, ನನ್ನ ಜಪ ಮಾಡುತ್ತಾರೆ. ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ವಿಷ ಕಾರುವುದು ಸುಳ್ಳಾ? ಸಿದ್ದರಾಮಯ್ಯ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ ಅಂತ ಕುಮಾರಸ್ವಾಮಿ ಹೇಳಿದರು.

ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ ಅಂತ ಸಿದ್ದರಾಮಯ್ಯ ಹೇಳ್ತಾರೆ. ಇದು ಭ್ರಮೆಯ ಪರಮಾವಧಿ, ಹತಾಶೆ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಅವರ ಹೇಳಿಕೆ ಸಾಕ್ಷಿ. ಚುನಾವಣೆಯಲ್ಲಿ ಸೋತಿದ್ದಕ್ಕೆ ನಾವು ಯಾರೂ ಕಣ್ಣೀರಾಕಿಲ್ಲ. ಆದರೆ ಸಿದ್ದಹಸ್ತರ ಕಣ್ಣೀರ ಕೋಡಿಯನ್ನ ದೇವೇಗೌಡರು ಕಂಡಿದ್ದರು. ಕಮಿಷನ್ ವ್ಯವಹಾರದಲ್ಲಿ ತಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ. ಆದರೆ ಅರ್ಕಾವತಿ ಆರ್ತನಾದಕ್ಕೆ ಕಾರಣ ಯಾರು? ಅಂತ ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ

ಹರ್ಭಜನ್ ದಂಪತಿಗೆ ಕೊವಿಡ್; ಎರಡು ವರ್ಷದಿಂದ ವೈರಸ್ ಕೈಗೆ ಸಿಗದೇ ಓಡಾಡಿಕೊಂಡಿದ್ದೆವು ಎಂದು ತಮಾಷೆ ಮಾಡಿದ ಗೀತಾ

ನೈಟ್ ಕರ್ಫ್ಯೂ ಸಯಮ ಬದಲಾವಣೆಗೆ ಸಿಎಂ ಬೊಮ್ಮಾಯಿಗೆ ಮನವಿ; ಶೀಘ್ರದಲ್ಲೇ 50:50 ನಿಮಯ ರದ್ದು ಸಾಧ್ಯತೆ

Follow us on

Related Stories

Most Read Stories

Click on your DTH Provider to Add TV9 Kannada