AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರದ ವರ್ಗಾವಣೆ ಸಚಿವ: ಪ್ರತಾಪ್​ ಸಿಂಹ

ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ಗಂಭೀರ ಆರೋಪ ಮಾಡಿದ್ದಾರೆ. ಇದರ ಜೊತೆಗೆ ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಆರೋಪಿಸಿರುವ ಅವರು, ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರದ ವರ್ಗಾವಣೆ ಸಚಿವ: ಪ್ರತಾಪ್​ ಸಿಂಹ
ಪ್ರತಾಪ್​ ಸಿಂಹ
ರಾಮ್​, ಮೈಸೂರು
| Edited By: |

Updated on: Oct 10, 2025 | 11:54 AM

Share

ಮೈಸೂರು, ಅಕ್ಟೋಬರ್​ 10: ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್​ ಸಿ ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ (Pratap Simha) ಗಂಭಿರ ಆರೋಪ ಮಾಡಿದ್ದು, ಮೈಸೂರು ಪೊಲೀಸರಿಗೆ ಸಿಎಂ ಮಗನ ಕಾಟ ಹೆಚ್ಚಾಗಿದೆ ಎಂದಿದ್ದಾರೆ. ಡಾ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ. ಯಾವುದೇ ವರ್ಗಾವಣೆ ಆಗಬೇಕಾದರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು. ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಪ್ರತಾಪ್​ ಸಿಂಹ ಆರೋಪಿಸಿದ್ದಾರೆ.

ಆರೋಪಿ ಯಾವ ಜಾತಿಯವನು ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಅವ್ಯಾಹತವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಅದರ ಮೇಲೆ ದಾಳಿ ಮಾಡಲೂ ಪೊಲೀಸರು ಹೆದರುತ್ತಿದ್ದಾರೆ. ದಾಳಿ ಮಾಡಿದರೆ ಎಲ್ಲಿ ಯಾವ ಸಚಿವ, ಶಾಸಕನ ಫೋನ್ ಬರುತ್ತದೆಯೋ ಎಂಬ ಭಯದಲ್ಲಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಖಾಲಿಯಾದರೆ ತನಗೆ ಸಿಗುತ್ತೆಂಬ ಆಸೆಯಲ್ಲಿ ಗೃಹ ಸಚಿವರು ತಮ್ಮ ಇಲಾಖೆಯನ್ನೇ ಮರೆತಿದ್ದಾರೆ. ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ. ಶಾಸಕರಿಗೆ ವಸೂಲಿ ನಿಲ್ಲಿಸಲು ಹೇಳಿ ಎಂದು ಪ್ರತಾಪ್​ ಸಿಂಹ ಕಿಡಿ ಕಾರಿದ್ದಾರೆ.

ಪ್ರತಾಪ್​ ಸಿಂಹ ವಾಗ್ದಾಳಿ

‘ಸಿಎಂ, ಡಿಸಿಎಂ ಮೌನವೇಕೆ?’

ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಉಕ್ರೇನ್-ರಷ್ಯಾ ಯುದ್ಧದ ಬಗ್ಗೆ ಕಾಮೆಂಟ್ ಮಾಡುವ, ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುವ ಕಾಂಗ್ರೆಸ್​ ನ ಯಾರೊಬ್ಬರೂ ಬಾಲಕಿ ಕೊಲೆ ವಿಚಾರವಾಗಿ ಮಾತನಾಡುತ್ತಿಲ್ಲ. ಪ್ರಿಯಾಂಕ್​, ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರಾ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಏಕೆ ಈ ಬಗ್ಗೆ ಮಾತಾಡ್ತಿಲ್ಲ? ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಾ ಎಂದು ಮಾಜಿ ಸಂಸದ ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ