ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

Lok Sabha Election 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ, ಬ್ರಾಹ್ಮಣ ಸಮಾಜದ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಕುರುಬ ಸಮಾಜದ ವಿನೋದ್ ಅಸೂಟಿ ಕಣದಲ್ಲಿದ್ದಾರೆ.

ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ
ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Apr 08, 2024 | 12:58 PM

ಬೆಂಗಳೂರು, ಏಪ್ರಿಲ್​ 08: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ (Fakir Dingaleshwar Swamiji) ಹೇಳಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಂಬಂಧ ದಿಂಗಾಲೇಶ್ವರ ಸ್ವಾಮೀಜಿ ಈ ಹಿಂದೆ ಸರಣಿ ಸಭೆಗಳನ್ನು ನಡೆಸಿ ಭಕ್ತರ ಮತ್ತು ಹಲವು ಮಠಾದೀಶರ ಅಭಿಪ್ರಾಯ ಪಡೆದುಕೊಂಡಿದ್ದರು. ಇಂದು (ಏ.08) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆಂದು ಘೋಷಿಸಿದ್ದರು.

ಭಕ್ತರ ಒತ್ತಡ

ಲಿಂಗಾಯತ ಮತಗಳು ಅಧಿಕವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ, ಬ್ರಾಹ್ಮಣ ಸಮಾಜದ ಪ್ರಲ್ಹಾದ್ ಜೋಶಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ಕುರುಬ ಸಮಾಜದ ವಿನೋದ್ ಅಸೂಟಿ ಕಣದಲ್ಲಿದ್ದಾರೆ. ಈ ನಡುವೆ ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ವೀರಶೈವ ಲಿಂಗಾಯತ ಸಮುದಾಯದ ಶಿರಹಟ್ಟಿ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಲಿಂಗಾಯತ ಸಮುದಾಯದ ಮುಖಂಡರು ಒತ್ತಡ ಹಾಕಿದ್ದರು. ದಿಂಗಾಲೇಶ್ವರ ಸ್ವಾಮೀಜಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇದನ್ನೂ ಓದಿ: ಧಾರವಾಡದಿಂದ ಲಿಂಗಾಯತ ಸ್ವಾಮೀಜಿ ಸ್ಪರ್ಧೆ: ಯಾರು ಈ ದಿಂಗಾಲೇಶ್ವರ ಶ್ರೀ? ರಾಜಕೀಯಕ್ಕೆ ಧುಮುಕಲು ಕಾರಣ ಇಲ್ಲಿದೆ

ಧಾರವಾಡದಿಂದಲೇ ಸ್ಪರ್ಧೆ ಏಕೆ

ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿದ್ದು, ಧಾರವಾಡ ಸಂಸದ ಅಭ್ಯರ್ಥಿಯನ್ನು ಬದಲಾವಣೆ ಮಾಡುವಂತೆ ಕರೆ ನೀಡಿದ್ದರು. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಗಾಗಿ ನಾನು ಹೋರಾಟ ನಡೆಸುತ್ತಿದ್ದೆನೆ. ಅವರ ಆಡಳಿತ ವಿನಾಶಕಾರಿಯಾಗಿದೆ. ಮತ್ತು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಮತ್ತು ಲಿಂಗಾಯತ ಸಮುದಾಯದ ಹಿರಿಯ ನಾಯಕ ಜಗದೀಶ್​ ಶೆಟ್ಟರ್​ ಅವರಿಗೆ ನ್ಯಾಯುತವಾಗಿ ನಡೆಸಿಕೊಳ್ಳಲಾಗಿದೆ ಎಂದು ಪಕೀರ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸಿದ್ದರು.

ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ. ಜಗದೀಶ್​ ಶೆಟ್ಟರ್​ ಅವರಿಗೆ ಟಿಕೆಟ್​ ತಪ್ಪಿಸಲಾಗಿದೆ. ಬಿಎಸ್​ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅರ್ಧಕ್ಕೆ ಕೆಳಗೆ ಇಳಿಸಲಾಗಿದೆ. ಇದು ಲಿಂಗಾಯತ ಸಮುದಾಯದವರಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದ್ದರು. ಈ ಎಲ್ಲ ಕಾರಣಗಳಿಂದ ಶಿರಹಟ್ಟಿಯ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್​ ಜೋಶಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:08 pm, Mon, 8 April 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್