ಪೆನ್​ಡ್ರೈವ್ ಪ್ರದರ್ಶನ ವಿಚಾರ; ​ಮಾಜಿ ಸಿಎ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 28, 2023 | 2:46 PM

ಪೆನ್​ಡ್ರೈವ್ ತೋರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ನೀಡಲಾಗಿತ್ತು. ಆದರೆ, ಇದ್ಯಾವುದಕ್ಕೂ ಉತ್ತರ ಬಂದಿಲ್ಲ. ಪೆನ್ ಡ್ರೈವ್​ನ್ನ ಸ್ಪೀಕರ್​ಗೆ ಅಥವಾ ಪೊಲೀಸರಿಗೆ ಆಗಲಿ ಇನ್ನೂ ನೀಡಿಲ್ಲ. ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದವರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದು ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ.

ಪೆನ್​ಡ್ರೈವ್ ಪ್ರದರ್ಶನ ವಿಚಾರ; ​ಮಾಜಿ ಸಿಎ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು
ಹೆಚ್​ಡಿ ಕುಮಾರಸ್ವಾಮಿ
Follow us on

ಬೆಂಗಳೂರು, ಅ.28: ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಆಡಳಿತ ಚುಕ್ಕಾಣಿ ಹಿಡಿದಿದೆ. ಇದರ ಬೆನ್ನಲ್ಲೇ  ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಹೊಸ ಬಾಂಬ್​ ಸಿಡಿಸಿದ್ದರು. ಹೌದು, ಕಾಂಗ್ರೆಸ್​ ಸರ್ಕಾರ ಹಲವು ಇಲಾಖೆಗಳಲ್ಲಿ ಕಮಿಷನ್ ಪಡೆಯುತ್ತಿರುವ ಬಗ್ಗೆ ಆರೋಪಿಸಿ, ಈ ಕುರಿತು ಪೆನ್​ಡ್ರೈವ್(pendrive)​ ನನ್ನ ಬಳಿ ಇದೆ ಎಂದಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಮಾಹಿತಿಯನ್ನು ನೀಡದ ಹಿನ್ನಲೆ ವಕೀಲ ಅಮೃತೇಶ್ ಎಂಬುವವರು ಹೆಚ್​ಡಿಕೆ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಲೀಗಲ್ ನೋಟಿಸ್ ನೀಡಿದ್ರೂ ಉತ್ತರ ಇಲ್ಲ

ಹೌದು, ಪೆನ್​ಡ್ರೈವ್ ತೋರಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ನೀಡಲಾಗಿತ್ತು. ಆದರೆ, ಇದ್ಯಾವುದಕ್ಕೂ ಉತ್ತರ ಬಂದಿಲ್ಲ. ಪೆನ್ ಡ್ರೈವ್​ನ್ನ ಸ್ಪೀಕರ್​ಗೆ ಅಥವಾ ಪೊಲೀಸರಿಗೆ ಆಗಲಿ ಇನ್ನೂ ನೀಡಿಲ್ಲ. ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದವರು. ಈ ರೀತಿ ಮಾಡಿರುವುದು ಸರಿಯಲ್ಲ. ಈ ಹಿನ್ನಲೆ ಕುಮಾರಸ್ವಾಮಿ ವಿರುದ್ದ ಬ್ಲಾಕ್ ಮೇಲ್, ಬೆದರಿಕೆ, ಅಪರಾಧಿಕ ಸಂಚು ಹಾಗೂ ಎಕ್ಸ್ ಟಾರ್ಷನ್ ಆರೋಪದಡಿ ಕ್ರಮ ತೆಗೆದುಕೊಂಡು, ಜೊತೆಗೆ ಕುಮಾರಸ್ವಾಮಿಯವರ ಬಳಿ ಇರುವ ಪೆನ್ ಡ್ರೈವ್ ಸೀಜ್ ಮಾಡಬೇಕು ಮತ್ತು ಅವರ ವಿರುದ್ಧ ಕ್ರಮತೆಗದುಕೊಳ್ಳುವಂತೆ ವಕೀಲ ಅಮೃತೇಶ್ ಅವರಿಂದ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ನಿಮ್ಮ 18 ನಿಮಿಷದ ವಿಡಿಯೋ ಇದರಲ್ಲಿದೆ: ಪೆನ್​ಡ್ರೈವ್​ ತೋರಿಸಿದ್ದ ಕುಮಾರಸ್ವಾಮಿಗೆ ಎಂ ಲಕ್ಷ್ಮಣ ತಿರುಗೇಟು

ಇನ್ನು ಈ  ಪೆನ್​ಡ್ರೈವ್  ಆರೋಪ ಮಾಡಿದ ಬಳಿಕ ಹೆಚ್ ಡಿ ಕುಮಾರಸ್ವಾಮಿಯವರ ಕುಟುಂಬದೊಂದಿಗೆ ಯುರೋಪ್ ಪ್ರವಾಸಕ್ಕೆ ಹೋಗಿ ಬಳಿಕ ರಾಜ್ಯ ರಾಜಧಾನಿಗೆ ಹಿಂತಿರುಗಿದ್ದರು. ಈ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ, ಪತ್ರಕರ್ತರೊಬ್ಬರು ಸರ್ ಎಲ್ಲಿ ಪೆನ್ ಡ್ರೈವ್ ಎಂದು ಕೇಳಿದಾಗ ‘ಅಯ್ಯೋ ರಾಮ!’ ಎಂದು ಹಣೆ ಚಚ್ಚಿಕೊಂಡಿದ್ದರು. ಜೊತೆಗೆ ಅದನ್ನು ರಿಲೀಸ್ ಮಾಡುವ ಸಮಯ ಇನ್ನೂ ಬಂದಿಲ್ಲ, ಕಾಂಗ್ರೆಸ್ ಪರ ತೀರ್ಪು ನೀಡಿದ ಜನತೆಗೆ ಮುಂದೆ ಇನ್ನಷ್ಟು ಆಘಾತಗಳು ಕಾದಿವೆ, ಅವರಿಗೆ ತಮ್ಮ ತಪ್ಪಿನ ಅರಿವಾಗಬೇಕು, ಸೂಕ್ತ ಸಮಯದಲ್ಲಿ ಅದನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ