100 ವರ್ಷದ ಇತಿಹಾಸ ಹೊಂದಿರುವ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ‌ ಸಚಿವ ಆನಂದ್ ಸಿಂಗ್ ರಾಜೀನಾಮೆ

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದಿಂದ ಪುತ್ರನನ್ನು ಕಣಕ್ಕಿಳಿಸಿ ಸೋಲುಕಂಡಿರುವ ಮಾಜಿ ಸಚಿವ ಆನಂದ್ ಸಿಂಗ್ ಇದೀಗ ಮತ್ತೊಂದು ಮಹತ್ವದ ಹುದ್ದೆಗೆ ಗುಡ್​ಬೈ ಹೇಳಿದ್ದಾರೆ.

100 ವರ್ಷದ ಇತಿಹಾಸ ಹೊಂದಿರುವ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ‌ ಸಚಿವ  ಆನಂದ್ ಸಿಂಗ್ ರಾಜೀನಾಮೆ
ಆನಂದ್ ಸಿಂಗ್ ರಾಜೀನಾಮೆ
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ರಮೇಶ್ ಬಿ. ಜವಳಗೇರಾ

Updated on: Jul 15, 2023 | 1:55 PM

ವಿಜಯನಗರ, (ಜುಲೈ 15): ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್(BDCC Bank) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ (Anand Singh) ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ಜುಲೈ 1ರಿಂದಲೇ ಅನ್ವಯ ಆಗುವಂತೆ ಆನಂದ್ ಸಿಂಗ್ ಇಂದು (ಜುಲೈ 15) ರಾಜೀನಾಮೆ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದ ರೈತರ ಹಿತದೃಷ್ಟಿಯಿಂದ ಸ್ಥಾಪಿಸಲಾಗಿದ್ದ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ (ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್) ​ 100 ವರ್ಷದ ಇತಿಹಾಸ ಹೊಂದಿದೆ. ಇದೀಗ ಏಕಾಏಕಿ ಮಾಜಿ ಸಚಿವ ಆನಂದ್ ಸಿಂಗ್ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಆನಂದ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆದ್ರೆ, ವಿಜಯನಗರ ಜಿಲ್ಲೆಯಾಗಿ ರಚನೆಯಾದ ಮೇಲೆ ಇದೇ ಮೊದಲ ಬಾರಿಗೆ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಆನಂದ್ ಸಿಂಗ್ ತಮ್ಮ ಪುತ್ರ ಸಿದ್ಧಾರ್ಥ್ ಸಿಂಗ್​ಗೆ ಬಿಜೆಪಿ ಟಿಕೆಟ್ ಕೊಡಿಸುವಲ್ಲಿ ಸಹ ಸಫಲರಾಗಿದ್ದರು. ಆದ್ರೆ, ಸಿದ್ಧಾರ್ಥ್​​​ ಸೋಲು ಕಂಡಿದ್ದಾರೆ. ಇದರಿಂದ ಆನಂದ್ ಸಿಂಗ್​ಗೆ ತೀವ್ರ ಮುಖಭಂಗವಾದಂತಾಗಿದೆ. ಇದರ ಬೆನ್ನಲ್ಲೇ ಇದೀಗ ಆನಂದ್ ಸಿಂಗ ಪ್ರತಿಷ್ಠಿತ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನು ಆನಂದ್ ಸಿಂಗ್ ಅವರು ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಆದ್ರೆ, ಈ ಬಗ್ಗೆ ಆನಂದ್ ಸಿಂಗ್ ಯಾವುದೇ ಮಾತುಗಳನ್ನಾಡಿಲ್ಲ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ