ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಂಪುಟ ದರ್ಜೆಯ ಸ್ಥಾನಮಾನ: ರಾಜ್ಯ ಸರ್ಕಾರದಿಂದ ಅಧಿಸೂಚನೆ

| Updated By: ganapathi bhat

Updated on: Aug 07, 2021 | 5:22 PM

ಬಸವರಾಜ ಬೊಮ್ಮಾಯಿ‌ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಂಪುಟ ದರ್ಜೆಯ ಸ್ಥಾನಮಾನ: ರಾಜ್ಯ ಸರ್ಕಾರದಿಂದ ಅಧಿಸೂಚನೆ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
Follow us on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲಾ ಸೌಲಭ್ಯ ನೀಡಲಾಗುತ್ತದೆ. ಬಸವರಾಜ ಬೊಮ್ಮಾಯಿ‌ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಬಿಎಸ್‌ವೈಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ, ಬಸವರಾಜ ಬೊಮ್ಮಾಯಿ‌ ಮುಖ್ಯಮಂತ್ರಿ ಆಗಿ ಇರುವವರೆಗೆ ಬಿ.ಎಸ್. ಯಡಿಯೂರಪ್ಪಗೆ ಎಲ್ಲಾ ಸೌಲಭ್ಯ ಇರಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು, ಇಂದು (ಆಗಸ್ಟ್ 7) ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಈ ಬಗ್ಗೆ ಅಧಿಕೃತ ಪಟ್ಟಿ ಹೊರಬಿದ್ದಿದ್ದು, ಯಾರು ಯಾರಿಗೆ ಯಾವ ಖಾತೆ ಎಂಬ ವಿವರ ಲಭ್ಯವಾಗಿದೆ. ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನಲ್ಲಿಯೇ ಉಳಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಸಚಿವ ಸ್ಥಾನ ಅಲಂಕರಿಸಿದ ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಲಭಿಸಿದೆ. ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಬಹುತೇಕರು ತಮ್ಮ ತಮ್ಮ ಖಾತೆಯನ್ನೇ ಉಳಿಸಿಕೊಂಡಿದ್ದಾರೆ.

ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಆರ್.ಅಶೋಕ್ – ಕಂದಾಯ, ಬಿ.ಶ್ರೀರಾಮುಲು – ಸಾರಿಗೆ, ಪರಿಶಿಷ್ಠ ಪಂಗಡ ಅಭಿವೃದ್ದಿ, ವಿ. ಸೋಮಣ್ಣ – ವಸತಿ & ಮೂಲಭೂತ ಸೌಕರ್ಯ ಅಭಿವೃದ್ದಿ, ಬಿ.ಸಿ.ಪಾಟೀಲ್ – ಕೃಷಿ, ಎಸ್.ಟಿ.ಸೋಮಶೇಖರ್ – ಸಹಕಾರ, ಡಾ.ಕೆ.ಸುಧಾಕರ್ – ಆರೋಗ್ಯ, ವೈದ್ಯಕೀಯ ಶಿಕ್ಷಣ, ಕೆ.ಗೋಪಾಲಯ್ಯ – ಅಬಕಾರಿ, ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್, ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ, ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ವಿ.ಸುನಿಲ್​ಕುಮಾರ್ – ಇಂಧನ, ಉಮೇಶ್ ಕತ್ತಿ – ಅರಣ್ಯ, ಆಹಾರ & ನಾಗರೀಕ ಸರಬರಾಜು, ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ, ಆರಗ ಜ್ಞಾನೇಂದ್ರ – ಗೃಹಖಾತೆ, ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ, ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ, ಪ್ರಭು ಚೌಹಾಣ್ – ಪಶುಸಂಗೋಪನೆ, ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ, ಶಿವರಾಮ್ ಹೆಬ್ಬಾರ್ – ಕಾರ್ಮಿಕ, ಎಸ್.ಅಂಗಾರ – ಮೀನುಗಾರಿಕೆ, ಬಂದರು, ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ, ಕೋಟಾ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ & ಹಿಂದುಳಿದ ವರ್ಗಗಳ ಕಲ್ಯಾಣ, ಕೆ.ಸಿ.ನಾರಾಯಣಗೌಡ – ಕ್ರೀಡೆ, ಮುನಿರತ್ನ – ತೋಟಗಾರಿಕೆ, ಭೈರತಿ ಬಸವರಾಜ್ – ನಗರಾಭಿವೃದ್ಧಿ, ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ, ಸಿ.ಸಿ.ಪಾಟೀಲ್ – ಲೋಕೋಪಯೋಗಿ, ಶಂಕರ ಪಾಟೀಲ್ ಮುನೇನಕೊಪ್ಪ – ಜವಳಿ ಖಾತೆ ಹಂಚಿಕೆಯಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ ಟೈರ್ ಪಂಕ್ಚರ್

ನನಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ನೋವಿಲ್ಲ, ಸಚಿವ ಸ್ಥಾನಕ್ಕೆ ಯಡಿಯೂರಪ್ಪ ಸಹ ಒತ್ತಡ ಹೇರಿಲ್ಲ -ಬಿ ವೈ ವಿಜಯೇಂದ್ರ

(Ex CM of Karnataka BS Yediyurappa to get Cabinet Minister Treatment Karnataka Govt Circular)

Published On - 4:56 pm, Sat, 7 August 21