AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Narayan: ನಟ, ನಿರ್ದೇಶಕ ಎಸ್ ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಜಾತ್ಯಾತೀತ ಸಿದ್ದಾಂತಗಳು ಇಷ್ಟ ಆಯ್ತು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ. ನಮ್ಮೆಲ್ಲರ ಗುರಿ 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ಪಕ್ಷಕ್ಕಾಗಿ ದುಡಿಯುತ್ತೇನೆ, ಕೊಟ್ಟ ಮಾತಿನಂತೆ ಕೆಲಸ ಮಾಡುತ್ತೇನೆ ಎಂದು ನಾರಾಯಣ್ ಹೇಳಿದ್ದಾರೆ.

S Narayan: ನಟ, ನಿರ್ದೇಶಕ ಎಸ್ ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
TV9 Web
| Edited By: |

Updated on:Mar 16, 2022 | 12:22 PM

Share

ಬೆಂಗಳೂರು: ಕನ್ನಡ ಚಲನಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಎಸ್. ನಾರಾಯಣ್ ಹಾಗೂ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಇಂದು (ಮಾರ್ಚ್ 16) ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಕಳೆದ ಮೂರು ದಶಕಗಳಿಂದ ಸಿನಿಮಾ ಕ್ಷೇತ್ರದಲ್ಲಿ ಕೆಲಸ‌ ಮಾಡಿರುವೆ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ದೊಡ್ಡ ಸ್ಟಾರ್​ಗಳ ಜೊತೆ ಕೆಲಸ ಮಾಡಿರುವೆ. ಸಿನಿಮಾ ಕ್ಷೇತ್ರ ನನಗೆ ಎಲ್ಲವನ್ನೂ ಕೊಟ್ಟಿದೆ. ನನಗೆ ಬಹಳಷ್ಟು ಮಂದಿ ರಾಜಕೀಯ ಯಾಕೆ ಅಂತ ಪ್ರಶ್ನೆ ಮಾಡಿದರು‌. ಆ ಪ್ರಶ್ನೆ ಹಾಗೇ ಇರಲಿ‌ ಮುಂದೆ ಉತ್ತರ ಸಿಗುತ್ತೆ ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಎಸ್. ನಾರಾಯಣ್ ಮಾತನಾಡಿದ್ದಾರೆ.

ನಾನು ಆಯ್ಕೆ‌ ಮಾಡಿಕೊಂಡಿದ್ದು ಕಾಂಗ್ರೆಸ್ ಪಕ್ಷವನ್ನು. ದೇಶಕ್ಕಾಗಿ ಕಾಂಗ್ರೆಸ್ ತ್ಯಾಗ ಬಲಿದಾನ ಎಲ್ಲವನ್ನೂ ಕೊಟ್ಟಿದೆ. ಬಡವನಿಗೆ, ದಲಿತನಿಗೆ, ಹಿಂದುಳಿದವರ ಧ್ವನಿ ಈ ಕಾಂಗ್ರೆಸ್. ಜಾತ್ಯಾತೀತ ಸಿದ್ದಾಂತಗಳು ಇಷ್ಟ ಆಯ್ತು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ. ನಮ್ಮೆಲ್ಲರ ಗುರಿ 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ಪಕ್ಷಕ್ಕಾಗಿ ದುಡಿಯುತ್ತೇನೆ, ಕೊಟ್ಟ ಮಾತಿನಂತೆ ಕೆಲಸ ಮಾಡುತ್ತೇನೆ ಎಂದು ನಾರಾಯಣ್ ಹೇಳಿದ್ದಾರೆ.

ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ಬಹುಮುಖ ಪ್ರತಿಭೆ, ಸರಳ ವ್ಯಕ್ತಿತ್ವದ ನಾರಾಯಣ್ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ. ಈ ಹಿಂದೆ ನಾನು ಒಂದು ದಿನಾಂಕ ನೀಡಿದ್ದೆ. ನಾರಾಯಣ್ ಇಂದೇ ಶುಭದಿನ ಎಂದು ನಿರ್ಧಾರ ಮಾಡಿ ಇಂದೇ ಪಕ್ಷ ಸೇರ್ಪಡೆ ಆಗ್ತಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ವಾಣಿಜ್ಯ ಮಂಡಳಿ ಸೇರಿದಂತೆ ಸಮುದಾಯದ ಸಂಘಟನೆ ಮಾಡಲಿದ್ದಾರೆ. ಇನ್ನೂ ದೊಡ್ಡ ಪಟ್ಟಿ ಇದೆ, ಅರ್ಜಿ ಹಾಕಿಕೊಂಡಿದ್ದಾರೆ, ಟೈಮ್ ಫಿಕ್ಸ್ ಮಾಡಬೇಕಿದೆ ಎಂದು ಹೇಳಿದ್ದಾರೆ.

ಮುಖ್ಯ ಮಂತ್ರಿಗಳು ಯಾರ ಜೊತೆ ಮಾತಾಡ್ತಿದ್ದಾರೆ ಗೊತ್ತಿದೆ. ಉಡುಪಿ ಶಾಸಕರ ಜೊತೆ ಏನ್ ಮಾತಾಡಿದ್ದಾರೆ ಗೊತ್ತಿದೆ. BJP ಅಧ್ಯಕ್ಷರು ತಡ ಮಾಡೋದು ಬೇಡ, ಯಾವ ಶಾಸಕರು ಸಂಪರ್ಕದಲ್ಲಿದ್ದಾರೋ ಬೇಗ ಸೇರ್ಪಡೆ ಮಾಡಿಕೊಳ್ಳಿ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಮುಗಿದೇ ಹೋಯ್ತು. ಧೂಳಿಪಟ ಅಂತ ಬರೆದ್ರು. ಪ್ರಿಯಾಂಕ ಗಾಂಧಿ 200 ಕ್ಕೂ ಹೆಚ್ಚು ಸಭೆ ಮಾಡಿದ್ದಾರೆ. ಪಂಜಾಬ್​ನಲ್ಲಿ ನಮ್ಮ ಅಂತರಿಕ ಕಲಹದಿಂದ ಕೈ ತಪ್ಪಿದೆ. ಬಿ.ಎಸ್. ಯಡಿಯೂರಪ್ಪ, ಮುಖ್ಯ ಮಂತ್ರಿಗಳು ಏನೇ ಮಾತಾಡಲಿ. ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ, ನಮ್ಮ ಕಾಲ ಮೇಲೆ ನಾವು ನಿಲ್ಲಲಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಭಾರೀ ಮುಖಭಂಗ; ಐದೂ ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಸೋನಿಯಾ ಗಾಂಧಿ ಆದೇಶ

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲು ಹಿನ್ನೆಲೆ; ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪರಿಶೀಲನಾ ಸಭೆ

Published On - 12:18 pm, Wed, 16 March 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ